ಟಿ20 ಸರಣಿ: ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲು ಪಾಕಿಸ್ತಾನಕ್ಕೆ ಗ್ರೀನ್ ಸಿಗ್ನಲ್
ಪ್ರಧಾನಿ ಇಮ್ರಾನ್ ಖಾನ್ ಭೇಟಿಯಾಗಿ ಚರ್ಚೆ ನಡೆಸಿದ ಪಿಸಿಬಿ ಅಧ್ಯಕ್ಷ
Team Udayavani, Jun 17, 2020, 2:55 PM IST
ಕರಾಚಿ : ಕೋವಿಡ್-19 ಹಾವಳಿಯಿಂದ ಸ್ಥಗಿತಗೊಂಡಿದ್ದ ಕೆಲವೊಂದು ಕ್ರೀಡಾಕೂಟಗಳನ್ನು ನಿರ್ಬಂಧಗಳನ್ವಯ ನಡೆಸಲು ತಯಾರಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿಯೇ ಪಾಕಿಸ್ತಾನ ಕ್ರಿಕೆಟ್ ತಂಡದ ಇಂಗ್ಲೆಂಡ್ ಪ್ರವಾಸಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅನುಮತಿ ನೀಡಿದ್ದು, ಈ ತಿಂಗಳ ಅಂತ್ಯದಲ್ಲಿ ಪ್ರಯಾಣ ಪ್ರಾರಂಭವಾಗಲಿದೆ ಎಂದು ಅವರು ಹೇಳಿದ್ದಾರೆ.
ಪಿಸಿಬಿ ಅಧ್ಯಕ್ಷ ಎಹ್ಸಾನ್ ಮಣಿ ಇಸ್ಲಾಮಾಬಾದ್‌ನಲ್ಲಿ ಇಮ್ರಾನ್ ಖಾನ್ ಭೇಟಿಯಾಗಿ ಕ್ರಿಕೆಟ್ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದು, ಆ ಈ ವಿಷಯದ ಕುರಿತಾಗಿ ಅನುಮೋದನೆ ಹೊರಡಿಸಲಾಗಿದೆ.
“ಕೋವಿಡ್ ವೈರಸ್ ನಡುವೆಯೂ ಕ್ರಿಕೆಟ್ ಮತ್ತು ಇತರ ಕ್ರೀಡಾ ಚಟುವಟಿಕೆಗಳನ್ನು ಪುನಾರಂಭಿಸಲು ಜನರು ಬಯಸುತ್ತಿರುವುದರಿಂದ ಪಾಕಿಸ್ತಾನ ತಂಡವು ಟೆಸ್ಟ್ ಮತ್ತು ಟಿ- 20 ಸರಣಿಗಾಗಿ ಇಂಗ್ಲೆಂಡ್‌ಗೆ ಹೋಗಬೇಕು ಎಂದು ಪ್ರಧಾನಿ ಮಣಿಗೆ ತಿಳಿಸಿದರು” ಎಂದು ಪಿಸಿಬಿ ಮೂಲಗಳು ತಿಳಿಸಿವೆ.
ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಎಲ್ಲ ಆಟಗಾರರು ಮತ್ತು ಅಧಿಕಾರಿಗಳ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ಸರಿಯಾದ ಪ್ರೋಟೋಕಾಲ್ ಜಾರಿಗೆ ತರಬೇಕು ಎಂದು ಇಮ್ರಾನ್ ಪಿಸಿಬಿ ಮುಖ್ಯಸ್ಥರಿಗೆ ತಿಳಿಸಿದ್ದು, ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಮೂರು ಟೆಸ್ಟ್ ಮತ್ತು ಮೂರು ಟಿ – 20 ಸರಣಿ ಆಡಲು ಪಾಕಿಸ್ತಾನ ತಂಡ ಈ ತಿಂಗಳ ಅಂತ್ಯದ ವೇಳೆಗೆ ಇಂಗ್ಲೆಂಡ್ ತಲುಪಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿದೆ.
ಇನ್ನು ಒಟ್ಟು 29 ಆಟಗಾರರು ಮತ್ತು 14 ಅಧಿಕಾರಿಗಳು ಈ ಒಂದು ಪ್ರಯಾಣದಲ್ಲಿ ಭಾಗಿಯಾಗಲಿದ್ದು, ಇಂಗ್ಲೆಂಡ್ ತಲುಪಿದ ಬಳಿಕ 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರುತ್ತಾರೆ. ಆ ಬಳಿಕ ಮೂರು – ನಾಲ್ಕು ವಾರಗಳ ಕಾಲ ಅವರನ್ನು ಸುರಕ್ಷಿತ ವಾತಾವರಣದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.