ಮಂಗಳೂರಲ್ಲಿ ಚುನಾವಣಾ ಅಕ್ರಮ ತಡೆಗೆ ಅಧಿಕಾರಿ ನೇಮಕ
Team Udayavani, Mar 25, 2023, 5:17 PM IST
ಮಂಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮಂಗಳೂರಿನ ಆದಾಯ ತೆರಿಗೆ ಉಪ ನಿರ್ದೇಶಕ ಮಂಜುನಾಥ್ ಎಚ್.ಎಸ್. ಅವರನ್ನು ಚುನಾವಣಾ ಅಕ್ರಮ ತಡೆಗಟ್ಟುವ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ಚುನಾವಣೆಯನ್ನು ಸುಗಮ, ಮುಕ್ತ ಹಾಗೂ ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣಾ ಅಕ್ರಮಗಳ ಬಗ್ಗೆ ಇವರು ನಿಗಾ ವಹಿಸಲಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಅಕ್ರಮ ಹಣ ಸಾಗಾಟ, ಅಕ್ರಮ ವಸ್ತುಗಳ ಸಾಗಾಟ ಮತ್ತು ದಾಸ್ತಾನುಗಳು ಹಾಗೂ ಚುನಾವಣಾ ಪ್ರಚೋದನೆಗೆ ಸಂಬಂಧಿಸಿದಂತೆ ಇತರ ಅಕ್ರಮಗಳು ಕಂಡುಬಂದಲ್ಲಿ ಸಾರ್ವಜನಿಕರು ಮಂಜುನಾಥ್ ಎಚ್.ಎಸ್. ಅವರ ಮೊಬೈಲ್ ಸಂಖ್ಯೆ 9353341788 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.