ನ. 7 ರಂದು ಪತ್ರಿಕಾರಂಗದ ಆರು ಸಾಧಕ ಶ್ರೇಷ್ಠರ ಸಂಸ್ಮರಣೆ

ಶತಮಾನೋತ್ತರ ಸಂಸ್ಮರಣೆ: ಉದಯವಾಣಿ-ಎಂಜಿಎಂ ಕಾಲೇಜಿನ ಸಹಯೋಗ ;ಭಾಗಿಯಾಗಲಿದ್ದಾರೆ ಸಿಎಂ ಬೊಮ್ಮಾಯಿ

Team Udayavani, Nov 5, 2022, 10:25 PM IST

 ನ. 7ರಂದು ಪತ್ರಿಕಾರಂಗದ ಆರು ಸಾಧಕ ಶ್ರೇಷ್ಠರ ಸಂಸ್ಮರಣೆ

ಮಣಿಪಾಲ: ಮಣಿಪಾಲದಲ್ಲಿ ಅರಳಿ ವಿವಿಧೆಡೆ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿದ ಹಿರಿಯ ಆರು ಮಂದಿಯ ಜನ್ಮಶತಮಾನೋತ್ತರ ಸಂಸ್ಮರಣೆ ಕಾರ್ಯಕ್ರಮವನ್ನು “ಉದಯವಾಣಿ’ಯು ಎಂಜಿಎಂ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನ. 7ರಂದು ಆಯೋಜಿಸಿದ್ದು ಮಧ್ಯಾಹ್ನ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಿಗೆ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದ್ದು ಜಿಲ್ಲಾಧಿಕಾರಿ ಕೂರ್ಮಾ ರಾವ್‌, ಜಿ.ಪಂ. ಸಿಇಒ ಪ್ರಸನ್ನ ಎಚ್‌. ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಗಣಕ ಲಿಪಿ ತಜ್ಞ ಪ್ರೊ| ಕೆ.ಪಿ.ರಾವ್‌ ಅಧ್ಯಕ್ಷತೆ ವಹಿಸುವರು.

ವಿಮರ್ಶಕ, ನಿವೃತ್ತ ಪ್ರಾಧ್ಯಾಪಕ ಪ್ರೊ| ಮುರಳೀಧರ ಉಪಾಧ್ಯ ಅವರು ಎಸ್‌.ಯು. ಪಣಿಯಾಡಿಯವರ ಕುರಿತು, ಸಂಶೋಧಕ, ನಿವೃತ್ತ ಪ್ರಾಂಶುಪಾಲ ಡಾ| ಅನಿಲ್‌ ಕುಮಾರ್‌ ಶೆಟ್ಟಿಯವರು ಎಂ.ವಿ. ಹೆಗ್ಡೆಯವರ ಕುರಿತು, ಪಾ.ವೆಂ. ಆಚಾರ್ಯ ಟ್ರಸ್ಟ್‌ನ ನಿರ್ವಾಹಕ ವಿಶ್ವಸ್ತೆ ಛಾಯಾ ಉಪಾಧ್ಯರು ಪಾ.ವೆಂ. ಆಚಾರ್ಯರ ಕುರಿತು, ಪ್ರೊ| ಕೆ.ಪಿ. ರಾವ್‌ ಅವರು ಕಮಾಲ್‌ ಹೈದರ್‌ ಕುರಿತು, ಲೇಖಕ, ನಿವೃತ್ತ ಪ್ರಾಧ್ಯಾಪಕ ಡಾ| ಶ್ರೀಕಾಂತ ಸಿದ್ಧಾಪುರ ಅವರು ಬನ್ನಂಜೆ ರಾಮಾಚಾರ್ಯರ ಕುರಿತು, ಸಾಹಿತಿ, ಸಿಂಡಿಕೇಟ್‌ ಬ್ಯಾಂಕ್‌ ನಿವೃತ್ತ ಅಧಿಕಾರಿ ಬೆಳಗೋಡು ರಮೇಶ್‌ ಭಟ್‌ ಅವರು ಬೈಕಾಡಿ ಕೃಷ್ಣಯ್ಯನವರ ಕುರಿತು ಮಾತನಾಡುವರು.

ಮಧ್ಯಾಹ್ನ 1 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಸಚಿವರಾದ ಎಸ್‌. ಅಂಗಾರ, ವಿ. ಸುನಿಲ್‌ ಕುಮಾರ್‌, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕೆ. ರಘುಪತಿ ಭಟ್‌ ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು “ತರಂಗ’ದ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ ವಹಿಸುವರು. ಮಣಿಪಾಲ್‌ ಮೀಡಿಯ ನೆಟ್‌ವರ್ಕ್‌ ಲಿ. ಕಾರ್ಯನಿರ್ವಾಹಕ ಅಧ್ಯಕ್ಷ, ಎಂಜಿಎಂ ಕಾಲೇಜು ಟ್ರಸ್ಟ್‌ ಅಧ್ಯಕ್ಷ ಟಿ. ಸತೀಶ್‌ ಯು. ಪೈ, ಮಣಿಪಾಲ್‌ ಟೆಕ್ನಾಲಜೀಸ್‌ ಕಾರ್ಯನಿರ್ವಾಹಕ ಅಧ್ಯಕ್ಷ ಟಿ. ಗೌತಮ್‌ ಪೈ ಭಾಗವಹಿಸಲಿದ್ದಾರೆ.

ಸಾಧಕ ಶ್ರೇಷ್ಠರು
1937ರಲ್ಲಿ ಮಣಿಪಾಲದಲ್ಲಿ ಎಸ್‌.ಯು. ಪಣಿಯಾಡಿಯವರು ಪ್ರಸ್‌ ಸ್ಥಾಪಿಸಿ “ಅಂತರಂಗ’ ವಾರಪತ್ರಿಕೆಯನ್ನು ಆರಂಭಿಸಿದಾಗ ಪಣಿಯಾಡಿಯವರು ಪ್ರಧಾನ ಸಂಪಾದಕರಾಗಿದ್ದರು. ಕಮಾಲ್‌ ಹೈದರ್‌ ವ್ಯವಸ್ಥಾಪಕ ಸಂಪಾದಕರಾಗಿ, ಮಟ್ಟಾರು ವಿಟಲ್‌ ಹೆಗ್ಡೆ (ಎಂ.ವಿ. ಹೆಗ್ಡೆ), ಪಾಡಿಗಾರು ವೆಂಕಟರಮಣ ಆಚಾರ್ಯ (ಪಾ.ವೆಂ. ಆಚಾರ್ಯ), ಬನ್ನಂಜೆ ರಾಮಾಚಾರ್ಯರು ಉಪಸಂಪಾದಕರಾಗಿ, ಬೈಕಾಡಿ ಕೃಷ್ಣಯ್ಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದರು. ಬಳಿಕ ಪಣಿಯಾಡಿಯವರು ಚೆನ್ನೈಗೆ ಹೋದರೆ, ಕಮಾಲ್‌ ಹೈದರ್‌ ಕೋಲ್ಕತ್ತದಲ್ಲಿ ಕೆಲಕಾಲ ಪತ್ರಕರ್ತರಾಗಿ ದುಡಿದು ದೇಶ ವಿಭಜನೆಗೆ ಮುನ್ನ (1946) ಲಾಹೋರ್‌ಗೆ ಹೋಗಿ ಅಲ್ಲಿ ನೆಲೆ ನಿಂತರು. ಎಂ.ವಿ. ಹೆಗ್ಡೆಯವರು ಮಂಗಳೂರಿನ ನವಭಾರತಕ್ಕೆ ಸೇರಿ ಸಂಪಾದಕರಾದರು.

ಪಾ.ವೆಂ. ಆಚಾರ್ಯರು ಹುಬ್ಬಳ್ಳಿಯಲ್ಲಿ ಕಸ್ತೂರಿ ಮಾಸಪತ್ರಿಕೆಯನ್ನು ಕಟ್ಟಿ ಬೆಳೆಸಿದರು. ಬನ್ನಂಜೆ ರಾಮಾಚಾರ್ಯರು 1970ರಲ್ಲಿ ಉದಯವಾಣಿ ಆರಂಭವಾದಾಗ ಸಂಪಾದಕೀಯ ವಿಭಾಗದ ಮುಖ್ಯಸ್ಥರಾದರು. ಕೃಷ್ಣಯ್ಯನವರು ಅಂದಿನಿಂದ ಕೊನೆಯವರೆಗೂ ಮಣಿಪಾಲ ಪ್ರಸ್‌ ವ್ಯವಸ್ಥಾಪಕರಾಗಿ ಪತ್ರಿಕೆಯನ್ನು ರೂಪಿಸುವಲ್ಲಿ ಸೇವೆ ಸಲ್ಲಿಸಿದರು. ಇವರೆಲ್ಲರೂ ಜನಿಸಿ ಒಂದು ಶತಮಾನ ಕಳೆದಿದೆ. ಇವರ ಶತಮಾನೋತ್ತರ ಸಂಸ್ಮರಣೆಯಲ್ಲಿ ಅವರ ಕೊಡುಗೆಗಳನ್ನು ಸ್ಮರಿಸಿ ನುಡಿನಮನ ಸಲ್ಲಿಸಲಾಗುತ್ತದೆ.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.