Mescom: 3 ದಿನ ಮೆಸ್ಕಾಂ ಸಹಿತ ಎಸ್ಕಾಂಗಳಲ್ಲಿ ಆನ್ಲೈನ್ ಸೇವೆ ಅಲಭ್ಯ
Team Udayavani, Nov 23, 2023, 12:36 AM IST
ಬೆಂಗಳೂರು: ಮೆಸ್ಕಾಂ ಸೇರಿ ಎಲ್ಲ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ನ. 24ರಿಂದ 26ರ ವರೆಗೆ ಬಿಲ್ ಪಾವತಿ ಸಹಿತ ಯಾವುದೇ ಆನ್ಲೈನ್ ಸೇವೆಗಳು ಲಭ್ಯವಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಸೇವೆಗಳಿಗೆ ಸಂಬಂಧಿಸಿದ ತಂತ್ರಾಂಶಗಳು ಹಾಗೂ ಹಾರ್ಡ್ವೇರ್ಗಳನ್ನು ಉನ್ನತ ಮಟ್ಟ ಕ್ಕೇರಿಸುತ್ತಿರುವ ಹಿನ್ನೆಲೆಯಲ್ಲಿ ಮಾಹಿತಿ ತಂತ್ರಜ್ಞಾನ ಆಧಾರಿತ ವಿದ್ಯುತ್ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಎಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಈ ಅವಧಿಯಲ್ಲಿ ಆನ್ಲೈನ್ ಸೇವೆಗಳಾದ ಹೊಸ ವಿದ್ಯುತ್ ಸಂಪರ್ಕ, ಹೆಸರು/ಲೋಡ್ ಬದಲಾವಣೆ, ನಗದು ಪಾವತಿ, ಆನ್ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿ ಹಾಗೂ ಇತರ ಸೇವೆಗಳು ಲಭ್ಯವಿರುವುದಿಲ್ಲ. ಇದನ್ನು ಗಮನಿಸಿ ಗ್ರಾಹಕರು ಹಾಗೂ ಗುತ್ತಿಗೆದಾರರು ತಮ್ಮ ಅಗತ್ಯಗಳನ್ನು ಮುಂಚಿತವಾಗಿ ರೂಪಿಸಿಕೊಳ್ಳುವಂತೆ ಎಸ್ಕಾಂಗಳು ತಿಳಿಸಿವೆ. ಈ ಅವಧಿಯಲ್ಲಿ ವಿದ್ಯುತ್ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದೂ ಸ್ಪಷ್ಟಪಡಿಸಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.