India-Myanmar: ಶೀಘ್ರ ಭಾರತ-ಮ್ಯಾನ್ಮಾರ್ ಮುಕ್ತ ಸಂಚಾರ ನೀತಿಗೆ ತೆರೆ?
ಅಕ್ರಮ ವಲಸಿಗರು, ನುಸುಳುಕೋರರ ತಡೆಗೆ ಕ್ರಮ
Team Udayavani, Jan 2, 2024, 10:28 PM IST
ನವದೆಹಲಿ: ಭಾರತ-ಮ್ಯಾನ್ಮಾರ್ ಗಡಿಯಲ್ಲಿ ವಾಸಿಸುವ ಜನರು ವೀಸಾ ಇಲ್ಲದೇ ಪರಸ್ಪರ ಎರಡೂ ದೇಶಗಳ ನಡುವೆ ತಲಾ 16 ಕಿ.ಮೀ.ವರೆಗೆ ಸಂಚರಿಸಲು ಅನುವು ಮಾಡಿಕೊಡುವ ಮುಕ್ತ ಸಂಚಾರ ನೀತಿಗೆ(ಎಫ್ಎಂಆರ್) ಅಂತ್ಯ ಹಾಡಲು ಭಾರತ ಸರ್ಕಾರ ಮುಂದಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಈ ದಾರಿಯ ಮೂಲಕ ಅಕ್ರಮ ವಲಸಿಗರು ಮತ್ತು ನುಸುಳುಕೋರರು ದೇಶದೊಳಕ್ಕೆ ಬರುವುದು ಹೆಚ್ಚಾಗಿರುವ ಕಾರಣ, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ಭಾರತ-ಮ್ಯಾನ್ಮಾರ್ 1,643 ಕಿ.ಮೀ. ಉದ್ದದ ಗಡಿಯನ್ನು ಹಂಚಿಕೊಂಡಿದೆ. ಈ ಗಡಿಯು ಮಿಜೋರಾಂ, ಮಣಿಪುರ, ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶವನ್ನು ಹಾದು ಹೋಗಲಿದ್ದು, ಪ್ರಸ್ತುತ ಎಫ್ಎಂಆರ್ ಅಸ್ತಿತ್ವದಲ್ಲಿದೆ.
ಎಫ್ಎಂಆರ್ ಅಡಿಯಲ್ಲಿ ಭಾರತದ ಪ್ರಜೆ ಅಥವಾ ಮ್ಯಾನ್ಮಾರ್ ಪ್ರಜೆಯಾಗಿದ್ದು, ಗಡಿಯ ಎರಡು ಬದಿಗಳಲ್ಲಿ 16 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವ ಗುಡ್ಡಗಾಡು ಬುಡಕಟ್ಟು ವ್ಯಕ್ತಿಯು ವೀಸಾ ಇಲ್ಲದೇ ಬಾರ್ಡರ್ ಪಾಸ್ ಮೂಲಕ ಪರಸ್ಪರ ಸಂಚರಿಸಬಹುದು. ಅಲ್ಲದೇ ಒಮ್ಮೆಗೆ ಎರಡು ವಾರಗಳು ತಂಗಬಹದು.
“ಶೀಘ್ರದಲ್ಲಿ ಎಫ್ಎಂಆರ್ ಅಂತ್ಯವಾಗಲಿದ್ದು, ಮುಂದಿನ ನಾಲ್ಕು ವರ್ಷಗಳಲ್ಲಿ ಭಾರತ-ಮ್ಯಾನ್ಮಾರ್ ಗಡಿ ಉದ್ದಕ್ಕೂ ಬೇಲಿ ಹಾಕಲಾಗುವುದು” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.