Pakistan: ಈಗ ಪಾಕಿಸ್ಥಾನದಲ್ಲೂ ನೋಟು ಅಮಾನ್ಯ ಕ್ರಮ- 5000 ರೂ. ಮೀರಿದ ನೋಟು ನಿಷೇಧ
Team Udayavani, Jan 31, 2024, 12:56 AM IST
ಕರಾಚಿ: ಭಾರತದಲ್ಲಿ ಕಳ್ಳ ನೋಟುಗಳನ್ನು ಎಗ್ಗಿಲ್ಲದೆ ಚಲಾಯಿಸಲು ಯತ್ನಿಸುತ್ತಿರುವ, ಉಗ್ರರನ್ನು ಛೂ ಬಿಡುವ ಪಾಕಿಸ್ಥಾನ ಹದಗೆಟ್ಟಿರುವ ತನ್ನ ಅರ್ಥ ವ್ಯವಸ್ಥೆಗೆ ಸರ್ಜರಿ ಮಾಡಲು ಮುಂದಾಗಿದೆ. ಅದಕ್ಕಾಗಿ ಭಾರತ ಸರಕಾರ 2016ರಲ್ಲಿ ಜಾರಿಗೆ ತಂದಿದ್ದ ನೋಟು ಅಮಾನ್ಯ ನಿಯಮವನ್ನು ನಕಲು ಮಾಡಲು ಮುಂದಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ಥಾನ ಪ್ರಕಾರ ದೇಶದಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚಾಗಿದೆ. 5000 ಪಾಕಿಸ್ಥಾನ ರೂ.ಮತ್ತು ಅದಕ್ಕಿಂತ ಹೆಚ್ಚಿನ ಮುಖ ಬೆಲೆಯ ನೋಟುಗಳನ್ನು ನಿಷೇಧಿಸಲು ತೀರ್ಮಾನಿಸಲಾಗಿದೆ. ಜನರಿಗೆ ತೊಂದರೆ ಆಗದಂತೆ ಅನುಷ್ಠಾನಗೊಳಿಸಲಾಗುತ್ತದೆ ಎನ್ನುವುದು ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ಥಾನದ ಹೇಳಿಕೆ.
ತಜ್ಞರ ಅಚ್ಚರಿ: ಅಗತ್ಯ ವಸ್ತುಗಳಿಗೆ ಬೆಲೆ ಏರಿಕೆ ಆಗಿರುವಾಗ ನೋಟು ಅಮಾನ್ಯ ಕ್ರಮ ಹೇಗೆ ನೆರವಾದೀತು ಎಂದು ಆ ದೇಶದ ಆರ್ಥಿಕ ತಜ್ಞರು ಪ್ರಶ್ನಿಸಿದ್ದಾರೆ. ಹಣದ ಹರಿವು ಇಲ್ಲದಿದ್ದರೆ ಪಾಕಿಸ್ಥಾನದ ಅರ್ಥ ವ್ಯವಸ್ಥೆ ಇನ್ನೂ ಕುಸಿದು ಹೋಗಿ ಅನಾಹುತಗಳು ಉಂಟಾಗಲಿದೆ ಎಂದು ಅವರು ಸರಕಾರಕ್ಕೆ ಎಚ್ಚರಿ ಕೆಯನ್ನೂ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.