Bihar: ಬಿಹಾರದಲ್ಲಿ ಈಗ ರಜೆ ವಿವಾದ
Team Udayavani, Nov 29, 2023, 12:53 AM IST
ಪಾಟ್ನಾ:ಬಿಹಾರದಲ್ಲಿ ಮುಂದಿನ ವರ್ಷದ ರಜೆಗಳ ಪಟ್ಟಿಯಲ್ಲಿ ಹಿಂದೂಗಳ ಹಬ್ಬಕ್ಕೆ ರಜೆ ಕಡಿತಗೊಳಿಸಿ, ಮುಸ್ಲಿಂ ಉತ್ಸವಗಳಿಗೆ ಹೆಚ್ಚಿನ ರಜೆ ನೀಡಲಾಗಿದೆ ಎಂಬ ವಿಚಾರ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಇಂಥ ಕ್ರಮ ಕೈಗೊಳ್ಳುವ ಮೂಲಕ ಬಿಹಾರದಲ್ಲಿ ಇಸ್ಲಾಮೀಕರಣಗೊಳಿಸಲಾಗುತ್ತಿದೆ ಮತ್ತು ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ತುಷ್ಟೀಕರಣಗೊಳಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಶಿಕ್ಷಣ ಇಲಾಖೆ ಸೋಮವಾರ ಹೊರಡಿಸಿದ್ದ 2024ರ ಪಟ್ಟಿಯ ಪ್ರಕಾರ ಶ್ರೀಕೃಷ್ಣ ಜನ್ಮಾಷ್ಠಮಿ, ರಕ್ಷಾಬಂಧನ, ರಾಮನವಮಿ, ಶಿವರಾತ್ರಿ, ವಸಂತ ಪಂಚಮಿ, ಜೀವಿತಪುತ್ರಿಕಾ ಹಬ್ಬಗಳಿಗೆ ನೀಡಲಾಗುತ್ತಿದ್ದ ರಜೆ ರದ್ದುಗೊಳಿಸಲಾಗಿದೆ. ಮುಸ್ಲಿಂ ಸಮುದಾಯದವರು ಹೆಚ್ಚು ಇರುವ ಸ್ಥಳಗಳಲ್ಲಿ ಶುಕ್ರವಾರ ರಜೆ ನೀಡುವ ಬಗ್ಗೆಯೂ ಸೂಚಿಸಲಾಗಿದೆ. ಗಾಂಧಿಜಯಂತಿಯಂದು ನೀಡಲಾಗುವ ರಜೆ ರದ್ದುಪಡಿಸಲಾಗಿದೆ. ಈ ದುಲ್ ಫಿತರ್ (ರಂಜಾನ್)ಗೆ 3 ದಿನ ರಜೆ ನೀಡಲಾಗಿದೆ.
ಬಿಜೆಪಿ ನಾಯಕರು ಹಿಂದಿ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಮುಂದಿನ ವರ್ಷದ ರಜೆಯ ಪಟ್ಟಿಯ ವರದಿಗಳ ಕ್ಲಿಪ್ಪಿಂಗ್‌ಗಳನ್ನು ಅಪ್‌ಲೋಡ್ ಮಾಡಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿªರೆ. ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ವಿಡಿಯೋ ಸಂದೇಶದಲ್ಲಿ “ಬಿಹಾರ ಸಿಎಂ ತುಷ್ಟೀಕರಣದ ಮುಖ್ಯಸ್ಥ. ಸರ್ಕಾರದ ನಿರ್ಧಾರ ಹಿಂದೂ ವಿರೋಧಿ ಧೋರಣೆ ತೋರಿಸುತ್ತದೆ’ ಎಂದು ಬರೆದುಕೊಂಡಿದ್ದಾರೆ. ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ “ಪಟ್ಟಿಯನ್ನು ತಕ್ಷಣ ವಾಪಸ್ ಪಡೆಯಬೇಕು. ಇದು ಹಿಂದೂ ವಿರೋಧಿ ಎಂದಿದ್ದಾರೆ. ಕೇಂದ್ರ ಸಚಿವ ನಿತ್ಯಾನಂದ ರಾಯ್, ಗಿರಿರಾಜ್ ಸಿಂಗ್ ಸೇರಿದಂತೆ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.