Finance: ಚುನಾವಣೆ ಹೊಸ್ತಿಲಲ್ಲೇ ಕೇಂದ್ರದ ಜತೆಗೆ ರಾಜ್ಯದ ಕರ ಸಮರ
ರಾಜ್ಯದ ಮೇಲಾಗಿರುವ ಆರ್ಥಿಕ ಅಡ್ಡಪರಿಣಾಮಗಳ ಬಗ್ಗೆ 16ನೇ ಹಣಕಾಸು ಆಯೋಗ ಹಾಗೂ ಕೇಂದ್ರದ ಮುಂದೆ ವಾದ ಮಂಡಿಸಲು ನಿರ್ಧಾರ
Team Udayavani, Jan 6, 2024, 12:06 AM IST
ಬೆಂಗಳೂರು: ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಕೇಂದ್ರ ಸರಕಾರದ ಜತೆಗೆ “ಕರಸಮರ’ಕ್ಕೆ ಮುಂದಾಗಿರುವ ರಾಜ್ಯ ಸರಕಾರ 14 ಹಾಗೂ 15ನೇ ಹಣಕಾಸು ಆಯೋಗದ ಶಿಫಾರಸುಗಳಿಂದ ರಾಜ್ಯದ ಮೇಲಾಗಿರುವ ಆರ್ಥಿಕ ಅಡ್ಡಪರಿಣಾಮಗಳ ಬಗ್ಗೆ 16ನೇ ಹಣಕಾಸು ಆಯೋಗ ಹಾಗೂ ಕೇಂದ್ರದ ಮುಂದೆ ಸಮರ್ಥ ವಾದ ಮಂಡಿಸಲು ನಿರ್ಧರಿಸಿದೆ.
ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ಹೇರಲು ಮೂವರು ಸದಸ್ಯರನ್ನು ಒಳಗೊಂಡ ತಾಂತ್ರಿಕ ಕೋಶವನ್ನು ವಿತ್ತೀಯ ಕಾರ್ಯನೀತಿ ಸಂಸ್ಥೆಯಲ್ಲಿ ಸ್ಥಾಪಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ಕೇಂದ್ರದ ನೀತಿಯ ಬಗ್ಗೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ತೆರಿಗೆ ರೂಪದಲ್ಲಿ ಸಂಗ್ರಹವಾಗುತ್ತಿದ್ದ ಹಣವನ್ನು ಕಳೆದ 5 ವರ್ಷದಿಂದ ಕೇಂದ್ರ ಸೆಸ್, ಸರ್ಚಾರ್ಜ್ ಎಂಬಿತ್ಯಾದಿ ಹೆಸರಿನಲ್ಲಿ ಕರವಾಗಿ ಮಾರ್ಪಡಿಸಿರುವುದರಿಂದ ರಾಜ್ಯಕ್ಕೆ ವಾರ್ಷಿಕ 8,200 ಕೋಟಿ ರೂ. ನಷ್ಟವಾಗುತ್ತಿದೆ. ಒಟ್ಟಾರೆಯಾಗಿ ಕೇಂದ್ರದಿಂದ ರಾಜ್ಯಕ್ಕೆ ವಿವಿಧ ಬಾಬ್ತುಗಳಿಂದ ಸುಮಾರು 70 ಸಾವಿರ ಕೋಟಿ ರೂ. ಆರ್ಥಿಕ ಖೋತಾ ಆಗಿದೆ ಎಂದು ಸಂಪುಟ ಸಭೆಯಲ್ಲಿ ಲೆಕ್ಕ ಹಾಕಲಾಗಿದೆ.
ಸಂಪುಟ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಹಾಗೂ ರಾಜ್ಯದ ಹೋರಾಟಗಳ ಬಗ್ಗೆ ಸುದೀರ್ಘ ಮಾಹಿತಿ ನೀಡಿದ್ದಾರೆ.
ಅನ್ಯಾಯ ಎಲ್ಲೆಲ್ಲಿ ?
– ದೇಶದಲ್ಲಿ ಎರಡನೇ ಹೆಚ್ಚು ತೆರಿಗೆ ಪಾವತಿಸುವ ರಾಜ್ಯ ಕರ್ನಾಟಕ. ವಾರ್ಷಿಕ 4 ಲಕ್ಷ ಕೋಟಿ ರೂ. ಕೇಂದ್ರಕ್ಕೆ ಸಲ್ಲಿಕೆಯಾಗುತ್ತಿದ್ದರೆ 70 ಸಾವಿರ ಕೋಟಿ ರೂ. ಮಾತ್ರ ವಾಪಸ್ ಬರುತ್ತಿದೆ. ಇದು 100ರೂ.ನಲ್ಲಿ 12 ರೂ. ಮಾತ್ರ.
– ರಾಜ್ಯದ ಐಟಿ ಕ್ಷೇತ್ರದಿಂದ ಮೂರೂವರೆ ಲಕ್ಷ ಕೋಟಿ ರೂ. ರಫ್ತಾಗುತ್ತಿದ್ದು ಡಾಲರ್ ರೂಪದಲ್ಲಿ ವರಮಾನ ತಂದುಕೊಡುತ್ತಿದೆ. ಇದಕ್ಕೆ ಪ್ರತಿಯಾಗಿ ರಾಜ್ಯಕ್ಕೆ ನ್ಯಾಯ ಸಿಗುತ್ತಿಲ್ಲ.
– 14 ನೇ ಹಣಕಾಸು ಆಯೋಗದ ಅವಧಿಯಲ್ಲಿ ಕೇಂದ್ರದಿಂದ ರಾಜ್ಯಗಳಿಗೆ ಸೇ. 4.71 ತೆರಿಗೆ ಪಾಲು ಬರುತ್ತಿತ್ತು. 15 ನೇ ಆಯೋಗದಲ್ಲಿ 3.64ಕ್ಕೆ ಇಳಿದಿದೆ. ಇದರಿಂದ ಕೇಂದ್ರದಿಂದ ಬರುವ ಅನುದಾನ, ತೆರಿಗೆಯಲ್ಲಿ ರಾಜ್ಯದ ಪಾಲು ಶೇ. 25 ಇಳಿಕೆಯಾಗಿದೆ. ಅಂದಾಜು ವರ್ಷಕ್ಕೆ 14 ಸಾವಿರ ಕೋಟಿ ರೂ. ಖೋತಾ ಆಗಿದೆ. 2020-21 ರಿಂದ ಐದು ವರ್ಷದಲ್ಲಿ 62 ಸಾವಿರ ಕೋಟಿ ರೂ. ನಷ್ಟ ಆಗುತ್ತಿದೆ.
– ಕೇಂದ್ರದಿಂದ ಬರುವ ತೆರಿಗೆಯಲ್ಲಿ ಶೇ. 41 ಮರು ಹಂಚಿಕೆ ಇರಬೇಕು. ಆದರೆ ಈಗ ಶೇ.30 ರಷ್ಟು ಮಾತ್ರ ಮಾಡಲಾಗುತ್ತಿದೆ. ತೆರಿಗೆ ಎಂದು ಕರೆಯುವ ಬದಲು ಕರ ಎಂದು ಬದಲಿಸಿ ಸೆಸ್, ಸರ್ಚಾಜ್ ಪಾಲನ್ನು ವಂಚಿಸಲಾಗುತ್ತಿದೆ. ಪೆಟ್ರೋಲ…, ಡೀಸೆಲ್ ತೆರಿಗೆ ಬದಲು ಸೆಸ್ ಎಂದು ಪರಿಗಣಿಸಿ ಸಂಗ್ರಹಿಸುವ 5ರಿಂದ 6 ಲಕ್ಷ ಕೋಟಿ ರೂ. ಹಣದಲ್ಲಿ ಶೇ. 95 ಕೇಂದ್ರವೇ ಇಟ್ಟುಕೊಳ್ಳುತ್ತಿದೆ. ಇದರಿಂದ ರಾಜ್ಯಕ್ಕೆ ವಾರ್ಷಿಕ 8,200 ಕೋಟಿ ನಷ್ಟ. ಇದುವರೆಗೆ ಒಟ್ಟು 22 ಸಾವಿರ ಕೋಟಿ ರೂ. ವಾರ್ಷಿಕ ನಷ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.