ಒಮಿಕ್ರಾನ್‌ : 34 ಮೊಬೈಲ್‌ ತಂಡ ರಚನೆ : ಶೀಘ್ರವೇ ಇನ್ನು ಆರು ತಂಡ ರಚನೆ

Team Udayavani, Jan 18, 2022, 3:57 PM IST

ಒಮಿಕ್ರಾನ್‌ : 34 ಮೊಬೈಲ್‌ ತಂಡ ರಚನೆ  : ಶೀಘ್ರವೇ ಇನ್ನು ಆರು ತಂಡ ರಚನೆ

ಹುಬ್ಬಳ್ಳಿ : ಕೋವಿಡ್‌-19ರ ಒಮಿಕ್ರಾನ್‌ ನಿಯಂತ್ರಿಸಲು ಮನೆ ಮನೆಗೆ ತೆರಳಿ ಪರಿಶೀಲಿಸಲು ಹಾಗೂ ರೋಗದ ಲಕ್ಷಣಗಳು ಕಂಡು ಬಂದವರಿಗೆ ರೋಗನಿರೋಧಕ ಹಾಗೂ ವಿಟಾಮಿನ್‌ ಮಾತ್ರೆ ಕೊಡಲು ಆರೋಗ್ಯ ಸಿಬ್ಬಂದಿಯುಳ್ಳ 34 ಮೊಬೈಲ್‌ ತಂಡ ಹು-ಧಾದಲ್ಲಿ ರಚಿಸಲಾಗಿದೆ. ಶೀಘ್ರವೇ ಇನ್ನಾರು ತಂಡ ರಚಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಬಸನಗೌಡ ಕರಿಗೌಡರ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್‌ ತಡೆಗಟ್ಟಲು ಈಗಾಗಲೇ ಹುಬ್ಬಳ್ಳಿಯಲ್ಲಿ 28, ಧಾರವಾಡದಲ್ಲಿ 6 ಮೊಬೈಲ್‌ ತಂಡಗಳು ಕಾರ್ಯ ನಿರ್ವಹಿಸುತ್ತಿವೆ.
ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ನಿಯಂತ್ರಿಸಲು ಕೆಲ ದಿನಗಳಲ್ಲಿ ನವಲಗುಂದ, ಕಲಘಟಗಿ, ಕುಂದಗೋಳಕ್ಕೆ ತಲಾ ಒಂದು ಮೊಬೈಲ್‌ ತಂಡವನ್ನು ವ್ಯಾನ್‌ ಸಮೇತ ರಚಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ರವಿವಾರ ಹೊಸದಾಗಿ 634 ಸಕ್ರಿಯವಾಗಿವೆ. 78 ಬಿಡುಗಡೆ ಮಾಡಲಾಗಿದೆ. ಸದ್ಯ ಸಕ್ರಿಯವಾಗಿ 2,476 ಪ್ರಕರಣಗಳಿವೆ. 111 ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಕೋವಿಡ್‌ ಕೇರ್‌
ಸೆಂಟರ್‌ನಲ್ಲಿ 44 ಜನ ದಾಖಲಾಗಿದ್ದಾರೆ. ಹೋಮ್‌ ಐಸೋಲೇಷನ್‌ದಲ್ಲಿ 2,321 ಜನ ಇದ್ದಾರೆ. ಐಸಿಯುದಲ್ಲಿ ಐವರು ದಾಖಲಾಗಿದ್ದಾರೆ. ಒಮಿಕ್ರಾನ್‌ ಪ್ರಕರಣದಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಿದೆ. ಕೋವಿಡ್‌-19 ಆರಂಭವಾದಾಗಿನಿಂದ ಇಲ್ಲಿಯವರೆಗೆ 64,537 ಪ್ರಕರಣಗಳಿದ್ದು, 60,740 ಡಿಸಾcರ್ಜ್‌ ಆಗಿವೆ ಎಂದರು.

ಧಾರವಾಡ ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ಶಹರ ಪ್ರದೇಶದಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಇಲ್ಲಿ ಒತ್ತಡ ಹೆಚ್ಚಾಗುತ್ತಿದೆ. ಕಾರಣ ಶಹರ ಪ್ರದೇಶಕ್ಕೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಕೋವಿಡ್‌-19ರ ಮೂರನೇ ಅಲೆ ಮೊದಲಿನ ಎರಡನೆ ಅಲೆಯಷ್ಟು ಪರಿಣಾಮಕಾರಿ ಆಗಿಲ್ಲ. ಪ್ರಕರಣಗಳು ಹೆಚ್ಚಾಗುತ್ತಿವೆ ವಿನಃ ಸಾವು-ನೋವುಗಳಿಲ್ಲ. ಲಕ್ಷಣಗಳು ಗಂಭೀರವಾಗಿಲ್ಲ. ಜ್ವರ, ನೆಗಡಿ, ಕೆಮ್ಮು ಸಾಮಾನ್ಯವಾಗಿದೆ. ಮೊದಲಿನ ಅಲೆಗಳಿಗಿಂತ ಇದರ ಪರಿಣಾಮ ತೀರಾ ಕಡಿಮೆ ಇದೆ. ಒಇಕ್ರಾನ್‌ ನಿಯಂತ್ರಿಸಲು ಜನರ ಸಹಕಾರವು ಮುಖ್ಯ. ಯಾರಿಗಾದರೂ ರೋಗದ
ಲಕ್ಷಣ ಕಂಡು ಬಂದರೆ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲವೆ ತಪಾಸಣಾ ಕೇಂದ್ರಕ್ಕೆ ತೆರಳಿ ಕಫ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಡಿಎಚ್‌ಒ ಮನವಿ ಮಾಡಿದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.