ಮಹಿಳಾ ದೌರ್ಜನ್ಯ: ನೊಂದ ಮಹಿಳೆಯರಿಗೆ ಸಿಕ್ಕಿತು “ಸಾಂತ್ವನ’

"ಸಖಿ'ಯೊಂದಿಗೆ ಸಾಂತ್ವನ ಕೇಂದ್ರಕ್ಕೂ ಅವಕಾಶ

Team Udayavani, Apr 6, 2022, 7:10 AM IST

ಮಹಿಳಾ ದೌರ್ಜನ್ಯ: ನೊಂದ ಮಹಿಳೆಯರಿಗೆ ಸಿಕ್ಕಿತು “ಸಾಂತ್ವನ’

ಮಂಗಳೂರು: ಮುಚ್ಚಲ್ಪಟ್ಟಿದ್ದ ಜಿಲ್ಲಾ ಕೇಂದ್ರಗಳ “ಮಹಿಳಾ ಸಾಂತ್ವನ ಕೇಂದ್ರ’ಗಳು ಪುನರಾರಂಭಗೊಂಡಿದ್ದು ದೌರ್ಜನ್ಯಕ್ಕೊಳಗಾದ ಮಹಿಳೆಯರ ನೆರವಿಗೆ ಸಿದ್ಧಗೊಂಡಿವೆ.

ದ.ಕ., ಉಡುಪಿ ಸಹಿತ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರ ಸರಕಾರವು “ಸಖಿ’ ಸೆಂಟರ್‌ಗಳನ್ನು ಆರಂಭಿಸಿದ್ದ ಹಿನ್ನೆಲೆಯಲ್ಲಿ ಈ ಹಿಂದಿನಿಂದ ಇದ್ದ “ಸಾಂತ್ವನ ಕೇಂದ್ರ’ಗಳ ಆವಶ್ಯಕತೆ ಇಲ್ಲ ಎಂದು ಸರಕಾರ ಅವುಗಳನ್ನು ಮುಚ್ಚಲು ಆದೇಶಿಸಿತ್ತು. ಅದರಂತೆ 2021ರ ಎಪ್ರಿಲ್‌ನಲ್ಲಿ ಜಿಲ್ಲಾ ಸಾಂತ್ವನ ಕೇಂದ್ರಗಳು ಮುಚ್ಚಲ್ಪ ಟ್ಟಿದ್ದವು. ಆದರೆ ಮಹಿಳಾ ದೌರ್ಜನ್ಯ ಪ್ರಕರಣಗಳು ಏರಿಕೆಯಾಗುತ್ತಿರುವುದರಿಂದ ಜಿಲ್ಲಾ ಕೇಂದ್ರಗಳಲ್ಲಿ ಸಾಂತ್ವನ ಕೇಂದ್ರಗಳನ್ನು ಪುನರಾರಂಭಿಸಲಾಗುತ್ತಿದೆ.

ಮಂಗಳೂರಿನ “ಸಖಿ’ ವನ್‌ಸ್ಟಾಪ್‌ ಸೆಂಟರ್‌ನಲ್ಲಿ 2019-20ರಲ್ಲಿ 162, 20- 21ರಲ್ಲಿ 165, 21-22ರಲ್ಲಿ 208 ಮಹಿಳಾ ದೌರ್ಜನ್ಯ ಪ್ರಕರಣಗಳನ್ನು ನಿರ್ವ ಹಿಸಲಾಗಿದೆ. “ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣ ಕಾಯಿದೆ’ ಯಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನ ಮಟ್ಟದ ಅಧಿಕಾರಿಗಳ ಕಚೇರಿಯಲ್ಲಿ 2019-20ರಲ್ಲಿ 184, 2020- 21ರಲ್ಲಿ 203 ಪ್ರಕರಣಗಳು ದಾಖಲಾಗಿವೆ. ಮಹಿಳಾ ದೌರ್ಜನ್ಯದ ಕುರಿತು ಜಾಗೃತಿ ಹೆಚ್ಚುತ್ತಿರುವುದರಿಂದ ವರದಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಪ್ರಕರಣಗಳ ಇತ್ಯರ್ಥ ಕೂಡ ಅಧಿಕ ಪ್ರಮಾಣದಲ್ಲಿದೆ ಎನ್ನುತ್ತಾರೆ ಇಲಾಖೆಯ ಅಧಿಕಾರಿಗಳು.

“ಸಖಿ’ಗೆ ಹೊಸರೂಪ
ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವಿವಿಧ ನೆರವು ಒದಗಿಸುವ ಕೇಂದ್ರದ “ಸಖಿ’ ಸೆಂಟರ್‌ 2019ರ ಜ.26ರಿಂದ ಸರಕಾರಿ ಲೇಡಿಗೋಷನ್‌ ಸರಕಾರಿ ಆಸ್ಪತ್ರೆಯ ಕಟ್ಟಡ ದಲ್ಲಿ ಸೇವೆ ಒದಗಿಸುತ್ತಿದೆ. ಈಗ ಲೇಡಿಗೋಷನ್‌ ಆಸ್ಪತ್ರೆಯ ಆವರಣ ದಲ್ಲೇ ಇರುವ ನೂತನ ಎಂಸಿಎಚ್‌ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಪ್ರತ್ಯೇಕವಾಗಿ ಸೇವೆ ಒದಗಿಸಲು ಸಿದ್ಧಗೊಳ್ಳುತ್ತಿದೆ. ಅಂದಾಜು 48 ಲ.ರೂ. ವೆಚ್ಚದಲ್ಲಿ ಇದನ್ನು ಸಿದ್ಧಗೊಳಿಸಲಾಗುತ್ತಿದೆ. “ಸಖಿ’ಯಲ್ಲಿ ತಿಂಗಳಿಗೆ ಸರಾಸರಿ 20ರಿಂದ 25 ಮಂದಿಗೆ ನೆರವು ಒದಗಿಸಲಾಗುತ್ತಿದೆ. ಉಡುಪಿ ಜಿಲ್ಲಾ ಕೇಂದ್ರದಲ್ಲಿ “ಸಖಿ’ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ 2015-16ರಿಂದ 2022ರ ಮಾರ್ಚ್‌ ಅಂತ್ಯದವರೆಗೆ ಒಟ್ಟು 669 ಪ್ರಕರಣಗಳಲ್ಲಿ ನೆರವು ಒದಗಿಸಲಾಗಿದೆ.

ಸಂಪರ್ಕ ಹೇಗೆ?
ಮಹಿಳಾ ಸಹಾಯವಾಣಿ 181ಗೆ ಕರೆ ಮಾಡಿದರೆ “ಸಖಿ ಅಥವಾ ಸಾಂತ್ವನ ಕೇಂದ್ರದ ನೆರವು ಪಡೆಯಬಹುದು. 112ಗೆ ಕರೆ ಮಾಡಿದರೂ ಸಲಹೆ ದೊರೆಯುತ್ತದೆ. “ಸಖಿ’ ಕೇಂದ್ರದಲ್ಲಿ ವಿವಿಧ ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿ ಒಂದೇ ಸೂರಿನಡಿ ವಿವಿಧ ನೆರವನ್ನು ಉಚಿತವಾಗಿ ನೀಡಲಾಗುತ್ತಿದೆ. ಸಾಂತ್ವನ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅನುದಾನ ಒದಗಿಸುತ್ತಿದ್ದು, ವಿವಿಧ ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಉಚಿತ ನೆರವು ಒದಗಿಸಲಾಗುತ್ತದೆ.

ಜಿಲ್ಲಾ ಕೇಂದ್ರಗಳ ಸಾಂತ್ವನ ಕೇಂದ್ರಗಳನ್ನು ಮತ್ತೆ ತೆರೆಯಲು ಸರಕಾರ ಆದೇಶ ನೀಡಿದ್ದು, ಅದರಂತೆ ತೆರೆಯಲಾಗಿದೆ. ಜತೆಗೆ ತಾಲೂಕುಗಳಲ್ಲಿಯೂ ಇವು ಕಾರ್ಯನಿರ್ವಹಿಸುತ್ತಿವೆ. ದೌರ್ಜನ್ಯಕ್ಕೊಳಗಾದ ಮಹಿಳೆಯರು ಸಖಿ ಅಥವಾ ಸಾಂತ್ವನ ಕೇಂದ್ರಗಳಲ್ಲಿ ನೆರವು ಪಡೆಯಬಹುದಾಗಿದೆ.
-ಪಾಪಾ ಬೋವಿ, ಉಪನಿರ್ದೇಶಕರು,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ

ಮಂಗಳೂರಿನಲ್ಲಿ 2001ರಲ್ಲಿ ಪ್ರಜ್ಞಾ ಸಲಹಾ ಕೇಂದ್ರದಿಂದ “ಸಾಂತ್ವನ ಕೇಂದ್ರ’ ಆರಂಭವಾಗಿತ್ತು. ಆ ಬಳಿಕ ರಾಜ್ಯದ ವಿವಿಧೆಡೆ ಆರಂಭಿಸಲಾಗಿತ್ತು. ತಾಲೂಕು ಮಟ್ಟದಲ್ಲಿಯೂ ತೆರೆದಿದ್ದವು. ಮಂಗಳೂರಿನ ಕೇಂದ್ರದಲ್ಲಿ ಇದುವರೆಗೆ 4,864 ವಿವಿಧ ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಸಾಂತ್ವನ ಜಿಲ್ಲಾ ಮಟ್ಟದ ಸಮಿತಿಯ ಅಧ್ಯಕ್ಷರಾದ ಜಿ.ಪಂ. ಸಿಇಒ ಡಾ| ಕುಮಾರ್‌ ಅವರ ಶಿಫಾರಸಿನಂತೆ ಸಾಂತ್ವನ ಕೇಂದ್ರ ಪುನರಾರಂಭಕ್ಕೆ ಸರಕಾರ ಸೂಚಿಸಿದೆ. ಶೋಷಣೆಗೊಳಗಾದ ಮಹಿಳೆಯರಿಗೆ ನೆರವು ಒದಗಿಸುವ ಅವಕಾಶವನ್ನು ಮತ್ತೆ ಮಾಡಿಕೊಟ್ಟಿರುವುದರಿಂದ ನೆಮ್ಮದಿಯಾಗಿದೆ.
-ಪ್ರೊ| ಹಿಲ್ಡಾ ರಾಯಪ್ಪನ್‌,
ನಿರ್ದೇಶಕರು, ಪ್ರಜ್ಞಾ ಸಲಹಾ ಕೇಂದ್ರ, ಮಂಗಳೂರು

-ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.