ಮೈಸೂರು : 10ನೇ ಕ್ಲಾಸ್ ಆಫ್ಲೈನ್, ಉಳಿದವರಿಗೆ ಆನ್‌ಲೈನ್, ದೇವರ ದರ್ಶನಕ್ಕೆ ವ್ಯಾಕ್ಸಿನ್
Team Udayavani, Jan 13, 2022, 3:51 PM IST
ಮೈಸೂರು ಜಿಲ್ಲೆಯಲ್ಲಿ ಸತತ ಎರಡನೇ ದಿನವೂ ಕೋವಿಡ್ ಪ್ರಕರಣಗಳ ಸಂಖ್ಯೆ 500 ದಾಟಿದೆ. ಈ ಹಿನ್ನೆಲೆಯಲ್ಲಿ ಕೆಲ ನಿರ್ಬಂಧ ವಿಧಿಸಿದ್ದು, ವೈಕುಂಠ ಏಕಾದಶಿ ದಿನದಂದು ಪೂರ್ಣ ಪ್ರಮಾಣದ ಲಸಿಕೆ ಪಡೆದ 50 ಜನರಿಗೆ ಮಾತ್ರ ದೇಗುಲದಲ್ಲಿ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೈಸೂರು ನಗರ ಹಾಗೂ ಮೈಸೂರು ತಾಲೂಕಿನಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದ್ದು, 10ನೇ ಕ್ಲಾಸ್‌ಗೆ ಆಫ್ಲೈನ್ ತರಗತಿಗೆ ಜಿಲ್ಲಾಡಳಿತ ಅನುಮತಿ ನೀಡಿದೆ. ಉಳಿದವರಿಗೆ ಆನ್‌ಲೈನ್ ಶಿಕ್ಷಣ ನೀಡಲು ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದ್ದಾರೆ.
1-9ನೇ ಕ್ಲಾಸ್‌ಗೆ ಆನ್‌ಲೈನ್ ತರಗತಿಗೆ ಸಚಿವ ಸೋಮಶೇಖರ್ ಸೂಚನೆ
ಮೈಸೂರು : ಮೈಸೂರು ನಗರ ಹಾಗೂ ಮೈಸೂರು ತಾಲೂಕಿನಲ್ಲಿ 1 ರಿಂದ 9ನೇ ತರಗತಿಗೆ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿರುವುದರಿಂದ ಆನ್‌ಲೈನ್ ಮೂಲಕ ಶಿಕ್ಷಣ ಮುಂದುವರಿಸಬೇಕೆಂದು ಮೈಸೂರು ಜಿಲ್ಲಾ ಉಸ್ತು ವಾರಿ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸಚಿವರು ಈ ಸೂಚನೆ ನೀಡಿದ್ದಾರೆ. 10ನೇ ತರಗತಿಯ ವಿದ್ಯಾರ್ಥಿಗಳು ಪರೀûಾ ಮಂಡಳಿ ನಡೆಸುವ ವಾರ್ಷಿಕ ಪರೀಕ್ಷೆ ಎದುರಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಅಭ್ಯಾಸಕ್ಕೆ ವಿಶೇಷ ಗಮನಕೊಡಬೇಕು ಎಂದು ಅವರು ಸೂಚಿಸಿದ್ದಾರೆ. ಕಳೆದ ವರ್ಷ ಲಾಕ್ ಡೌನ್ ಸಂದರ್ಭದಲ್ಲಿ ವಿದ್ಯಾಗಮ ಪದ್ಧತಿ ಮೂಲಕ ಕಲಿಸುವ ಪ್ರಯತ್ನ ಮಾಡಲಾಗಿತ್ತು. ದೂರದರ್ಶನ ವಾಹಿನಿಯಲ್ಲಿ ಸಂವೇದ ಕಾರ್ಯಕ್ರಮ ಪ್ರಸಾರ ಮಾಡಿ, ಕಲಿಕೆಗೆ ಪೋ›ತ್ಸಾಹಿಸಲಾಗಿತ್ತು.
ಹಾಗೆಯೇ ಯೂಟ್ಯೂಬ್ ಚಾನೆಲ್ ಮೂಲಕ ತರಗತಿಗಳನ್ನು ಪ್ರಸಾರ ಮಾಡಲಾಗಿತ್ತು. ವಾಟ್ಸಾಪ್ ಮೂಲಕ ಅಭ್ಯಾಸದ ಸಾಮಗ್ರಿಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗಿತ್ತು. ಆ ಕ್ರಮಗಳ ಮೂಲಕವೂ ವಿದ್ಯಾರ್ಥಿಗಳ ಶಿಕ್ಷಣದ ಕೊರತೆಯನ್ನು ನೀಗಿಸಬಹುದು. ಈ ಪ್ರಯತ್ನಗಳನ್ನು ಅಧಿಕಾರಿಗಳು ಹಾಗೂ ಶಿಕ್ಷಕರು ಮಾಡಬೇಕು ಎಂದು ತಿಳಿಸಿದ್ದಾರೆ.
ಲಸಿಕೆ ಪಡೆದವರಿಗೆ ಮಾತ್ರ ದೇವರ ದರ್ಶನ ಭಾಗ್ಯ
ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮೈಸೂರು ನಗರದ ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿ ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ವೈಕುಂಠ ಏಕಾದಶಿ ದಿನದಂದು ಪೂರ್ಣ ಪ್ರಮಾಣದ ಕೋವಿಡ್ ಲಸಿಕೆ ಪಡೆದ 50 ಜನರಿಗೆ ಮಾತ್ರ ದೇವಸ್ಥಾನಗಳಲ್ಲಿ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಬೇಕು. ಯಾವುದೇ ಸೇವೆಗೆ ಅವಕಾಶ ಇರುವುದಿಲ್ಲ ಎಂದು ಆದೇಶ ಹೊರಡಿಸಲಾಗಿದೆ. ಮೈಸೂರು ನಗರದ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಈ ಕುರಿತು ಬುಧವಾರ ಆದೇಶ ಹೊರಡಿಸಿದ್ದಾರೆ. ವೈಕುಂಠ ಏಕಾದಶಿ ಹಾಗೂ ಸಂಕ್ರಾಂತಿ ಹಬ್ಬಗಳ ಪ್ರಯುಕ್ತ ದೇವಾಲಯಗಳ ಶಾಸ್ತ್ರ , ಸಂಪ್ರದಾಯದಂತೆ ದೇವಾಲಯಗಳ ಒಳ ಆವರಣದಲ್ಲಿ ಮಾತ್ರ ದೈನಂದಿನ ಪೂಜಾ ಕೈಂಕರ್ಯಗಳನ್ನು ನಡೆಸಬಹುದು. ಹಬ್ಬಗಳ ಆಚರಣೆಯಲ್ಲಿ ಯಾವುದೇ ರೀತಿಯ ಮೆರವಣಿಗೆ, ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸುವಂತಿಲ್ಲ. ಈ ಮಾರ್ಗಸೂಚಿಯನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ ಭೌತಿಕ ತರಗತಿ ನಡೆಸಲು ಡೀಸಿ ಡಾ.ಬಗಾದಿ ಗೌತಮ್ ಆದೇಶ
ಮೈಸೂರು: ಮೈಸೂರು ನಗರ ಹಾಗೂ ಮೈಸೂರು ತಾಲೂಕಿನಲ್ಲಿ 10ನೇ ತರಗತಿಯ ಭೌತಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಮೈಸೂರು ನಗರ ಹಾಗೂ ಮೈಸೂರು ತಾಲೂಕು ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ವಸತಿ ಶಾಲೆಗಳನ್ನು ಒಳಗೊಂಡಂತೆ ಅಂಗನವಾಡಿ, ನರ್ಸರಿ, 1ರಿಂದ 10ನೇ ತರಗತಿವರೆಗೆ ಭೌತಿಕ ತರಗತಿ ಗಳನ್ನು ಸ್ಥಗಿತಗೊಳಿಸಿ ಜಿಲ್ಲಾಧಿಕಾರಿಗಳು ಮಂಗಳವಾರ ಆದೇಶ ಹೊರಡಿಸಿದ್ದರು. ಆದರೆ, ಬುಧವಾರ ಮತ್ತೂಂದು ಆದೇಶ ಹೊರಡಿಸಿ 10ನೇ ತರಗತಿಗೆ ಮಾತ್ರ ಭೌತಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಿದ್ದಾರೆ. 10¤ನೇ ತರಗತಿಗೆ ಕೆಎಸ್‌ಇಇಬಿ ವತಿಯಿಂದ ಪರೀಕ್ಷೆ ನಡೆಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಭೌತಿಕ ಶಿಕ್ಷಣದ ಅಗತ್ಯ ಇರುತ್ತದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ 15 -18 ವಯಸ್ಸಿನವರಿಗೆ ಲಸಿಕೆ ನೀಡುವುದು ಪ್ರಗತಿಯಲ್ಲಿದೆ. 10ನೇ ತರಗತಿ ವಿದ್ಯಾರ್ಥಿಗಳು ಈ ವಯೋಮಾನದ ವ್ಯಾಪ್ತಿಗೆ ಬರುತ್ತಾರೆ. ಅವರು ಶಾಲೆಗೆ ಆಗಮಿಸುವುದರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯವು ನಿಗದಿತ ಅವಧಿ ಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕೋವಿಡ್‌ನ ಎಲ್ಲ ಮುನ್ನೆಚರಿಕೆ ಕ್ರಮಗಳನ್ನು ಕೈಗೊಂಡು 10ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ನಡೆಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.