ಬಿಜೆಪಿಯಷ್ಟೇ ನಮ್ಮ ಗುರಿ, ಯದುವೀರ್‌ರನ್ನು ಗುರಿಯಾಗಿಸಿಕೊಳ್ಳದಿರಿ: ಸಿಎಂ ಸೂಚನೆ

ಸಿಕ್ಕ ಸಿಕ್ಕಂತೆ ಹೇಳಿಕೆ ಕೊಡಬೇಡಿ, ಭಾಷಣ ಮಾಡುವಾಗ ಎಚ್ಚರಿಕೆಯಿಂದ ಮಾತನಾಡಿ

Team Udayavani, Mar 24, 2024, 9:30 PM IST

ಬಿಜೆಪಿಯಷ್ಟೇ ನಮ್ಮ ಗುರಿ, ಯದುವೀರ್‌ರನ್ನು ಗುರಿಯಾಗಿಸಿಕೊಳ್ಳದಿರಿ: ಸಿಎಂ ಸೂಚನೆ

ಮೈಸೂರು: ಕಾಂಗ್ರೆಸ್‌ ಪಕ್ಷದ ಮುಖಂಡರು, ಸಚಿವರು, ಸ್ಥಳೀಯ ಅಭ್ಯರ್ಥಿಗಳು ಯಾರೂ ಕೂಡಾ ನಮ್ಮ ಪ್ರತಿಸ್ಪರ್ಧಿ ಯದುವೀರ್‌ ಒಡೆಯರ್‌ ಅವರನ್ನು ವೈಯಕ್ತಿಕವಾಗಿ ಗುರಿಯಾಗಿಸಿಕೊಂಡು ಮಾತನಾಡುವುದಾಗಲಿ, ಹೇಳಿಕೆ ನೀಡುವುದಾಗಲಿ ಮಾಡಬೇಡಿ. ನಮ್ಮ ಗುರಿ ಏನಿದ್ದರೂ ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ 10 ವರ್ಷಗಳಿಂದ ನಡೆಸಿರುವ ದುರಾಡಳಿತದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಿ. ನಮ್ಮ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಯನ್ನು ಮನೆ-ಮನೆಗೂ ತಿಳಿಸಿ, ನಮ್ಮ ಪಕ್ಷದ ಅಭ್ಯರ್ಥಿ ಪರ ಮತ ಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮೈಸೂರಿನ ಖಾಸಗಿ ಹೊಟೇಲ್‌ನಲ್ಲಿ ರವಿವಾರ ನಡೆದ ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳ ಕಾಂಗ್ರೆಸ್‌ ಪಕ್ಷದ ಜನಪ್ರತಿನಿಧಿಗಳು ಹಾಗೂ ಮುಂಚೂಣಿ ನಾಯಕರ ಸಭೆಯಲ್ಲಿ ಮಾತನಾಡಿದ ಅವರು, ಹಳೇ ಮೈಸೂರು ಭಾಗದಲ್ಲಿ ರಾಜ ವಂಶಸ್ಥರ ಜತೆ ಜನರು ಭಾವನಾತ್ಮಕ ಸಂಬಂಧ ಇಟ್ಟುಕೊಂಡಿದ್ದಾರೆ. ಆದ್ದರಿಂದ ಯದುವೀರ್‌ ಒಡೆಯರ್‌ ಅವರನ್ನು ಮಹಾರಾಜ, ರಾಜವಂಶಸ್ಥ ಎಂದು ಪದೇಪದೆ ಉಲ್ಲೇಖಿಸದೆ ಬಿಜೆಪಿ ಅಭ್ಯರ್ಥಿ ಎಂದು ಹೇಳಿ. ಅವರ ವಿರುದ್ಧ ಸಿಕ್ಕಸಿಕ್ಕಂತೆ ಹೇಳಿಕೆಗಳನ್ನು ಕೊಡಬೇಡಿ, ಭಾಷಣ ಮಾಡುವಾಗ ಎಚ್ಚರಿಕೆಯಿಂದ ಮಾತನಾಡಿ ಎಂದು ಕಿವಿಮಾತನ್ನು ಹೇಳಿದ್ದಾರೆ.

ಬಿಜೆಪಿಯವರಿಗೆ ಆಹಾರವಾಗಬಾರದು
ಭಾವನಾತ್ಮಕ ವಿಚಾರಗಳನ್ನು ತಿರುಚುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಹೀಗಾಗಿ ನಿಮ್ಮ ಹೇಳಿಕೆಗಳು ಬಿಜೆಪಿಯವರಿಗೆ ಆಹಾರವಾಗಬಾರದು. ಈ ಕಾರಣದಿಂದ ಯದುವೀರ್‌ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ಸಿಎಂ ಪದೇಪದೆ ಒತ್ತಿ ಹೇಳಿದರು.

ವೈಯಕ್ತಿಕ ಟೀಕೆ ಬೇಡ: ಸೇಠ್
ಸಿದ್ದರಾಮಯ್ಯ ಅವರಿಗಿಂತ ಮೊದಲು ಭಾಷಣ ಮಾಡಿದ ಕಾಂಗ್ರೆಸ್‌ ನೂತನ ಕಾರ್ಯಾಧ್ಯಕ್ಷ ತನ್ವೀರ್‌ ಸೇಠ್ ಕೂಡ ಇದೇ ಮಾತನ್ನು ಸೂಚ್ಯವಾಗಿ ಕಾರ್ಯಕರ್ತರಿಗೆ ಹೇಳಿದರು. ನೀವು ಯಾರನ್ನೇ ಆಗಲಿ ವೈಯಕ್ತಿಕವಾಗಿ ಗುರಿಯಾಗಿಸಿಕೊಂಡು ಮಾತನಾಡಲು ಹೋಗಬೇಡಿ. ಏನೋ ಮಾತನಾಡಿ ಅಂತಿಮವಾಗಿ ಪಕ್ಷಕ್ಕೆ ಮುಜುಗರ ಉಂಟುಮಾಡಬೇಡಿ. ಚುನಾವಣ ಸಮಯದಲ್ಲಿ ಸಣ್ಣ ವಿಚಾರಗಳು ಕೂಡಾ ದೊಡ್ಡದಾಗುತ್ತಾ ಹೋಗುತ್ತವೆ ಎಂದು ಹೇಳಿದರು.

ಟಾಪ್ ನ್ಯೂಸ್

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.