I.N.D.I.A: 19ರಂದು ಪ್ರತಿಪಕ್ಷಗಳ ಮೈತ್ರಿಕೂಟದ ಸಭೆ
- ಲೋಕಸಭೆ ಸೀಟು ಹೊಂದಾಣಿಕೆಯೇ ಪ್ರಮುಖ ಅಜೆಂಡಾ
Team Udayavani, Dec 10, 2023, 9:35 PM IST
ನವದೆಹಲಿ: ಪ್ರತಿಪಕ್ಷಗಳ ಮೈತ್ರಿಕೂಟ ಐಎನ್‌ಡಿಐಎ ಉನ್ನತ ನಾಯಕರ ಸಭೆ ಇದೇ ತಿಂಗಳ 19ರಂದು ನಡೆಯುವ ಸಾಧ್ಯತೆಯಿದ್ದು, ಮುಂಬರುವ ಲೋಕಸಭೆ ಚುನಾವಣೆಯ ಸೀಟು ಹಂಚಿಕೆಯೇ ಈ ಸಭೆಯ ಪ್ರಮುಖ ಅಜೆಂಡಾ ಎನ್ನಲಾಗಿದೆ. ಪಂಚರಾಜ್ಯ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ಕಾರಣ ಸೀಟು ಹೊಂದಾಣಿಕೆ ಮಾತುಕತೆಯು ಕಾಂಗ್ರೆಸ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಬಹುದು ಎಂದು ವಿಶ್ಲೇಷಿಸಲಾಗಿದೆ.
ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆ ವೇಳೆಯೇ ಕಾಂಗ್ರೆಸ್ ಮತ್ತು ಅಖೀಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ನಡುವೆ ಮಾತಿನ ಚಕಮಕಿ ನಡೆದಿತ್ತು. ಫಲಿತಾಂಶ ಬಂದಾಗಲೂ, “ಕಾಂಗ್ರೆಸ್‌ನ ದುರ್ವರ್ತನೆಯೇ ಸೋಲಿಗೆ ಕಾರಣ” ಎಂದು ಎಸ್‌ಪಿ ಪ್ರತಿಕ್ರಿಯೆ ನೀಡಿತ್ತು. ಇದಾದ ಬಳಿಕ ಅಖೀಲೇಶ್ ಯಾದವ್ ಜತೆ ಮಾತುಕತೆ ನಡೆಸಿರುವ ಕಾಂಗ್ರೆಸ್ ನಾಯಕರು ಭಿನ್ನಾಭಿಪ್ರಾಯಗಳಿಗೆ ಅಂತ್ಯ ಹಾಡಿದ್ದಾರೆ ಎನ್ನಲಾಗಿದೆ.
ಅದರಂತೆ, ಮೈತ್ರಿಕೂಟದ ಎಲ್ಲ ನಾಯಕರ ಲಭ್ಯತೆಯನ್ನು ನೋಡಿಕೊಂಡು ಡಿ.19ರಂದು ಸಭೆ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೀನಾಯ ಪ್ರದರ್ಶನವು ಲೋಕಸಭೆ ಸೀಟು ಹಂಚಿಕೆ ವಿಚಾರದಲ್ಲಿ ಪಕ್ಷಕ್ಕೆ ಹಿನ್ನಡೆ ಉಂಟುಮಾಡಬಹುದು ಎಂದೂ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.