ನೆಹರೂ ಹೊಗಳಿದರೆ ಮಾತ್ರ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ: ಸಚಿವ ಬಿ.ಸಿ.ಪಾಟೀಲ
Team Udayavani, Aug 13, 2021, 9:45 PM IST
ಹಿರೇಕೆರೂರು: ಡಿ.ಕೆ.ಶಿವಕುಮಾರ ಅವರು ನೆಹರೂ ಕುಟುಂಬ ಹೊಗಳಿದರೆ ಮಾತ್ರ ಕೆಪಿಸಿಸಿ ಅಧ್ಯಕ್ಷರಾಗಿರುತ್ತಾರೆ. ಇಲ್ಲದಿದ್ದರೆ ಅವರನ್ನು ಕಿತ್ತು ಬಿಸಾಕುತ್ತಾರೆ. ಹಾಗಾಗಿ, ಅವರು ನೆಹರೂ ಕುಟುಂಬ ಹೊಗಳುತ್ತಿದ್ದಾರೆಂದು ಕೃಷಿ ಸಚಿವ ಬಿ.ಸಿ.ಪಾಟೀಲ ಲೇವಡಿ ಮಾಡಿದರು.
ತಾಲೂಕಿನ ಬಸರೀಹಳ್ಳಿ ಗ್ರಾಮದ ಬಳಿಯ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬ ಮನುಷ್ಯನ ತ್ಯಾಗದಿಂದ ದೇಶಕ್ಕೆ ಸ್ವಾತಂತ್ರ್ಯಬಂದಿದೆ. ಸ್ವಾತಂತ್ರ್ಯಪಡೆಯುವ ಸಂದರ್ಭದಲ್ಲಿ ಯಾವುದೇ ಪಕ್ಷ, ಪಂಗಡಗಳು, ರಾಜಕೀಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಇರಲಿಲ್ಲ. ಇಂಗ್ಲಿಷರ ಆಡಳಿತಕ್ಕೆ ಒಳಪಟ್ಟ ಸಂದರ್ಭದಲ್ಲಿ ಪ್ರತಿಯೊಬ್ಬ ಪ್ರಜೆ ದೇಶಕ್ಕೆ ಸ್ವಾತಂತ್ರ್ಯಬರಬೇಕೆಂದು ಹೋರಾಟ ಮಾಡಿದ್ದಾನೆ. ಅದರಲ್ಲಿ ನೆಹರು ದೊಡ್ಡವರಾಗಿ ಪ್ರಧಾನ ಮಂತ್ರಿಗಳಾದರಷ್ಟೇ ಎಂದರು.
ಇದನ್ನೂ ಓದಿ:ಮೇಕೆದಾಟು ಯೋಜನೆ ಬಗ್ಗೆ ಸಿಎಂ ನಿಲುವು ಸ್ಪಷ್ಟಪಡಿಸಬೇಕು: ಸಿದ್ದರಾಮಯ್ಯ ಒತ್ತಾಯ
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿ ಹದಿನೈದು ದಿನಗಳಾಗಿವೆ. ಎಲ್ಲ ಕಡೆಗಳಲ್ಲಿ ಪ್ರವಾಸ ಮಾಡಿ ಕೋವಿಡ್ ಸಂಬಂಧ ಸಭೆ ಮಾಡುತ್ತಿದ್ದಾರೆ. ಹಗಲಿರುಳು ಶ್ರಮಿಸುತ್ತಿದ್ದಾರೆ.ಮುಂದಿನ ದಿನಗಳಲ್ಲಿ ಉತ್ತಮ ಆಡಳಿತವನ್ನು ನಾವು ನಿರೀಕ್ಷೆ ಮಾಡಿದ್ದೇವೆ.
ವಿಜಯೇಂದ್ರ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಕುರಿತು ಶಾಸಕ ಯತ್ನಾಳ ಹೇಳಿಕೆ ವೈಯಕ್ತಿಕವಾದುದು. ಬಿಎಸ್‌ವೈ ಬಗ್ಗೆಯಾಗಲಿ, ವಿಜಯೇಂದ್ರ ಬಗ್ಗೆಯಾಗಲಿ ಪಕ್ಷದಲ್ಲಿ ಯಾವುದೇ ಅಸಮಾಧಾನ, ಅಸಹಕಾರ ಇಲ್ಲ. ಬಿಎಸ್‌ವೈ ನಮ್ಮ ಪಕ್ಷದ ನಾಯಕರು. ವಿಜಯೇಂದ್ರ ನಮ್ಮ ಪಕ್ಷದ ರಾಜ್ಯ ಉಪಾಧ್ಯಕ್ಷರು. ಶಾಸಕ ಸ್ಥಾನಕ್ಕೆ ಆನಂದಸಿಂಗ್ ರಾಜೀನಾಮೆ ಕೊಡುವುದಿಲ್ಲ. ನಾನು ಕೂಡ ಅವರ ಜತೆ ಮಾತನಾಡಿದ್ದೇನೆ. ಸ್ವಲ್ಪ ಅಸಮಾಧಾನ ಇತ್ತು. ಎಲ್ಲವೂ ಸರಿಯಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
ಹಾವೇರಿ: ಸಿದ್ದು ಅದೃಷ್ಟದ ಸಿಎಂ, ಬಿಎಸ್‌ವೈ ಹೋರಾಟ ಮಾಡಿ ಅಧಿಕಾರಕ್ಕೆ ಬಂದವರು-ವಿಜಯೇಂದ್ರ
Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ
MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.