ನೋಂದಣಿಯಾದ ಹೋಂಸ್ಟೇಗಳಿಗೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್
Team Udayavani, Jun 11, 2020, 6:29 AM IST
ಮಡಿಕೇರಿ: ಎರಡೂವರೆ ತಿಂಗಳುಗಳಿಂದ ಮುಚ್ಚಿದ್ದ ಹೊಟೇಲ್, ರೆಸ್ಟೋರೆಂಟ್, ಹೋಂ ಸ್ಟೇ ಆರಂಭಕ್ಕೆ ಸರಕಾರ ಅವಕಾಶ ನೀಡಿದ್ದು, ಅದರಂತೆ ಜಿಲ್ಲೆಯಲ್ಲಿ ಅಧಿಕೃತವಾಗಿ ನೋಂದಣಿಯಾದ 800 ಹೋಂ ಸ್ಟೇಗಳಿಗೆ ಮಾತ್ರ ಪುನರಾರಂಭಕ್ಕೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ನಗರದ ಜಿ.ಪಂ. ಸಭಾಂಗಣದಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಪ್ರಮುಖ ರೊಂದಿಗೆ ಸರಕಾರದ ಮಾರ್ಗಸೂಚಿ ಪಾಲನೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೋಂಸ್ಟೇಗಳು ಸರಕಾರದ ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸಬೇಕು, ಸ್ವತ್ಛತೆ ಕಾಪಾಡಿಕೊಳ್ಳಬೇಕು. ಸ್ಯಾನಿ ಟೈಸರ್ ಇಡಬೇಕು, ಮಾಸ್ಕ್ ಧರಿಸಬೇಕು, ಥರ್ಮಲ್ ಸ್ಕ್ಯಾನರ್‌ನಿಂದ ಪರೀಕ್ಷಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ಪ್ರವಾಸಿಗರ ಸಂಪೂರ್ಣ ವಿವರ ಇರಬೇಕು ಎಂದು ಅವರು ಹೇಳಿದರು.
ಹೋಂ ಸ್ಟೇ,ರೆಸಾರ್ಟ್ ಮಾಲಕರ ಜವಾಬ್ದಾರಿ ಹೆಚ್ಚಿದೆ. ರೆಸಾರ್ಟ್‌ಗಳಲ್ಲಿ ಸಭೆ ಸಮಾರಂಭ, ಪಾರ್ಟಿ ಮಾಡುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಪಿ. ಸುಮನ್ ಮಾತನಾಡಿ, ಪ್ರವಾಸಿಗರ ಆಗಮನ, ನಿರ್ಗಮನ, ಸಮಯ, ದಿನಾಂಕದ ನಿಖರ ಮಾಹಿತಿ ಒದಗಿಸಬೇಕು. ಸರಕಾರದ ನಿರ್ದೇಶನವನ್ನು ಪಾಲಿಸಬೇಕು ಎಂದರು.
ಪ್ರವಾಸಿಗರಿಗೆ ರಕ್ಷಣೆ ನೀಡಿ
ಹೋಂಸ್ಟೇ ಅಸೋಷಿಯೇಶನ್ ಅಧ್ಯಕ್ಷ ಬಿ.ಜಿ. ಅನಂತ ಶಯನ ಮಾತನಾಡಿ, ಪ್ರವಾಸಿಗರಿಗೆ ರಕ್ಷಣೆ ನೀಡಬೇಕು. ಯಾವುದೇ ಕಾರಣಕ್ಕೂ ಕಿರಿಕಿರಿ ಉಂಟಾಗಬಾರದು. ನೋಂದಣಿ ಹೋಂ ಸ್ಟೇಗಳಿಗೆ ರಕ್ಷಣೆ ನೀಡಬೇಕು ಎಂದರು.
ರೆಸಾರ್ಟ್ ಅಸೋಸಿಯೇಶನ್ ಗೌರವ ಸಲಹೆಗಾರರಾದ ಜಿ. ಚಿದ್ವಿಲಾಸ್ ಮಾತನಾಡಿ, ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಾರ್ವಜನಿಕರಿಗೆ ಅವಕಾಶ ನೀಡುವಂತಾಗಬೇಕು ಎಂದು ಮನವಿ ಮಾಡಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಡಾ| ಸ್ನೇಹಾ ಸಹಿತ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.