ಶಾಸಕಾಂಗ ಸಭೆಗೆ ಪರಮೇಶ್ವರ್‌ ಗೈರು

Team Udayavani, Sep 19, 2019, 3:06 AM IST

parameshwar

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗುವ ಮೂಲಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಗಳಿಂದ ಅಂತರ ಕಾಯ್ದು ಕೊಳ್ಳುವ ಯತ್ನ ಮುಂದುವರಿಸಿದ್ದಾರೆ. ಆ ಮೂಲಕ ಸಿದ್ದರಾಮಯ್ಯಗೆ ಸಂದೇಶ ರವಾನೆ ಮಾಡಿದ್ದಾರೆ.

ಪ್ರತಿಪಕ್ಷ ನಾಯಕನ ಆಯ್ಕೆ ಕುರಿತಂತೆ ಮಂಗಳವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದ ಪರಮೇಶ್ವರ್‌, ಬುಧವಾರವೂ ದೆಹಲಿ ಯಲ್ಲಿಯೇ ಉಳಿದುಕೊಂಡಿರುವುದು ಕುತೂಹಲಕ್ಕೆ ಕಾರಣ ವಾಗಿದೆ. ಪಕ್ಷದಲ್ಲಿ ಎಲ್ಲವೂ ಸಿದ್ದರಾಮಯ್ಯ ಅಣತಿಯಂತೆ ನಡೆಯುತ್ತಿದ್ದು, ದಿನೇಶ್‌ ಗುಂಡೂರಾವ್‌ ಕೂಡ ಸಿದ್ದರಾಮಯ್ಯ ಸೂಚನೆಯಂತೆ ನಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಪಕ್ಷದ ವಲಯದಲ್ಲಿ ಕೇಳಿ ಬರುತ್ತಿದೆ.

ಪರಮೇಶ್ವರ್‌ ಕೂಡ ಅದೇ ಕಾರಣಕ್ಕೆ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಡಿಸಿಎಂ ಸ್ಥಾನದಿಂದ ಪರಮೇಶ್ವರ್‌ ಕೆಳಗಿಳಿದ ನಂತರ ಬೆಂಗಳೂರಿನಲ್ಲಿಯೇ ಇದ್ದರೂ, 17 ಕ್ಷೇತ್ರಗಳಿಗೆ ಉಪ ಚುನಾವಣೆ ಸಿದ್ಧತೆ ಕುರಿತು ದಿನೇಶ್‌ ಗುಂಡೂರಾವ್‌ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಗಳಿಗೆ ಹಾಜರಾಗದೇ ದೂರ ಉಳಿದಿದ್ದರು.

ಪಕ್ಷದ ಪದಾಧಿಕಾರಿಗಳ ಆಯ್ಕೆ ಹಾಗೂ ಪ್ರತಿಪಕ್ಷ ನಾಯಕ ಕುರಿತಂತೆಯೂ ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡು ರಾವ್‌ ಮಾತ್ರ ಪ್ರತ್ಯೇಕವಾಗಿ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿ ಅನುಮೋದನೆ ಪಡೆಯಲು ಪ್ರಯತ್ನಿಸಿದ್ದರು. ಆದರೆ, ಅವರಿಗೆ ಸೋನಿಯಾ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ. ಆದರೆ, ದೆಹಲಿಗೆ ತೆರಳಿದ ನಾಲ್ಕೇ ದಿನದಲ್ಲಿ ಪರಮೇಶ್ವರ್‌ ಏಕಾಂಗಿಯಾಗಿ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿ ರಾಜ್ಯ ರಾಜಕಾರಣದ ಬಗ್ಗೆ ಚರ್ಚಿಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಅನರ್ಹ ಶಾಸಕರ ಕ್ಷೇತ್ರಗಳ ಚುನಾವಣೆ ಕುರಿತಂತೆಯೇ ಚರ್ಚಿಸಲು ದೆಹಲಿಯಿಂದ ಸಿದ್ದರಾಮಯ್ಯ ಹಾಗೂ ದಿನೇಶ್‌ ವಾಪಸ್‌ ಬಂದಿದ್ದರು. ಆದರೆ, ಅಧಿಕೃತ ಶಾಸಕಾಂಗ ಪಕ್ಷದ ಸಭೆ ಕರೆದಿದ್ದರೂ, ದೆಹಲಿಯಲ್ಲಿಯೇ ಉಳಿದು ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಅಹಮದ್‌ ಪಟೇಲ್‌ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಹೈಕಮಾಂಡ್‌ ನಾಯಕರ ಭೇಟಿಯ ನಂತರ ಮಾಧ್ಯಮಗ ಳೊಂದಿಗೆ ಮಾತನಾಡಿದ ಅವರು, ಒಂದು ವರ್ಷದಿಂದ ಸೋನಿಯಾ ಅವರನ್ನು ಭೇಟಿ ಮಾಡಿರಲಿಲ್ಲ. ಹೀಗಾಗಿ ಅವರನ್ನು ಭೇಟಿ ಮಾಡಿ ಅರ್ಧ ಗಂಟೆ ಚರ್ಚೆ ನಡೆಸಿದ್ದೇನೆ. ಪಕ್ಷವನ್ನು ಯಾವ ರೀತಿ ಮತ್ತೆ ಸಂಘಟಿಸಬೇಕು. ಮಧ್ಯಂತರ ಚುನಾವಣೆ ನಡೆದರೆ ಪಕ್ಷವನ್ನು ಯಾವ ರೀತಿ ಮುನ್ನಡೆಸಬೇಕು ಎನ್ನುವ ಕುರಿತು ಚರ್ಚೆ ನಡೆಸಿದ್ದೇವೆ. ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತು ಸೋನಿಯಾ ಗಾಂಧಿ ಜೊತೆಗೆ ಚರ್ಚೆ ನಡೆಸಿಲ್ಲ ಎಂದರು.

ಪರಮೇಶ್ವರ್‌ ಅವರು ಸೋನಿಯಾಗಾಂಧಿ ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ. ನಾನು ಭೇಟಿ ಮಾಡಬೇಡಿ ಅಂತ ಹೇಳಲು ಆಗುತ್ತದೆಯೇ? ನಾವು ಭೇಟಿ ಮಾಡಲು ಹೋದಾಗ ಅವರು ಬೇರೆ ಕೆಲಸದಲ್ಲಿ ಬಿಜಿಯಾಗಿ ದ್ದರು. ಸದ್ಯಕ್ಕೆ ನಾನು ದೆಹಲಿಗೆ ಹೊಗುತ್ತಿಲ್ಲ.
-ಸಿದ್ದರಾಮಯ್ಯ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ

ಟಾಪ್ ನ್ಯೂಸ್

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

Bigg Boss Telugu 8: ಬಿಗ್‌ಬಾಸ್‌ ತೆಲುಗು ಗೆದ್ದ ಮೈಸೂರಿನ ಹುಡುಗ: ಯಾರು ಈ ನಿಖಿಲ್?

Bigg Boss Telugu 8: ಬಿಗ್‌ಬಾಸ್‌ ತೆಲುಗು ಗೆದ್ದ ಮೈಸೂರಿನ ಹುಡುಗ: ಯಾರು ಈ ನಿಖಿಲ್?

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

Someshwar Beach: ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

PMML: Return Nehru’s letter collection: Centre’s letter to Rahul

PMML: ನೆಹರು ಅವರ ಪತ್ರ ಸಂಗ್ರಹವನ್ನು ಮರಳಿಸಿ: ರಾಹುಲ್‌ ಗೆ ಕೇಂದ್ರದ ಪತ್ರ

Chhattisgarh: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ

Road Mishap: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ

Vijay Diwas:ಕೋಲ್ಕತ್ತಾಗೆ ಮರಳಲಿದೆ ಬಾಂಗ್ಲಾ ಸ್ವಾತಂತ್ರ್ಯ ಹಬ್ಬ-ಇಂದಿನ ಸ್ಥಿತಿಗತಿ ಹೇಗಿದೆ

Vijay Diwas:ಕೋಲ್ಕತ್ತಾಗೆ ಮರಳಲಿದೆ ಬಾಂಗ್ಲಾ ಸ್ವಾತಂತ್ರ್ಯ ಹಬ್ಬ-ಇಂದಿನ ಸ್ಥಿತಿಗತಿ ಹೇಗಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Food-safe

Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?

Belagvi-Suvrana-Soudha

Winter Session: ಇಂದಿನಿಂದ “ಉತ್ತರ’ ಅಧಿವೇಶನ; 3 ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ

Anwar-Manippady

Waqf: ಪ್ರಕರಣ ಮುಚ್ಚಿಹಾಕಲು ಕಾಂಗ್ರೆಸ್‌ನವರಿಂದಲೇ ಲಂಚದ ಆಮಿಷ: ಮಾಣಿಪ್ಪಾಡಿ ಆರೋಪ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

ಆಳ್ವಾಸ್‌ ವಿರಾಸತ್‌ಗೆ ತೆರೆ; ಮೂಡುಬಿದಿರೆಯಲ್ಲಿ 6 ದಿನ ಕಳೆಗಟ್ಟಿದ್ದ ಸಂಭ್ರಮ

ಆಳ್ವಾಸ್‌ ವಿರಾಸತ್‌ಗೆ ತೆರೆ; ಮೂಡುಬಿದಿರೆಯಲ್ಲಿ 6 ದಿನ ಕಳೆಗಟ್ಟಿದ್ದ ಸಂಭ್ರಮ

Bigg Boss Telugu 8: ಬಿಗ್‌ಬಾಸ್‌ ತೆಲುಗು ಗೆದ್ದ ಮೈಸೂರಿನ ಹುಡುಗ: ಯಾರು ಈ ನಿಖಿಲ್?

Bigg Boss Telugu 8: ಬಿಗ್‌ಬಾಸ್‌ ತೆಲುಗು ಗೆದ್ದ ಮೈಸೂರಿನ ಹುಡುಗ: ಯಾರು ಈ ನಿಖಿಲ್?

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

Someshwar Beach: ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.