KSRTC ಯಿಂದ “ನಮ್ಮ ಕಾರ್ಗೋ-ಟ್ರಕ್” ಸೇವೆ ಆರಂಭ
Team Udayavani, Dec 23, 2023, 11:52 PM IST
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ “ನಮ್ಮ ಕಾರ್ಗೋ-ಟ್ರಕ್’ ಸೇವೆಯನ್ನು ಆರಂಭಿಸಿದೆ. “ನಿಮ್ಮ ವಿಶ್ವಾಸ-ನಮ್ಮ ಕಾಳಜಿ” ಶೀರ್ಷಿಕೆಯಡಿ ಈ ಸೇವೆಯನ್ನು ಆರಂಭಿಸಲಾಗಿದ್ದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶನಿವಾರ ಈ ಯೋಜನೆಗೆ ಚಾಲನೆ ನೀಡಿ, 20 ನೂತನ ಟ್ರಕ್‌ಗಳಿಗೆ ಹಸುರು ನಿಶಾನೆ ತೋರಿಸಿದರು.
ಬಳಿಕ ಮಾತನಾಡಿದ ಸಚಿವರು, ಮುಂದಿನ ಒಂದು ತಿಂಗಳಿನಲ್ಲಿ 100 ಟ್ರಕ್‌ಗಳು ಸೇವೆಗೆ ಲಭ್ಯವಿರಲಿವೆ. ಒಂದು ವರ್ಷದೊಳಗೆ 500 ಟ್ರಕ್‌ಗಳನ್ನು ಸೇರಿಸಲಾಗುವುದು ಎಂದರು. ಪ್ರಸಕ್ತ ಪೀಣ್ಯದಲ್ಲಿರುವ ನಿಗಮದ ಬಸವೇಶ್ವರ ಬಸ್ ನಿಲ್ದಾಣವನ್ನು ನಮ್ಮ ಕಾರ್ಗೋ ಟ್ರಕ್ ಟರ್ಮಿನಲ್ ಆಗಿ ಪರಿವರ್ತಿಸಲಾಗುವುದು. ಕಾರ್ಯಾಚರಣೆ ಹಾಗೂ ನಿರ್ವಹಣೆಗಾಗಿ ಘಟಕವನ್ನಾಗಿ ಬಳಸಿ, ಬಸ್ ನಿಲ್ದಾಣದಲ್ಲಿರುವ ಸ್ಥಳವನ್ನು ಸರಕಾರಿ ಸಂಸ್ಥೆಗಳಿಗೆ ನೀಡಿ ವಾಣಿಜ್ಯ ಅಗತ್ಯಕ್ಕಾಗಿ ಬಳಸಲಾಗುವುದು ಎಂದರು.
ಟ್ರಕ್ ಸೇವೆಯು ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ದಾವಣಗೆರೆಯಿಂದ ಕರ್ನಾಟಕ ರಾಜ್ಯದ ವಿವಿಧ ಸ್ಥಳಗಳಿಗೆ ಲಭ್ಯವಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
MUST WATCH
ಹೊಸ ಸೇರ್ಪಡೆ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.