BJP: ವರಿಷ್ಠರ ಜತೆ ಮಾತಾಡಲು ಈಗ ಕಾಲ ಪಕ್ವವಾಗಿದೆ- ವಿ. ಸೋಮಣ್ಣ
Team Udayavani, Dec 16, 2023, 11:31 PM IST
ಮೈಸೂರು: ಪಕ್ಷದ ವರಿಷ್ಠರ ಜತೆ ಮಾತಾ ಡಲು ಈಗ ಕಾಲ ಪಕ್ವವಾಗಿದೆ. ಡಿ.19ರ ಬಳಿಕ ನಾವು ನಾಲ್ಕೈದು ಮಂದಿ ವರಿಷ್ಠರನ್ನು ಭೇಟಿ ಮಾಡುತ್ತೇವೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ. 22ರೊಳಗೆ ವರಿಷ್ಠರನ್ನು ಭೇಟಿ ಮಾಡಿ ಎಲ್ಲ ವಿಚಾರ ಗಳನ್ನೂ ಚರ್ಚಿಸುತ್ತೇನೆ. ವರಿಷ್ಠರು ಏನು ಹೇಳು ತ್ತಾರೋ ಹಾಗೆ ನಡೆದುಕೊಳ್ಳುತ್ತೇನೆ ಎಂದರು.
ಕಾರ್ತಿಕ ಮಾಸ ಮುಗಿದು ಈಗ ಧನುರ್ಮಾಸ ಆರಂಭವಾಗುತ್ತಿದೆ ಎಂದು ಮಾರ್ಮಿಕವಾಗಿ ನುಡಿದ ಸೋಮಣ್ಣ, ದಿಲ್ಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಬಂದ ಬಳಿಕ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದರು. ಕೆಲವು ಬಿಜೆಪಿ ನಾಯಕರ ಸೋಲಿಗೆ ಯಾರು ಕಾರಣ ಎಂಬ ಬಗ್ಗೆ ನೇರವಾಗಿ ಹೇಳದ ಸೋಮಣ್ಣ, ವಿಧಾನಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಏನು ಕಾರಣ ಎಂದು ಎಲ್ಲರಿಗೂ ಗೊತ್ತಿದೆ. ಪದೇಪದೆ ಅದೇ ವಿಚಾರವನ್ನು ಮಾತನಾಡುವುದು ಬೇಡ ಎಂದು ಹೇಳಿದರು.
ನಾನು ಲೋಕಸಭಾ ಚುನಾವಣೆ ಟಿಕೆಟ್ ಆಕಾಂಕ್ಷಿಯಲ್ಲ. ಆದರೆ ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ ಎಂದರು.
ಕಾಂಗ್ರೆಸ್ ಸೇರುತ್ತಾರೆಂದು ಅರ್ಥವಲ್ಲ
ಕಾಂಗ್ರೆಸ್ ಶಾಸಕರಿಗೆ ಆಯೋಜಿಸಿದ್ದ ಔತಣಕೂಟ ದಲ್ಲಿ ಬಿಜೆಪಿಯ ಕೆಲವು ಶಾಸಕರು ಭಾಗಿಯಾಗಿ ರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಟಾರ್‌ಗೆ ಔತಣ ಕೂಟಕ್ಕೆ ಆಹ್ವಾನ ನೀಡಿದ್ದರು. ಹಾಗಾಗಿ ಅವರು ಹೋಗಿದ್ದಾರೆ. ಇಬ್ಬರೂ ಈ ಮೊದಲು ಕಾಂಗ್ರೆಸ್‌ನಲ್ಲಿ ದ್ದವರು. ಊಟಕ್ಕೆ ಹೋದಾಕ್ಷಣ ಅವರು ಕಾಂಗ್ರೆಸ್‌ಗೆ ಹೋಗುತ್ತಾರೆಂದು ಅರ್ಥವಲ್ಲ ಎಂದರು.
ಬಿಜೆಪಿ ತೊರೆಯುತ್ತೀರಾ ಎಂಬ ಪ್ರಶ್ನೆಗೆ, ಎಲ್ಲದಕ್ಕೂ ಕಾಲ ಕೂಡಿ ಬರಬೇಕು. ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎನ್ನುವ ಮೂಲಕ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.