“ನಮ್ಮ ಸಂಬಂಧ ಯಾವಾಗ್ಲೂ ಚಿರಂಜೀವಿಯಾಗೇ ಇರುತ್ತೆ ಬಂಗಾರ’
ಅಗಲಿದ ನಟ ಚಿರಂಜೀವಿ ಸರ್ಜಾಗೆ ಕುಟುಂಬದ ಭಾವನಾತ್ಮಕ ಪತ್ರ
Team Udayavani, Jun 18, 2020, 8:27 AM IST
ನಟ ಚಿರಂಜೀವಿ ಸರ್ಜಾ ಅಕಾಲಿಕ ನಿಧನ ಅವರ ಕುಟುಂಬ, ಅಭಿಮಾನಿಗಳಲ್ಲಿ ಶೋಕ ಮಡುಗಟ್ಟುವಂತೆ ಮಾಡಿದೆ. ಈ ನಡುವೆ ನಟ ಚಿರಂಜೀವಿ ಸರ್ಜಾ ಅವರ ಹನ್ನೊಂದನೇ ದಿನದ ಕಾರ್ಯ ಇತ್ತೀಚೆಗೆ ನಡೆಯಿತು. ಈ ಸಮಯದಲ್ಲಿ ಸರ್ಜಾ ಕುಟುಂಬ ಅಗಲಿದ ನಟ ಚಿರಂಜೀವಿ ಸರ್ಜಾಗೆ ಆಪ್ತವಾಗಿ, ಭಾವನಾತ್ಮಕ ಪತ್ರವೊಂದನ್ನು ಬರೆದಿದೆ.
“ನೀನೇ ನಮ್ಮ ಮಗನಾಗಿ ನಮ್ಮ ಮಡಿಲಿಗೆ ಬಂದುಬಿಡು ಕಂದ” ಎಂದು ಕುಟುಂಬಸ್ಥರು ಚಿರಂಜೀವಿಗೆ ಪತ್ರದ ಮೂಲಕ ಮನವಿ ಮಾಡಿದಾರೆ. ಮನೆ ಮಗನಿಗೆ ಮನವಿ ಎನ್ನುವ ತಲೆಬರಹೆದೊಡನೆ ಪತ್ರ ಬರೆಯಲಾಗಿದ್ದು ಪತ್ರದ ಪೂರ್ಣ ಪಾಠ ಹೀಗಿದೆ- ಚಿನ್ನ ಮಗನೇ, ನಿನ್ನ ಮನ್ಸಿಗೆ ಯಾರಾದ್ರೂ ಬೇಜಾರು ಮಾಡಿದ್ರೆ, ನೀನು ಕೋಪ ಮಾಡ್ಕೊಂಡು ಸ್ವಲ್ಪ ಮಾತಾಡ್ದಿದ್ರು, ನಮ್ಮನ್ನ ಬೈಕೊಂಡಿದ್ರು, ನಮಗೆ ಹೇಳ್ದೆ ಯಾವ್ದಾರು ಊರಿಗೆ ಹೋಗಿ ಬಂದಿದ್ರು ಪರವಾಗಿರ್ತಿರ್ಲಿಲ್ಲ.
ಆದ್ರೆ ವಾಪಸ್ಸೇ ಬರಕ್ಕಾಗ್ದಿರೋ ಅಂತ ಊರಿಗೆ ಹೋಗಿ ನಮ್ಗೆಲ್ಲ ಇಂತ ಶಿಕ್ಷೆ ಕೊಟ್ಬಿಟ್ಟಲ್ಲಪ್ಪ. ಕಣ್ಣು ಮುಚ್ಚಿದ್ರು ನೀನೆ, ಕಣ್ಣು ತೆರೆದ್ರು ನೀನೆ, ನಿನ್ನ ನಗು ಮುಖ. ಸರಿ ಸ್ವಲ್ಪ ದಿನ ಆದ್ಮೇಲೆ ಮರ್ತುಬಿಡ್ತಾರೆ ಅಂತ ನೀನು ತಿಳ್ಕೊಂಡಿದ್ರೆ ಅದು ಸುಳ್ಳು. ನಮ್ಮೆಲ್ಲರಿಗೂ ಇದು ದೊಡ್ಡ ಗಾಯ, ಆರದೇ ಇರೋ ಅಂತ ಗಾಯ. ಯಾವಾಗ್ಲೂ ನೀನು ನಮ್ಮ ಮನಸ್ಸಲ್ಲಿ, ಹೃದಯದಲ್ಲಿ ಇರ್ತಿಯ ಕಂದ.
ನಿನ್ನ ತಾತ ನಿಂಗೆ ಚಿರಂಜೀವಿ ಅಂತ ಹೆಸರಿಟ್ರು. ಅದ್ಯಾವತ್ತು ಸುಳ್ಳಾಗಲ್ಲ. ನಿನ್ನ ಮಾತು, ನಿನ್ನ ಚಿರುನಗು, ನಿನ್ನ ನೆನಪು, ನಮ್ಮ ಸಂಬಂಧ ಯಾವಾಗ್ಲೂ ಚಿರಂಜೀವಿಯಾಗೇ ಇರುತ್ತೆ ಬಂಗಾರ.
ಚಿರು, ಎಲ್ರು ಹೇಳ್ತಾರೆ ಈ ನೋವನ್ನ ತಡ್ಕೊಳ್ಳೋ ಶಕ್ತಿ ಆ ದೇವರು ನಿಮ್ಮ ಇಡೀ ಕುಟುಂಬಕ್ಕೆ ಕೊಡ್ಬೇಕು ಅಂತ. ಆದ್ರೆ ಅದು ನಿನ್ನ ಕೈಯಲ್ಲೇ ಇದೆ. ಹೇಗೆ ಅಂದ್ರೆ, ನೀನೇ ನಿನ್ನ ಮಗುವಾಗಿ ನಮ್ಮ ಮಡಿಲಿಗೆ ಬಂದ್ಬಿಡು ಕಂದ. ಆ ಮಗು ನಗುವಿನಲ್ಲೇ ನಿನ್ನ ನೋಡ್ತೀವಿ please. We miss you and Love you so much.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.