![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 27, 2021, 3:53 PM IST
ಜಿಸಿಬಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಿ. ರಾಮಾಂಜಿನಿ ಅವರು ಕಥೆ ಬರೆದು ನಿರ್ಮಿಸುತ್ತಿರುವ “ಓ ಮೈ ಲವ್’ ಚಿತ್ರದ ಟೈಟಲ್ ಸಾಂಗ್ ಹಾಗೂ ಮಾತಿನ ಭಾಗದ ಚಿತ್ರೀಕರಣವನ್ನು ಅಕ್ಟೋಬರ್‌ನಿಂದ ಕಾಶ್ಮೀರದ ಸುಂದರ ತಾಣಗಳಲ್ಲಿ ನಡೆಸಲು ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದೆ. ಈ ಚಿತ್ರವನ್ನು ಸ್ಮೈಲ್ ಶ್ರೀನು ನಿರ್ದೇಶಿಸುತ್ತಿದ್ದಾರೆ.
ಇದೇ 30ರಿಂದ ಹನುಮಗಿರಿ ಬೆಟ್ಟ, ರಾಮನಗರ, ಚನ್ನಪಟ್ಟಣ, ನಾಗರಬಾವಿ, ಹೆಚ್.ಎಂ.ಟಿ.ಗ್ರೌಂಡ್, ಯೂನಿವರ್ಸಿಟಿ ರಸ್ತೆಯಲ್ಲಿ ಫೈಟ್, ಚೇಸಿಂಗ್ ದೃಶ್ಯಗಳ ಚಿತ್ರೀಕರಣ ನಡೆಯಲಿದೆ.
ಚಿತ್ರದ ಬಗ್ಗೆ ಮಾತನಾಡುವ ಶ್ರೀನು, ಇದೊಂದು ರೊಮ್ಯಾಂಟಿಕ್ ಲವ್‌ಸ್ಟೋರಿ. ಹಾಗಂತ ಕೇವಲ ಅಷ್ಟಕ್ಕೇ ಸೀಮಿತವಾಗಿಲ್ಲ. ಇದರ ಜೊತೆಗೆ ಫ್ಯಾಮಿಲಿ ಸೆಂಟಿಮೆಂಟ್, ಆ್ಯಕ್ಷನ್ ಕೂಡಾ ಇದ್ದು, ಚಿತ್ರ ಅದ್ಧೂರಿಯಾಗಿ ತಯಾರಾಗಲಿದೆ. ಈ ಹಿಂದೆ ಈ ತರಹದ ಲವ್‌ಸ್ಟೋರಿ ಬಂದಿಲ್ಲ ಎನ್ನುವುದು ಶ್ರೀನು ಮಾತು. ಚಿತ್ರದಲ್ಲಿ ಕೀರ್ತಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಖಡಕ್ ವಿಲನ್ ಆಗಿ ದೇವ್ ಗಿಲ್ ನಟಿಸುತ್ತಿದ್ದಾರೆ. ಹಿರಿಯ ನಿರ್ದೇಶಕ ಎಸ್.ನಾರಾಯಣ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.
ಸ್ಮೈಲ್ ಶ್ರೀನು ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಇತ್ತೀಚೆಗೆ ಬೆಂಗಳೂರಿನ ಮಿನರ್ವ ಮಿಲ್ ಆವರಣದಲ್ಲಿ ಅದ್ಧೂರಿ ವೆಚ್ಚದಲ್ಲಿ ನಿರ್ಮಿಸಿದ ಸೆಟ್‌ನಲ್ಲಿ ಸಾಹಸ ಸನ್ನಿವೇಶಗಳನ್ನು ಸೆರೆಹಿಡಿಯುವುದರೊಂದಿಗೆ ಎರಡನೇ ಹಂತದ ಚಿತ್ರೀಕರಣವನ್ನು ಪೂರೈಸಿತ್ತು. ಈಗ ಮೂರನೇ ಹಂತಕ್ಕೆ ಸಿದ್ಧವಾಗಿದೆ. ಚಿತ್ರದ ಬಗ್ಗೆ ಮಾತನಾಡುವ ಸ್ಮೈಲ್ ಶ್ರೀನು, “ಚಿತ್ರೀಕರಣವಾಗಿರುವ ಭಾಗವನ್ನು ನೋಡಿ ಇಡೀ
ನಮ್ಮ ತಂಡ ಖುಷಿಯಾಗಿದೆ. ಮಾಡಿದ ಕೆಲಸದ ಬಗ್ಗೆ ನಮಗೂ ಸಮಾಧಾನವಿದೆ. ಇದೊಂದು ಫ್ಯಾಮಿಲಿ ಡ್ರಾಮಾವಾಗಿ ಎಲ್ಲರಿಗೂ ಇಷ್ಟವಾಗಲಿದೆ’ ಎನ್ನುತ್ತಾರೆ. ಚಿತ್ರದಲ್ಲಿ ಅಕ್ಷಿತ್ ಶಶಿಕುಮಾರ್ ನಾಯಕರಾಗಿದ್ದು, ಕೀರ್ತಿ ಕಲ್ಕೆರೆ ನಾಯಕಿ. ಉಳಿದಂತೆ ಎಸ್ .ನಾರಾಯಣ್, ಸಂಗೀತ, ಸುಂದರಶ್ರೀ, ಭಾಗ್ಯಶ್ರೀ ಪೃಥ್ವಿರಾಜ್ ನಟಿಸುತ್ತಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.