Kannada: ನ.1ರಂದು ” ಕನ್ನಡಾಂಬೆಗೆ ನುಡಿ ನಮನ”
Team Udayavani, Oct 20, 2023, 11:55 PM IST
ಬೆಂಗಳೂರು: “ಕರ್ನಾಟಕ ಸಂಭ್ರಮ-50′ ಆಚರಣೆಗೆ ಸರಕಾರ ಸಿದ್ಧವಾಗಿದೆ. ನವೆಂಬರ್ 1ರಂದು ಹಲವು ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದೆ. ಗ್ರಾಮ ಪಂಚಾಯತ್ ಮಟ್ಟದಿಂದ ರಾಜ್ಯಮಟ್ಟದ ವರೆಗೂ ಕನ್ನಡಾಂಬೆಗೆ “ನುಡಿ ನಮನ’ ಕಾರ್ಯಕ್ರಮ ಹಮ್ಮಿಕೊಂಡಿದೆ. ನಾಡಿನ ಹೆಸರಾಂತ ಕವಿಗಳ ಐದು ಗೀತೆಗಳು ಮೊಳಗಲಿವೆ.
ಹುಯಿಲಗೋಳ ನಾರಾಯಣ ರಾಯರು ರಚಿಸಿದ “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’, ರಾಷ್ಟ್ರಕವಿ ಕುವೆಂಪು ರಚನೆಯ “ಎಲ್ಲಾದರು ಇರು ಎಂತಾದರೂ ಇರು’, ವರ ಕವಿ ದ.ರಾ.ಬೇಂದ್ರೆ ರಚನೆಯ “ಒಂದೇ ಒಂದೇ ಕರ್ನಾಟಕ ಒಂದೇ’, ಚನ್ನವೀರ ಕಣವಿ ಅವರ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ,’ ಮತ್ತು ಸಿದ್ದಯ್ಯ ಪುರಾಣಿಕ ಅವರ “ಹೊತ್ತಿತೋ ಹೊತ್ತಿತು ಕನ್ನಡದ ದೀಪ’ ಗೀತೆಗಳು ಮೊಳಗಲಿವೆ.
ಶಾಲಾ ಕಾಲೇಜು, ವಿಶ್ವವಿದ್ಯಾನಿಲಯಗಳು, ಸರಕಾರಿ, ಅರೆ ಸರಕಾರಿ, ನಿಗಮ ಮಂಡಳಿಗಳ ಕಚೇರಿಗಳು, ಬ್ಯಾಂಕ್‌ಗಳು ಹಾಗೂ ಸಂಘ ಸಂಸ್ಥೆಗಳು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಅಳವಡಿಸಿಕೊಂಡು ಕಡ್ಡಾಯವಾಗಿ ಮೇಲಿನ ಹಾಡುಗಳನ್ನು ಹಾಡುವ ಮೂಲಕ ಕನ್ನಡಾಂಬೆಗೆ ನುಡಿ ನಮನ (ಗೀತ ಗಾಯನ) ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರಕಾರದ ಕಾರ್ಯದರ್ಶಿ ಎನ್. ಮಂಜುಳಾ ತಿಳಿಸಿದ್ದಾರೆ.
ಸದರಿ ಹಾಡುಗಳಿಗೆ ಸಂಬಂಧಿಸಿದ ಆಡಿಯೋ ಲಿಂಕ್ ಅನ್ನು ಹಾಗೂ ಲಾಂಛನದ ಡಿಜಿಟಲ್ ಪ್ರತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರ ಮೂಲಕ ನೀಡಲಾಗುವುದು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ರಾಜ್ಯೋತ್ಸವದಂದು ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಮಟ್ಟ ಹಾಗೂ ಗ್ರಾಮ ಪಂಚಾಯತ್‌ಗಳಲ್ಲಿ ರಾಜ್ಯೋತ್ಸವ ಕಾರ್ಯಕ್ರಮದ ವೇಳಾಪಟ್ಟಿಯಂತೆ ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ಬಳಿಕ 5 ಕನ್ನಡ ಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.