Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Team Udayavani, Nov 5, 2024, 2:19 AM IST
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಮಣ್ಣಿನಡಿ ಸಿಲುಕಿ ಪತ್ತೆಯಾಗದ ಇಬ್ಬರು ಸಂತ್ರಸ್ತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು 2 ತಿಂಗಳೊಳಗಾಗಿ ರಾಜ್ಯ ಸರಕಾರ ಬಿಡುಗಡೆ ಮಾಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಮಣ್ಣಿನಡಿ ಸಿಲುಕಿರುವ ಜನರ ರಕ್ಷಣೆ ಹಾಗೂ ಪತ್ತೆ, ಹೆದ್ದಾರಿಯಲ್ಲಿ ಬಿದ್ದಿರುವ ಕಲ್ಲು-ಮಣ್ಣು ತೆರವುಗೊಳಿಸಲು ಸಾಧ್ಯವಿರುವ ಎಲ್ಲ ಕ್ರಮ ಜರಗಿಸಬೇಕು ಮತ್ತು ಸೇನಾಪಡೆ ನಿಯೋಜಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ನಗರದ ವಕೀಲರಾದ ಸಿ.ಜಿ. ಮಲೈಯಿಲ್ ಮತ್ತು ಕೆ.ಎಸ್. ಸುಭಾಷ್ ಚಂದ್ರ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ಈ ಆದೇಶ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddapura: ಗುಜರಿ ಅಂಗಡಿಗೆ ವಿವಿಧ ಇಲಾಖೆ ಪುಸ್ತಕಗಳ ಮಾರಾಟ
Sirsi: ಅಧಿಕಾರ ಯಾರಿಗೂ ಶಾಶ್ವತವಲ್ಲ, ಸಭಾಪತಿ ಪಕ್ಷಾತೀತವಾಗಿ ಇರಬೇಕು: ಬಸವರಾಜ್ ಹೊರಟ್ಟಿ
Yellapura: ಗೂಡಂಗಡಿಗೆ ನುಗ್ಗಿದ ಇಳಿಜಾರಿನಲ್ಲಿ ನಿಲ್ಲಿಸಿದ್ದ ಲಾರಿ
ಗರ್ಭ ಧರಿಸಿದ್ದ ಹಸು ಕಡಿದ ಪ್ರಕರಣ: ಗೋವು ಹಂತಕರ ಸುಳಿವು ಕೊಟ್ಟರೆ 50 ಸಾವಿರ ಬಹುಮಾನ
Yellapur: ಎರಡು ಲಾರಿಗಳ ಮಧ್ಯೆ ಸಿಲುಕಿದ ಕಾರು; ಪ್ರಯಾಣಿಕರು ಪಾರು