Karkala ಪರಶುರಾಮ ಥೀಮ್ ಪಾರ್ಕ್: ವ್ಯತ್ಯಾಸ ಆಗಿದ್ದರೆ ತನಿಖೆ ನಡೆಸಲಿ
Team Udayavani, Sep 10, 2023, 11:04 PM IST
ಕಾರ್ಕಳ: ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ನಿರ್ಮಿಸಿರುವ ಪರಶುರಾಮ ಥೀಮ್ ಪಾರ್ಕಿನಲ್ಲಿ ಯಾವುದೇ ವ್ಯತ್ಯಾಸಗಳಾಗಿದ್ದರೆ ಜಿಲ್ಲಾಡಳಿತ ಯಾವುದೇ ರೀತಿಯ ತನಿಖೆಯನ್ನು ಮಾಡಲಿ, ನಾನು ಬೆಂಬಲ ನೀಡುತ್ತೇನೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಪರಶುರಾಮ ಥೀಂ ಪಾರ್ಕಿಗೂ ಬರುವಂತಾಗಬೇಕು. ಕಾರ್ಕಳ ಪ್ರವಾಸಿ ಕ್ಷೇತ್ರವಾಗಿ ಅಭಿವೃದ್ಧಿ ಗೊಂಡು ಆರ್ಥಿಕತೆ ಬೆಳೆಯಬೇಕು ಎಂಬ ಕಾರಣಕ್ಕಾಗಿ ಪರಶುರಾಮ ಥೀಂ ಪಾರ್ಕ್ ತರುವ ಪ್ರಯತ್ನ ನಡೆಸಲಾಗಿದೆ. ಆದರೆ ಅಭಿವೃದ್ಧಿ ಸಹಿಸದ ಕೆಲವರು ಇತ್ತೀಚೆಗೆ ಅನವಶ್ಯಕ ಆರೋಪ ಮಾಡುತ್ತಿದ್ದಾರೆ ಎಂದರು.
ಥೀಂ ಪಾರ್ಕ್‌ನ ಅಪೂರ್ಣಗೊಂಡ ಕೆಲಸ ಶೀಘ್ರ ಮುಕ್ತಾಯವಾಗಬೇಕು, ಆದಷ್ಟು ಬೇಗ ಸಾರ್ವಜನಿಕರ ವೀಕ್ಷಣೆಗೆ ತೆರೆದುಕೊಳ್ಳಬೇಕು, ಜಿಲ್ಲಾಡಳಿತ ಈ ಕುರಿತಂತೆ ಕ್ರಮ ವಹಿಸಲಿದೆ. ಉದ್ಘಾಟನೆಯ ಸಂದರ್ಭ ಕಾಮಗಾರಿ ಮುಕ್ತಾಯವಾಗಿಲ್ಲ. ವಿಗ್ರಹವನ್ನು ಬಲಯುತ ಮಾಡಲು ಕೆಲವು ಸಮಯ ಬೇಕು. ಅದನ್ನು ಮಾರ್ಚ್ ಅನಂತರ ಮಾಡಿಕೊಳ್ಳುತ್ತೇವೆ ಎಂದಿದ್ದೆವು. ಅದಾದ ಬಳಿಕ ಈಗ ಕಾಮಗಾರಿ ನಡೆಯುತ್ತಿದೆ ಎಂದರು.
ಮಣಿರಾಜ್ ಶೆಟ್ಟಿ, ಜಯರಾಮ್ ಸಾಲ್ಯಾನ್, ನವೀನ್ ನಾಯಕ್, ಪ್ರವೀಣ್ ಸಾಲ್ಯಾನ್, ರಮೇಶ್ ಕಿಣಿ, ಉದಯ್ ಹೆಗ್ಡೆ, ದಯಾನಂದ, ಸಚ್ಚಿದಾನಂದ, ವಿಕ್ರಮ್ ಹೆಗ್ಡೆ, ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.