ಶೀಘ್ರ ಪಠ್ಯಪುಸ್ತಕ ವಿತರಣೆಗೆ ಆದೇಶ: ಬಸವರಾಜ ಬೊಮ್ಮಾಯಿ
Team Udayavani, Jun 1, 2022, 1:58 AM IST
ಮಣಿಪಾಲ: ರಾಜ್ಯದ ಶಾಲಾ ಮಕ್ಕಳಿಗೆ ಕೂಡಲೇ ಪಠ್ಯ ಪುಸ್ತಕ ವಿತರಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಣಿಪಾಲದ ಕಂಟ್ರಿಇನ್ ಹೊಟೇಲ್‌ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವೆಲ್ಲ ಅಂಶಗಳಿಗೆ ವಿನಾಯತಿ ನೀಡಬೇಕು ಮತ್ತು ನೀಡಬಾರದು ಎಂಬುದನ್ನು ಪರಿಶೀಲಿಸಿಕೊಂಡು ಆದಷ್ಟು ಬೇಗ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸುವ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.
ಬಿಜೆಪಿಗೆ ಸರಳ ಬಹುಮತ
ರಾಜ್ಯಸಭಾ ಚುನಾವಣೆ ಸಂಬಂಧ ಫಲಿತಾಂಶ ಏನು ಬರಲಿದೆ ಎಂಬುದು ಮುಂದೆ ತಿಳಿಯಲಿದೆ. ಏನೇನು ಬೆಳವಣಿಗೆಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ಹೆಚ್ಚುವರಿಯಾಗಿ ತಲಾ 32 ಮತಗಳಿದ್ದು, ಕಾಂಗ್ರೆಸ್‌ನಲ್ಲಿ ಅದಕ್ಕಿಂತ ಕಡಿಮೆಯಿದೆ. ಹಾಗೆಯೇ ಎರಡನೇ ಪ್ರಾಶಸ್ತ್ಯದ ಮತದಲ್ಲೂ ಬಿಜೆಪಿ ಹೆಚ್ಚಿದೆ. ಹೀಗಾಗಿ ಮೇಲ್ನೋಟದ ಲೆಕ್ಕಾಚಾರದಲ್ಲಿ ನಾವು ಸ್ಪಷ್ಟ ಗೆಲವು ಸಾಧಿಸಲಿದ್ದೇವೆ.
ಎರಡನೇ ಪ್ರಾಶಸ್ತ್ಯದ ಮತಗಳನ್ನು ಲೆಕ್ಕ ಹಾಕಿದಾಗ ನಮಗೆ ಸರಳ ಬಹುಮತ ಬರುತ್ತದೆ. ಎಲ್ಲ ಕಡೆ ನಮ್ಮ ಸ್ನೇಹಿತರು ಇದ್ದಾರೆ ಹೀಗಾಗಿಯೇ ಮೂರನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದೇವೆ.
ಈವರಿಗೆ ಯಾರ ಜತೆಗೂ ಮಾತುಕತೆ ನಡೆಸಿಲ್ಲ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ಅವರ ಜತೆಗಿದ್ದು, ಅಲ್ಲಿಂದ ಉಡುಪಿಗೆ ಬಂದಿದ್ದೇನೆ ಎಂದರು.
ಕರಾವಳಿಯಲ್ಲಿ ಹೆಚ್ಚುತ್ತಿರುವ ಲವ್ ಜೆಹಾದ್ ಪ್ರಕರಣಗಳನ್ನು ಪೊಲೀಸ್ ಇಲಾಖೆ ನೋಡಿಕೊಳ್ಳಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi: ರೈಲು ಬಡಿದು ವ್ಯಕ್ತಿ ಸಾವು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.