ಹಿರಿಯ ಪತ್ರಕರ್ತ ವಿನೋದ್ ದುವಾ ಪತ್ನಿ, ರೆಡಿಯೋಲಾಜಿಸ್ಟ್ ಪದ್ಮಾವತಿ ಕೋವಿಡ್ ನಿಂದ ನಿಧನ
ಅಪೂರ್ವ ಸೀರೆಗಳ ಸಂಗ್ರಹದಿಂದಾಗಿ ಸಾಮಾಜಿಕ ಜಾಲತಾಣದಲ್ಲಿ ಪದ್ಮಾವತಿ ಅವರು ಜನಪ್ರಿಯರಾಗಿದ್ದರು.
Team Udayavani, Jun 12, 2021, 8:35 AM IST
ನವದೆಹಲಿ:ಹಿರಿಯ ಪತ್ರಕರ್ತ ವಿನೋದ್ ದುವಾ ಪತ್ನಿ, ಖ್ಯಾತ ವಿಕಿರಣಶಾಸ್ತ್ರಜ್ಞೆ ಪದ್ಮಾವತಿ ದುವಾ(61ವರ್ಷ) ಶುಕ್ರವಾರ(ಜೂನ್ 11) ಕೋವಿಡ್ 19 ಸೋಂಕಿನಿಂದ ನಿಧನರಾಗಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ಚಿನ್ನಾ ದುವಾ ಎಂದೇ ಜನಪ್ರಿಯರಾಗಿದ್ದ ಪದ್ಮಾವತಿ ದುವಾ ಅವರು ಕೋವಿಡ್ 19 ಸೋಂಕು ದೃಢಪಟ್ಟ ನಂತರ ಮೇ 13ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಪದ್ಮಾವತಿ ಅವರ ಆರೋಗ್ಯ ಸ್ಥಿತಿ ಸುಧಾರಿಸದ ಹಿನ್ನೆಲೆಯಲ್ಲಿ ಗುರ್ಗಾಂವ್ ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಪತಿ ವಿನೋದ್ ದುವಾ ಅವರಿಗೂ ಕೋವಿಡ್ 19 ದೃಢಪಟ್ಟಿದ್ದು, ಜೂನ್ 7ರಂದು ಸೋಂಕಿನಿಂದ ಗುಣಮುಖರಾಗಿದ್ದರು. ಆದರೆ ಪತ್ನಿ ಪದ್ಮಾವತಿ ಅವರ ಆರೋಗ್ಯದ ಬಗ್ಗೆ ನಿರಂತರವಾಗಿ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಳ್ಳುತ್ತಿದ್ದರು. ಇಂದು ಬೆಳಗ್ಗೆ ಚಿನ್ನಾ ವಿಧಿವಶ ಎಂದು ವಿನೋದ್ ದುವಾ ಟ್ವೀಟ್ ಮಾಡಿದ್ದರು.
ಪದ್ಮಾವತಿ ಅವರು ಪತಿ ವಿನೋದ್, ಪುತ್ರಿಯರಾದ ಮಲ್ಲಿಕಾ ದುವಾ ಮತ್ತು ಬಕುಲ್ ದುವಾ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ತಮ್ಮಲ್ಲಿನ ಅಪೂರ್ವ ಸೀರೆಗಳ ಸಂಗ್ರಹದಿಂದಾಗಿ ಸಾಮಾಜಿಕ ಜಾಲತಾಣದಲ್ಲಿ ಪದ್ಮಾವತಿ ಅವರು ಜನಪ್ರಿಯರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.