ಉದ್ಯೋಗ “ಖಾತ್ರಿ’ ನಿರೀಕ್ಷೆಯಲ್ಲಿ ಅನ್ನದಾತ
ನರೇಗಾದಡಿ ಭತ್ತ ಸೇರ್ಪಡೆಗೆ ರಾಜ್ಯ ಸರಕಾರದ ಒಲವು
Team Udayavani, May 29, 2020, 6:15 AM IST
ಸಾಂದರ್ಭಿಕ ಚಿತ್ರ.
ಮಂಗಳೂರು: ಮುಂಗಾರು ಹತ್ತಿರವಾಗುತ್ತಿರುವಂತೆ ಅನ್ನದಾತನಿಗೆ ಸಂತೋಷದ ಸಂಗತಿಯಿದೆ. ಭತ್ತದ ಬೆಳೆಯು ನರೇಗಾ ಯೋಜನೆಯಡಿ ಸೇರಿಕೊಳ್ಳುವ ಸಾಧ್ಯತೆಗಳಿವೆ!
ಕೃಷಿಕರ ಬದುಕಿಗೆ ವಿವಿಧ ರೀತಿಯಲ್ಲಿ ಬೆಂಗಾವಲಾಗಿ ನಿಂತಿರುವ ನರೇಗಾದಡಿ ಕೃಷಿ ಕ್ಷೇತ್ರದಲ್ಲಿ ಹಲವು ಮಹತ್ವದ ಕೆಲಸಗಳು ನಡೆದಿವೆ. ಅದನ್ನೀಗ ಭತ್ತದ ಬೆಳೆಗೂ ವಿಸ್ತರಿಸುವ ಬಗ್ಗೆ ರಾಜ್ಯ ಸರಕಾರ ಆಸಕ್ತಿ ತೋರಿದೆ. ಭತ್ತ ಬೆಳೆಗಾರರಿಗೆ ಕಾರ್ಮಿಕರ ಕೊರತೆ ಹಾಗೂ ಕಾರ್ಮಿಕರಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ ಎಂಬ ಗಂಭೀರ ವಿಚಾರಕ್ಕೆ ಮುಕ್ತಿ ನೀಡುವ ನಿಟ್ಟಿನಲ್ಲಿ ಈ ಚಿಂತನೆ ಮಾಡಲಾಗಿದೆ.
ಮಂಗಳೂರಿಗೆ ಇತ್ತೀಚೆಗೆ ಭೇಟಿ ನೀಡಿದ್ದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಇತರರು ಭತ್ತದ ಬೆಳೆಯನ್ನು ನರೇಗಾದಡಿ ಸೇರಿಸುವಂತೆ ಮನವಿ ಮಾಡಿದ್ದರು. ಅದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಈ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲಾಗುವುದು ಎಂದಿದ್ದಾರೆ.
ಹೊಸ ಬದುಕು ಸಾಧ್ಯ
ಭತ್ತದ ಬೆಳೆಗೆ ಬಹಳಷ್ಟು ಅವಕಾಶವಿದೆ. ಹಡಿಲು ಗದ್ದೆಗಳು ಕೂಡ ಇವೆ. ಭತ್ತದ ಬೆಳೆಯ ಮೂಲಕ ಹೊಸ ಬದುಕು ಕಟ್ಟಿಕೊಳ್ಳಲು ಸಾಧ್ಯ. ಆದರೆ ಕೆಲವು ಸಲ ಕಾರ್ಮಿಕರು ಸಿಗುತ್ತಿಲ್ಲ ಎಂಬ ನೆಪದಿಂದ ಅಥವಾ ಕಾರ್ಮಿಕರಿಗೆ ಸಂಬಳ ನೀಡುವ ಹೊರೆಯನ್ನು ತಪ್ಪಿಸಲು ಭತ್ತದಿಂದ ಕೆಲವು ಕೃಷಿಕರು ವಿಮುಖರಾಗಿದ್ದಾರೆ. ಸದ್ಯ ನರೇಗಾ ಯೋಜನೆಯಡಿ ಭತ್ತದ ಕೃಷಿಯನ್ನೂ ಜೋಡಿಸುವ ಕಾರ್ಯಕ್ಕೆ ರಾಜ್ಯ ಸರಕಾರ ಮನಸ್ಸು ಮಾಡಿದ್ದು, ಕೇಂದ್ರದ ಜತೆಗೆ ಮಾತುಕತೆ ನಡೆಸುವ ಹಂತದಲ್ಲಿದೆ ಎನ್ನುತ್ತಾರೆ ಕೃಷಿಕರೂ ಆಗಿರುವ ಶಾಸಕ ರಾಜೇಶ್ ನಾೖಕ್.
ಭತ್ತದ ಬೆಳೆ ಪ್ರಮಾಣ ಕುಸಿತ
ಕೃಷಿ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ಕರಾವಳಿಯಲ್ಲಿ ಭತ್ತ ಬೆಳೆಯುವ ಪ್ರದೇಶ ನಿರಂತರವಾಗಿ ಇಳಿಕೆಯಾಗುತ್ತಿದೆ. ಆರು ವರ್ಷಗಳ ಹಿಂದೆ ದ.ಕ. ಜಿಲ್ಲೆಯಲ್ಲಿ 34,000 ಹೆಕ್ಟೇರ್‌ನಲ್ಲಿ ಭತ್ತ ಬೆಳೆಯುತ್ತಿದ್ದರೆ 2018-19ರಲ್ಲಿ 26,560 ಹೆಕ್ಟೇರ್‌ಗೆ ಕುಸಿದಿದೆ. ಉಡುಪಿ ಜಿಲ್ಲೆಯಲ್ಲಿ 2007ರಲ್ಲಿ 51,350 ಹೆಕ್ಟೇರ್ ಪ್ರದೇಶದಲ್ಲಿದ್ದ ಭತ್ತದ ಬೆಳೆ 2018-19ರಲ್ಲಿ 36,000 ಹೆಕ್ಟೇರ್‌ಗೆ ಇಳಿದಿದೆ.
ನರೇಗಾ ಯೋಜನೆಯಡಿ ಭತ್ತದ ಕೃಷಿಯನ್ನೂ ಸೇರಿಸಬೇಕು ಎಂಬ ಬೇಡಿಕೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವರ ಗಮನಕ್ಕೆ ಈ ವಿಚಾರವನ್ನು ತರಲಾಗಿದೆ. ಅವರು ಈ ಬಗ್ಗೆ ಕೇಂದ್ರ ಸರಕಾರಕ್ಕೆ ಪತ್ರ ಬರೆದು ನರೇಗಾದಡಿ ಭತ್ತ ಸೇರಿಸುವ ಕುರಿತಂತೆ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಭತ್ತದ ಕೃಷಿ ನರೇಗಾದಡಿ ಸೇರಿದರೆ ಅನ್ನದಾತರಿಗೆ ಬಹಳಷ್ಟು ಅನುಕೂಲವಾಗಲಿದೆ.
– ಬಿ.ಸಿ. ಪಾಟೀಲ್,
ಕೃಷಿ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.