Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

Team Udayavani, Nov 12, 2024, 6:17 PM IST

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

ಉಡುಪಿ: ಬೈಲೂರು ಉಮಿಕಲ್‌ ಬೆಟ್ಟದ ಮೇಲೆ ನಿರ್ಮಿಸಿರುವ ಪರಶುರಾಮಥೀಮ್ ಪಾರ್ಕ್ ನಲ್ಲಿನ ಪರಶುರಾಮ ಮೂರ್ತಿ ನಿರ್ಮಾಣದ ಹಿಂದಿನ ಅಕ್ರಮ ವಿಳಂಬವಾಗಿ ಬೆಳಕಿಗೆ ಬಂದಿದೆ.

ವಂಚನೆ ಮಾಡಿದ ಶಿಲ್ಪಿ ಕೃಷ್ಣ ನಾಯ್ಕ ಈಗಾಗಲೇ ಬಂಧನಕ್ಕೊಳಗಾಗಿದ್ದು , ಉಳಿದ ಆರೋಪಿಗಳನ್ನು ಪೊಲೀಸರು ತತ್‌ಕ್ಷಣವೇ ಬಂಧಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಮುನಿಯಾಲು ಉದಯ ಕುಮಾರ್‌ ಶೆಟ್ಟಿ ಆಗ್ರಹಿಸಿದರು.

ಪರಶುರಾಮನ ಮೂರ್ತಿಯ ಸೊಂಟದ ಮೇಲ್ಭಾಗ ಎಲ್ಲಿಗೆ ಹೋಗಿದೆ ಎಂಬ ಬಗ್ಗೆಯೂ ಪೊಲೀಸರು ಸೂಕ್ತ ತನಿಖೆ ನಡೆಸಬೇಕು. ಈ ಅಕ್ರಮದಲ್ಲಿ ಹಲವರ ಕೈವಾಡವಿದ್ದು ಪೊಲೀಸರು ಎಲ್ಲರನ್ನು ವಿಚಾರಣೆಗೆ ಒಳಗಪಡಿಸಬೇಕು. ಪ್ರಕರಣವನ್ನು ಅತಿ ಶೀಘ್ರದಲ್ಲಿ ಇರ್ತ್ಯಪಡಿಸಿ. ಉಮಿಕಲ್‌ ಬೆಟ್ಟದ ಮೇಲೆ ಹೊಸ ಮೂರ್ತಿಯನ್ನು ನಿರ್ಮಿಸಿ ಪ್ರವಾಸಿಗರಿಗೆ ಮುಕ್ತಗೊಳಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪರಶುರಾಮನ ಮೂರ್ತಿ ವಿಚಾರದಲ್ಲಿ ಶಿಲ್ಪಿ ಕೃಷ್ಣ ನಾಯ್ಕಗೆ ತೊಂದರೆ ನೀಡುವುದು ನಮ್ಮ ಉದ್ದೇಶವಲ್ಲ. ತಪ್ಪಿಗೆ ನೇರ ಹೊಣೆಯಾಗಿರುವವರು ವಿಧಾನಸಭೆ ಸದಸ್ಯರಾಗಿದ್ದು, ಕಲಾವಿದ ಮಾತ್ರ ಜೈಲುಪಾಲಾಗಿದ್ದಾನೆ. ಮೂರ್ತಿ ನಿರ್ಮಾಣಕ್ಕೆಂದು ಮಂಜೂರಾದ 1.25 ಕೋಟಿ ರೂ.ಗಳನ್ನು ಟೆಂಡರ್‌ಗೂ ಮೊದಲೇ ಕೃಷ್ಣ ನಾಯ್ಕಗೆ ನೀಡಿದ್ದಾರೆ. ಕೇವಲ 45 ದಿನಗಳಲ್ಲಿ 33 ಅಡಿ ಕಂಚಿನ ಮೂರ್ತಿ ನಿರ್ಮಾಣ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಇದು ಕೃಷ್ಣ ನಾಯ್ಕ ಒಬ್ಬರ ಕೆಲಸವಲ್ಲ , ನಿರ್ಮಿತಿ ಕೇಂದ್ರದ ಎಂಜಿನಿಯರ್‌ಗಳು ಇದರಲ್ಲಿ ಭಾಗಿಯಾಗಿದ್ದಾರೆ. ಮೂರ್ತಿ ನಿರ್ಮಾಣದ ಹಣ ಎಲ್ಲಿಗೆ ಹೋಯಿತು ಎಂದು ಶಾಸಕ ಸುನಿಲ್‌ ಕುಮಾರ್‌ ಕಾರ್ಕಳದ ಜನರಿಗೆ ಸ್ಪಷ್ಟನೆ ನೀಡುವ ಜತೆಗೆ ಜನರ ಎದುರು ಕ್ಷಮೆಯಾಚಿಸಬೇಕು. ಈ ಅಕ್ರಮದಲ್ಲಿ ಶಾಸಕರೂ ಇರುವುದು ಸಾಬೀತಾದಲ್ಲಿ ಶಾಸಕರನ್ನೂ ಪೊಲೀಸರು ಬಂಧಿಸಬೇಕು ಎಂದರು.

ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುಭೋದ್‌ ರಾವ್‌, ತಾ.ಪಂ ಮಾಜಿ ಸದಸ್ಯ ಸುಧಾಕರ್‌ ಶೆಟ್ಟಿ, ಪುರಸಭೆ ಮಾಜಿ ಅಧ್ಯಕ್ಷ ಸುಬೀತ್‌ ಎನ್‌.ಆರ್‌., ಪುರಸಭೆಯ ಸದಸ್ಯ ವಿವೇಕಾನಂದ ಶೆಣೈ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು

Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Malpe: ಡ್ರಗ್ಸ್‌ ಪಾರ್ಸೆಲ್‌ ಹೆಸರಲ್ಲಿ ಬೆದರಿಸಿ 20 ಲ.ರೂ. ವಂಚನೆ

15

Udupi: ಪಾರ್ಟ್‌ ಟೈಮ್ ಜಾಬ್‌ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

Udupi: ಬಾಲಕಿಗೆ ಲೈಂಗಿಕ ಕಿರುಕುಳ ಸಾಬೀತು; ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

15

Malpe: ಡ್ರಗ್ಸ್‌ ಪಾರ್ಸೆಲ್‌ ಹೆಸರಲ್ಲಿ ಬೆದರಿಸಿ 20 ಲ.ರೂ. ವಂಚನೆ

15

Udupi: ಪಾರ್ಟ್‌ ಟೈಮ್ ಜಾಬ್‌ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.