Pakistan: ಹೆಚ್ಚು ಸ್ಥಾನ ಗೆದ್ದರೂ ಇಮ್ರಾನ್‌ ಪಕ್ಷಕ್ಕಿಲ್ಲ ಸರಕಾರ ರಚನೆ ಭಾಗ್ಯ

ಪಾಕ್‌ನಲ್ಲಿ ಕೊನೆಗೂ ಮುಗಿದ ಮತ ಎಣಿಕೆ: ಅತಂತ್ರ ಸ್ಥಿತಿ ನಿರ್ಮಾಣ

Team Udayavani, Feb 12, 2024, 12:04 AM IST

IMRAN KHAN

ಇಸ್ಲಾಮಾಬಾದ್‌: ಪಾಕಿಸ್ಥಾನ‌ ಸಂಸತ್‌ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ರವಿವಾರ ಕೊನೆಗೂ ಮುಕ್ತಾಯಗೊಂಡಿದೆ. ಆದರೆ ಗೊಂದಲ ಮಾತ್ರ ಇನ್ನೂ ಮುಂದುವರಿದಿದೆ.

ಪಾಕಿಸ್ಥಾನ‌ ನ್ಯಾಶನಲ್‌ ಅಸೆಂಬ್ಲಿ ಚುನಾವಣೆಯಲ್ಲಿ ಮಾಜಿ ಪಿಎಂ ಇಮ್ರಾನ್‌ ಖಾನ್‌ರ ಪಾಕಿಸ್ಥಾನ್‌ತೆಹ್ರೀಕ್‌-ಇ-ಇನ್ಸಾಫ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಗಳು 103 ಸ್ಥಾನಗಳನ್ನು ಗಳಿಸಿದ್ದಾರೆ. ಆದರೆ ಸರಕಾರ ರಚಿಸಲು ಸರಳ ಬಹುಮತಕ್ಕೆ 31 ಸಂಸದರ ಕೊರತೆ ಎದುರಾಗಿದೆ. ಅಲ್ಲದೆ 73 ಸ್ಥಾನಗಳಲ್ಲಿ ಜಯ ಸಾಧಿಸಿರುವ ಮಾಜಿ ಪಿಎಂ ನವಾಜ್‌ ಶರೀಫ್ ನೇತೃತ್ವದ ಪಾಕಿಸ್ಥಾನ‌ ಮುಸ್ಲಿಂ ಲೀಗ್‌- ನವಾಜ್‌ (ಪಿಎಂಎಲ್‌-ಎನ್‌) ಪಕ್ಷವು ಈಗಾಗಲೇ 54 ಸ್ಥಾನ ಗಳಲ್ಲಿ ಗೆದ್ದಿರುವ ಬಿಲಾವಲ್‌ ಭುಟ್ಟೋ ಜರ್ದಾರಿ ನೇತೃತ್ವದ ಪಾಕಿಸ್ಥಾನ‌ ಪೀಪಲ್ಸ್‌ ಪಾರ್ಟಿ (ಪಿಪಿಪಿ) ಹಾಗೂ 17ರಲ್ಲಿ ಜಯ ಸಾಧಿಸಿರುವ ಕರಾಚಿ ಮೂಲದ ಮುತ್ತಾಹಿದಾ ಕ್ವಾಮಿ ಮೂವ್‌ಮೆಂಟ್‌- ಪಾಕಿಸ್ಥಾನ‌ (ಎಂಕ್ಯೂಎಂ-ಪಿ) ಪಕ್ಷದೊಂದಿಗೆ ಮೈತ್ರಿ ಮಾತುಕತೆ ನಡೆಸಲಾರಂಭಿಸಿದೆ. ನವಾಜ್‌ ಶರೀಫ್ ಪಕ್ಷಕ್ಕೆ ಪಾಕ್‌ನ ಬಲಿಷ್ಠ ಸೇನೆಯ ಬೆಂಬಲವಿರುವ ಕಾರಣ, ಇಮ್ರಾನ್‌ ಖಾನ್‌ ಪಕ್ಷ ಸರಕಾರ ರಚಿಸುವ ಸಾಧ್ಯತೆ ಕ್ಷೀಣಿಸಿದೆ. 103 ಸ್ಥಾನಗಳನ್ನು ಗಳಿಸಿದರೂ ಸರಕಾರ ರಚಿಸಲಾಗದ ಇಮ್ರಾನ್‌ ಪಕ್ಷಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಇದೇ ವೇಳೆ ಚುನಾವಣೆ­ಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಇಮ್ರಾನ್‌ ನೇತೃತ್ವದ ಪಿಟಿಐ ಪಕ್ಷ ದೇಶಾದ್ಯಂತ ಪ್ರತಿಭಟನೆಗೆ ತೀರ್ಮಾನಿಸಿದೆ. ಮತ್ತೂಂದೆಡೆ ಚುನಾವಣೆ ಅಕ್ರಮಗಳ ವಿರುದ್ಧ ಪಾಕಿಸ್ಥಾನ‌­ದಾದ್ಯಂತ ಕೋರ್ಟ್‌ಗಳಿಗೆ ಅರ್ಜಿಗಳ ಮಹಾಪೂರವೇ ಹರಿದುಬರುತ್ತಿವೆ. ಲಾಹೋರ್‌ ಹೈಕೋರ್ಟ್‌ಗೆ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಇಸ್ಲಾಮಾಬಾದ್‌, ಸಿಂಧ್‌ ಹೈಕೋರ್ಟ್‌ಗಳಲ್ಲೂ ದಾವೆಗಳನ್ನು ಹೂಡಲಾಗಿದೆ.

ಪಿಎಂ ಹುದ್ದೆ ಒಪ್ಪಲು ನವಾಜ್‌ ಹಿಂದೇಟು?: ತಾಂತ್ರಿಕವಾಗಿ ಹೇಳುವುದಿದ್ದರೆ ನವಾಜ್‌ ಶರೀಫ್ ಪಕ್ಷವೇ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಪಾಕ್‌ ಸೇನೆ ಈಗಾಗಲೇ ಮಾಜಿ ಪ್ರಧಾನಿ ನವಾಜ್‌ ಶರೀಫ್ರನ್ನು ಬೆಂಬಲಿಸುವ ಮಾತುಗಳನ್ನಾಡಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಮಾಜಿ ಪ್ರಧಾನಿ ಶರೀಫ್ ಪ್ರಧಾನಿ ಹುದ್ದೆ ಸ್ವೀಕರಿಸದೆ, ಸಹೋದರ ಶೆಹಬಾಜ್‌ ಶರೀಫ್ರನ್ನೇ ಪ್ರಧಾನಿ ಹುದ್ದೆಗೆ ಕೂರಿಸಿ, ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.