Kerala: ಅಯ್ಯಪ್ಪ ದರ್ಶನ ಅವ್ಯವಸ್ಥೆ ವಿರುದ್ಧ ಆಕ್ರೋಶ

ಸಂಸತ್‌ ಎದುರು ಯುಡಿಎಫ್ ಸಂಸದರ ಪ್ರತಿಭಟನೆ - 12 ಗಂಟೆ ಸಾಲಿನಲ್ಲಿ ನಿಂತದ್ದಕ್ಕೆ ಆಕ್ರೋಶ

Team Udayavani, Dec 13, 2023, 12:28 AM IST

shabarimala

ತಿರುವನಂತಪುರ/ಪತ್ತನಂತಿಟ್ಟ/ಹೊಸದಿಲ್ಲಿ: ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಭೇಟಿ ನೀಡುವ ಸಾವಿರಾರು ಭಕ್ತರಿಗೆ ಅನುಕೂಲವಾಗುವ ವ್ಯವಸ್ಥೆಗಳು ಇಲ್ಲವೆಂಬ ವಿಚಾರ ಈಗ ಕೋಲಾಹಲಕ್ಕೆ ಕಾರಣವಾಗಿದೆ. ಜತೆಗೆ 12 ಗಂಟೆಗೂ ಹೆಚ್ಚು ಕಾಲ ದೇವರ ದರ್ಶನಕ್ಕೆ ಕಾದು ನಿಲ್ಲಬೇಕಾದ ವಿಚಾರವೂ ಆಕ್ರೋಶಕ್ಕೆ ಕಾರಣವಾಗಿದೆ.

ಶ್ರೀಕ್ಷೇತ್ರದಲ್ಲಿ ಜನಸಂದಣಿ ನಿಯಂತ್ರಣಕ್ಕೆ ಹಾಗೂ ವಾಹನಗಳ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಟಿಡಿಬಿ ಅಗತ್ಯ ಮುನ್ನೆಚರಿಕೆ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಖಂಡಿಸಿ ಹೊಸದಿಲ್ಲಿಯಲ್ಲಿ ಸಂಸತ್‌ ಭವನದ ಎದುರು ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಸದಸ್ಯರು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಆರ್‌ಎಸ್‌ಪಿ ಸಂಸದ ಎನ್‌.ಕೆ. ಪ್ರೇಮಚಂದ್ರನ್‌ ಕೂಡ ರಾಜ್ಯಸಭೆಯಲ್ಲಿ ಈ ಅಂಶವನ್ನು ಪ್ರಸ್ತಾಪಿವಿ ಗಮನ ಸೆಳೆದಿದ್ದಾರೆ.

ತಿರುವನಂತಪುರದಲ್ಲಿರುವ ತಿರುವಾಂಕೂರು ದೇವಸ್ವಂ ಮಂಡಳಿಯ ಕಚೇರಿ ಸೇರಿದಂತೆ ಕೇರಳದ ವಿವಿಧ ಭಾಗಗಳಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಸಮಸ್ಯೆ ಏನಾಗಿದೆ?
ಶಬರಿಮಲೆಯಲ್ಲಿ ಭಕ್ತರ ಸಂದಣಿ ಹೆಚ್ಚಿರುವ ಹಿನ್ನೆಲೆಯಲ್ಲಿ ವಾಹನ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಪಂಪಾ ನದಿ ತೀರದಲ್ಲಿ ಸತತ ಐದು ದಿನಗಳಿಂದ ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ. ಸಂಚಾರ ದಟ್ಟಣೆ ನಿಯಂತ್ರಿಸಲು ಟಿಡಿಬಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಲ್ಲ ಎಂದು ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತೀವ್ರ ಜನಸಂದಣಿ ಹಿನ್ನೆಲೆಯಲ್ಲಿ ಅನೇಕ ಭಕ್ತರು ಅಯ್ಯಪ್ಪನ ದರ್ಶನ ಮಾಡಲು ಸಾಧ್ಯವಾಗದೇ, ದೂರದಿಂದಲೇ ಗೋಪುರಕ್ಕೆ ನಮಸ್ಕರಿಸಿ ಮರಳುತ್ತಿರು ವುದು ಕಂಡುಬಂದಿದೆ. ಅಲ್ಲದೇ ಹಲವು ಭಕ್ತರು ಪಂಡಾಲಂನಲ್ಲಿ ಸ್ವಾಮಿಗೆ ತುಪ್ಪದ ಅಭಿಷೇಕ ನೆರವೇರಿಸಿ, ಮರಳುತ್ತಿದ್ದಾರೆ.

ಭಕ್ತರಿಗಾಗಿ ಪಂಪಾದಿಂದ ನಿಳಕ್ಕಲ್‌ಗೆ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮವು ವಿಶೇಷವಾಗಿ 654 ಬಸ್‌ಗಳನ್ನು ಮೀಸಲಿಟ್ಟರೂ ಅದರ ಪೂರ್ಣ ಬಳಕೆ ಮಾಡಲಾಗುತ್ತಿಲ್ಲ ಎಂದು ಆರೋಪಿಸಲಾಗಿದೆ.

ಸೂಕ್ತ ಸೌಲಭ್ಯ ಕಲ್ಪಿಸುವಂತೆ ಸೂಚನೆ
ಶಬರಿಮಲೆ ಯಲ್ಲಿ ತೀವ್ರಗೊಂಡಿರುವ ಭಕ್ತರ ಸಂದಣಿ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಮಂಗಳ ವಾರ ವಿಶೇಷ ಸಭೆ ನಡೆಸಿದರು.

ಸಭೆಯಲ್ಲಿ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್‌, ಅರಣ್ಯ ಸಚಿವ ಶಶಿಧರನ್‌, ಸರಕಾರದ ಮುಖ್ಯ ಕಾರ್ಯದರ್ಶಿ, ಟಿಡಿಬಿ ಅಧ್ಯಕ್ಷರು, ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಭಾಗಹಿಸಿದ್ದರು. ಈ ವೇಳೆ ಯಾತ್ರಾರ್ಥಿಗಳಿಗೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಕೇರಳ ಸಿಎಂ ಸೂಚಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಪಿಣರಾಯಿ ವಿಜಯನ್‌, “ಮಂಡಲ ಪೂಜೆ ಹಿನ್ನೆಲೆಯಲ್ಲಿ ಪ್ರತೀ ವರ್ಷದಂತೆ ಭಕ್ತರ ಸಂದಣಿ ಹೆಚ್ಚಿದೆ. ವಿಪಕ್ಷಗಳು ಸುಖಾಸುಮ್ಮನೆ ಈ ವಿಷಯ ವನ್ನು ವಿವಾದ ಮಾಡುತ್ತಿವೆ” ಎಂದು ಹೇಳಿದರು.

ವರ್ಚುವಲ್‌ ಬುಕಿಂಗ್‌ ಇದ್ದವರಿಗೆ ಮಾತ್ರ ಪ್ರವೇಶ: ಹೈಕೋರ್ಟ್‌ ಸೂಚನೆ
ವರ್ಚುವಲ್‌ ಬುಕ್ಕಿಂಗ್‌ ಅಥವಾ ಸ್ಥಳದಲ್ಲೇ ನೋಂದಣಿಯಾಗದ ಭಕ್ತರಿಗೆ ದೇಗಲ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಕೇರಳ ಸರಕಾರಕ್ಕೆ ಕೇರಳ ಹೈಕೋರ್ಟ್‌ ಸೂಚನೆ ನೀಡಿದೆ. 12 ಗಂಟೆಗಳಿಗಿಂತಲೂ ಹೆಚ್ಚು ಕಾಲ ಸರತಿಯಲ್ಲಿ ನಿಲ್ಲಬೇಕಾದ ಅನಿವಾರ್ಯದ ಬಗ್ಗೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ನಿರ್ದೇಶನ ನೀಡಿದೆ. ಶಬರಿಮಲೆ ಯಾತ್ರಾರ್ಥಿಗಳಿಗೆ ಅನು ಕೂಲವಾಗುವ ನಿಟ್ಟಿನಲ್ಲಿ ಸ್ಥಳೀಯ ಕಾಲೇಜುಗಳು ಎನ್‌ಎಸ್‌ಎಸ್‌ ಮತ್ತು ಎನ್‌ಸಿಸಿ ಕೆಡೆಟ್‌ಗಳ ಸಹಾಯ ಪಡೆಯುವಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ(ಟಿಡಿಬಿ) ಹೈಕೋರ್ಟ್‌ ನಿರ್ದೇಶನ ನೀಡಿದೆ. ಇದೇ ವೇಳೆ ಪಂಪಾದಿಂದ ಶಬರಿಮಲೆ ದೇಗುಲದವರೆಗೆ ಸ್ವತ್ಛತೆ ಕಾಪಾಡುವಂತೆ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಟಿಡಿಬಿಗೆ ಹೈಕೋರ್ಟ್‌ ಸೂಚಿಸಿದೆ.

ವಾರಾಂತ್ಯದಲ್ಲಿ ಹಠಾತ್‌ ಆಗಿ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ವಿಶೇಷವಾಗಿ 5ರಿಂದ 10 ವರ್ಷದವರ ಮಕ್ಕಳು ಹೆಚ್ಚಾಗಿ ಬಂದಿದ್ದಾರೆ. ಸರತಿಯಲ್ಲಿ ನಿಂತಿರುವ ಭಕ್ತರಿಗಾಗಿ 42 ಲಕ್ಷ ಬಿಸ್ಕತ್‌ಗಳನ್ನು ಆರ್ಡರ್‌ ಮಾಡಲಾಗಿದೆ. ಜತೆಗೆ ಕಾಫಿ, ಕುಡಿಯಲು ಬಿಸಿನೀರು ವ್ಯವಸ್ಥೆ ಮಾಡಲಾಗಿದೆ.
ಪಿ.ಎಸ್‌. ಪ್ರಶಾಂತ್‌, ಟಿಡಿಬಿ ಅಧ್ಯಕ್ಷ

ಟಾಪ್ ನ್ಯೂಸ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.