Sullia: ಅಡಿಕೆ ಹಳದಿ ರೋಗ- ಕೃಷಿಕ ಆತ್ಮಹತ್ಯೆ
Team Udayavani, Jan 5, 2024, 12:04 AM IST
ಸುಳ್ಯ: ಔಷಧ ಸಿಂಪಡಿಸಿದರೂ ಅಡಿಕೆ ಹಳದಿ ರೋಗ ನಿಯಂತ್ರಣಕ್ಕೆ ಸಿಗದ ಕಾರಣ ನೊಂದು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ.
ಆಲೆಟ್ಟಿ ಗ್ರಾಮದ ಬಡ್ಡಡ್ಕ ಚಳ್ಳಂಗಾರ್ ರಾಮಣ್ಣ ಅವರ ಪುತ್ರ ಜಗದೀಶ್ (56) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಜಗದೀಶ್ ಜ.3 ರಂದು ಮನೆಯಿಂದ ಸುಳ್ಯಕ್ಕೆಂದು ಹೋದವರು ಮನೆಗೆ ಮರಳಿರಲಿಲ್ಲ. ಜ.4ರಂದು ಹುಡುಕಾಡಿದ ವೇಳೆ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ಅವರು ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಯಿತು. ಮೃತರ ಪುತ್ರ ನೀಡಿದ ದೂರಿನಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷಿಕರಾಗಿದ್ದ ಜಗದೀಶ್ ಹೊಟ್ಟೆನೋವಿನಿಂದಲೂ ಬಳಲುತ್ತಿದ್ದರು. ಒಂದು ವರ್ಷದಿಂದ ತೋಟಕ್ಕೆ ಹಳದಿರೋಗ ಬಂದಿದ್ದು, ಎಷ್ಟೇ ಔಷಧ ಸಿಂಪಡಿಸಿದರೂ ನಿಯಂತ್ರಣಕ್ಕೆ ಬಂದಿರಲಿಲ್ಲ. ಇದರಿಂದಾಗಿ ಭವಿಷ್ಯದ ಬಗ್ಗೆ ಚಿಂತೆಗೀಡಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್.ರಾಜಣ್ಣ
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.