ಧರ್ಮಸ್ಥಳದಲ್ಲಿ ಧರ್ಮಶ್ರೀ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ


Team Udayavani, Jan 26, 2020, 3:06 AM IST

dharmastala

ಬೆಳ್ತಂಗಡಿ: ವ್ಯಕ್ತಿಯನ್ನು ಸಮಾಜಕ್ಕೆ ಶಕ್ತಿಯಾಗಿ ಬೆಳೆಸಿದ ಕೀರ್ತಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಸಲ್ಲುತ್ತದೆ. ಸಮಾಜದ ಪ್ರತಿಯೊಬ್ಬ ಪ್ರಜೆಯನ್ನು ಜವಾಬ್ದಾರಿಯುತ ನಾಗರಿ ಕನನ್ನಾಗಿಸುವಲ್ಲಿ ಸರಕಾರಕ್ಕಿಂತಲೂ ಉನ್ನತ ಕೆಲಸ ಮಾಡುತ್ತಿರುವ ಡಾ| ಹೆಗ್ಗಡೆ ಚಿಂತನೆಯ ಯೋಜನೆ ವಿಶ್ವವ್ಯಾಪಿಯಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ಗೊಬ್ಬರ ಖಾತೆ ಸಚಿವ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಆಡಳಿತ ಕಚೇರಿ “ಧರ್ಮಶ್ರೀ’ಯ ನೂತನ ವಿಸ್ತೃತ ಕಟ್ಟಡ ಉದ್ಘಾಟಿಸಿ, ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಮಾತನಾಡಿದರು.

ತ್ಯಾಜ್ಯ ಸಂಗ್ರಹಣಾ ಬುಟ್ಟಿ ವಿತರಣೆ: ಮುಜರಾಯಿ ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಾಂಕೇತಿಕವಾಗಿ ಶ್ರದ್ಧಾಕೇಂದ್ರಗಳಿಗೆ ತ್ಯಾಜ್ಯ ಸಂಗ್ರಹಣಾ ಬುಟ್ಟಿ ವಿತರಿಸಿದರು. ಬಳಿಕ ಮಾತನಾಡಿ, ಸರಕಾರದ ಜನಮಂಗಳ ಕಾರ್ಯಗಳಿಗೆ ಹೆಗ್ಗಡೆಯವರೇ ಪ್ರೇರಕ ಶಕ್ತಿಯಾಗಿದ್ದಾರೆ.

ಧರ್ಮ ಸ್ಥಳದ ಮಾದರಿಯಲ್ಲೆ ಏ.26ರಂದು ರಾಜ್ಯದ 110 ದೇವಸ್ಥಾನಗಳಲ್ಲಿ ಸರಕಾರದ ವತಿಯಿಂದ ಸಾಮೂಹಿಕ ವಿವಾಹ ನಡೆಸಲಾಗುವುದು. ಯಾವುದಾದರೂ ಒಂದು ದೇವಸ್ಥಾನದ ಸಾಮೂಹಿಕ ವಿವಾಹಕ್ಕೆ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಬಂದು ಆಶೀರ್ವದಿಸಬೇಕು ಎಂದು ಆಮಂತ್ರಿಸಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ರಾಜ್ಯದೆಲ್ಲೆಡೆ 1,500 ಮಂದಿ ಸೇವಾ ಪ್ರತಿನಿಧಿಗಳು ಸೇವೆ ಮಾಡಿ ಯೋಜನೆಯನ್ನು ಯಶಸ್ವಿಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜನಮಂಗಳ ಕಾರ್ಯಕ್ರಮದಡಿ ದಿವ್ಯಾಂಗರಿಗೆ ಶಾಸಕ ಹರೀಶ್‌ ಪೂಂಜ ಸಲಕರಣೆಗಳನ್ನು ವಿತರಿಸಿದರು.

ಇದೇ ವೇಳೆ, ಧರ್ಮಸ್ಥಳ ವಲಯದ 9 ಒಕ್ಕೂಟಗಳ ಪದಗ್ರಹಣ ಸಮಾರಂಭ ನಡೆಯಿತು. ಕಟ್ಟಡ ನಿರ್ಮಾಣದ ರೂವಾರಿ ಡಿ.ಹರ್ಷೇಂದ್ರ ಕುಮಾರ್‌, ವಾಸ್ತು ಶಿಲ್ಪಿ ಬ್ರಹ್ಮೇ ಮತ್ತು ಗೋಪಾಲ ಮೆನನ್‌ ಅವರನ್ನು ಗೌರವಿಸಲಾಯಿತು. ಜ್ಞಾನವಿಕಾಸ ಕಾರ್ಯಕ್ರಮ ಅಧ್ಯಕ್ಷೆ ಹೇಮಾವತಿ ವೀ.ಹೆಗ್ಗಡೆ, ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟಿ ಶಿರ್ತಾಡಿ ಸಂಪತ್‌ ಸಾಮ್ರಾಜ್ಯ ಉಪಸ್ಥಿತರಿದ್ದರು.

ನೂತನ ಜಲಾಭಿಷೇಕ ಯೋಜನೆಯಡಿ ರಾಜ್ಯದಲ್ಲಿ ದೇವಸ್ಥಾನಗಳ ಬಳಿ ಇರುವ ಕೆರೆಗಳನ್ನು (ಪುಷ್ಕರಣಿ) ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಶುಚೀಕರಣಗೊಳಿಸಲಾಗುವುದು.
-ಕೋಟ ಶ್ರೀನಿವಾಸ ಪೂಜಾರಿ, ಉಸ್ತುವಾರಿ ಸಚಿವ.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.