ಈಗ ರಾಜ್ಯದಲ್ಲಿ ಶೂನ್ಯ ಒಮಿಕ್ರಾನ್ ಪ್ರಕರಣ
Team Udayavani, Dec 16, 2021, 6:10 AM IST
ಬೆಂಗಳೂರು: ದೇಶದ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗುವ ಮೂಲಕ ಸುದ್ದಿಯಾಗಿದ್ದ ಕರ್ನಾಟಕ ಈಗ “ಒಮಿಕ್ರಾನ್ ಶೂನ್ಯ’ವಾಗಿದೆ.
ದೇಶದ ಮೊದಲ ಒಮಿಕ್ರಾನ್ ಸೋಂಕಿತರಲ್ಲಿ ಓರ್ವರಾದ ಬೆಂಗಳೂರಿನ ವೈದ್ಯರನ್ನು ಬುಧವಾರ (ಡಿ.15) ಬಿಡುಗಡೆ ಮಾಡಲಾಗಿದೆ.
ಡಿ.1ರಂದು ದಕ್ಷಿಣ ಆಫ್ರಿಕದಿಂದ ಬೆಂಗಳೂರಿಗೆ ಆಗಮಿಸಿದ್ದ ಒಮಿಕ್ರಾನ್ ಸೋಂಕಿತನನ್ನು 24 ಗಂಟೆಯೊಳಗಿನ ಆರ್‌ಟಿಪಿಸಿಆರ್ ವರದಿ ನೆಗೆಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಬಿಡುಗಡೆ ಮಾಡಲಾಗಿತ್ತು. ಇದರಿಂದ ಪ್ರಸ್ತುತ ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣ ಸಂಖ್ಯೆ ಶೂನ್ಯಕ್ಕೆ ತಲುಪಿದೆ.
ಇನ್ನೊಮ್ಮೆ ಪರೀಕ್ಷೆ
ಈಗ ಇಬ್ಬರನ್ನೂ ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಇಬ್ಬರು ಮುಂದಿನ 6 ದಿನಗಳ ಅನಂತರ ಮತ್ತೊಮ್ಮೆ ಸ್ಲ್ಯಾಬ್ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಗಾಗಿ, ಕೊರೊನಾ ನೆಗೆಟಿವ್ ವರದಿ ಬಂದ ಬಳಿಕವಷ್ಟೇ ಹೋಮ್ ಕ್ವಾರಂಟೈನ್‌ನಿಂದ ಬಿಡುಗಡೆ ಸಿಗಲಿದೆ.
ಇದನ್ನೂ ಓದಿ:ರಾಜ್ಯದಲ್ಲಿ 317 ಪಾಸಿಟಿವ್ ಪತ್ತೆ: ಸೋಂಕಿನ ಪ್ರಮಾಣ ಹೆಚ್ಚಳ
ಡಿ. 2ರಂದು ರಾಜ್ಯದಲ್ಲಿ ಇಬ್ಬರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿತ್ತು. ಆ ಪೈಕಿ ಬೆಂಗಳೂರಿನ ವೈದ್ಯರು ಒಬ್ಬರು. ಯಾವುದೇ ವಿದೇಶಿ ಪ್ರಯಾಣ ಮಾಡಿರದ ಈ ವೈದ್ಯ ನಗರದಲ್ಲಿ ನ. 18ರಂದು ನಡೆದ ವೈದ್ಯರ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಇದಾದ ನಂತರ ನ. 22ರಂದು ಅವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಪರೀಕ್ಷೆ ಸಮಯ ಸಿಟಿ ವ್ಯಾಲ್ಯು ಕಡಿಮೆ ಇದ್ದುದರಿಂದ ಜಿನೋಮಿಕ್ ಸಿಕ್ವೆನ್ಸಿಂಗ್ ಕಳುಹಿಸಲಾಗಿತ್ತು. ಈ ವೇಳೆ ರೂಪಾಂತರಿ ತಳಿ ದೃಢಪಟ್ಟಿತ್ತು. ಡಿ.7ರಂದು ವ್ಯಕ್ತಿ ಸೋಂಕಿನಿಂದ ಚೇತರಿಸಿಕೊಂಡರು ಅನ್ನುವಷ್ಟರಲ್ಲಿ ಮತ್ತೆ ಪಾಸಿಟಿವ್ ಬಂದಿತ್ತು. ಡಿ.14ರಂದು ಮತ್ತೆ ವ್ಯಕ್ತಿಯ ಸ್ಲ್ಯಾಬ್ ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ವರದಿಯಲ್ಲಿ ವ್ಯಕ್ತಿಗೆ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಹೋಮ್ ಕ್ವಾರಂಟೈನ್ ಮಾಡಲಾಗಿದೆ.ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಸಹ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು.
ಡಿ.1ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ 34ವರ್ಷದ ವ್ಯಕ್ತಿಯಲ್ಲಿ ಡಿ.3ರಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಡಿ.12ರಂದು ಬಂದ ಜಿನೋಮಿಕ್ ಸಿಕ್ವೆನ್ಸಿಂಗ್ ವರದಿ ನೆಗೆಟಿವ್ ಬಂದಿತ್ತು. ಬೌರಿಂಗ್ ಆಸ್ಪತ್ರೆಯಲ್ಲಿ ಐಸೋಲೇಶನ್‌ಗೊಳಿಸಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ, ಹೋಮ್ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.