ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ
ಮೋದಿ ಆಡಳಿತದಿಂದ ಆರ್ಥಿಕ ವ್ಯವಸ್ಥೆಯಲ್ಲಿ ಭಾರತ 5ನೇ ಸ್ಥಾನಕ್ಕೆ
Team Udayavani, Apr 27, 2024, 12:29 AM IST
ಕಲಬುರಗಿ: ಎಐಸಿಸಿ ಅಧ್ಯಕ್ಷ ಡಾ| ಮಲ್ಲಿಕಾರ್ಜುನ ಖರ್ಗೆ ಮತ್ತು ಐಎನ್‌ಡಿಐಎ ಒಕ್ಕೂಟಕ್ಕೆ ಕೇವಲ ಎರಡೇ ಧ್ಯೇಯಗಳಿದ್ದು, ಒಂದು “ಪರಿವಾರ ಬಚಾವೋ, ಎರಡನೆಯದ್ದು “ಭ್ರಷ್ಟಾಚಾರ ಬಚಾವೋ’. ಇವುಗಳನ್ನು ಬಿಟ್ಟರೆ ಅವರಿಗೆ ಬೇರೆ ಯಾವುದೇ ಕಾರ್ಯಕ್ರಮಗಳಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.
ಶುಕ್ರವಾರ ನಗರದ ಗಣೇಶ ಮಂದಿರದಿಂದ ಭಾರೀ ಜನಸ್ತೋಮದೊಂದಿಗೆ ನಡೆದ ಬೃಹತ್ ರೋಡ್ ಶೋ ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಲಬುರಗಿಯ ಖರ್ಗೆ ಮತ್ತು ಇಂಡಿಯಾ ಒಕ್ಕೂಟ ರಾಷ್ಟ್ರದ ಹಿತಾಸಕ್ತಿ, ಅಭಿವೃದ್ಧಿಗೆ ಗಮನಕೊಡದೇ ಪ್ರಸಕ್ತ ಚುನಾವಣೆಯಲ್ಲಿ ತಮ್ಮ ಪರಿವಾರ ಹಾಗೂ ಭ್ರಷ್ಟಾಚಾರ ರಕ್ಷಿಸುವ ಎರಡೇ ಎರಡು ಅಜೆಂಡಾ ಆಧರಿಸಿ ಚುನಾವಣೆ ಕಣಕ್ಕಿಳಿದಿದೆ. ಆದರೆ ಮೋದಿ ಸರಕಾರ ಬಲಿಷ್ಠ ಮತ್ತು ಅಭಿವೃದ್ಧಿಯ ಕನಸಿನದ್ದಾಗಿದೆ. ಕಾಂಗ್ರೆಸ್ ಹಗರಣಗಳ ಸರಕಾರವಾಗಿದೆ. ನೂರಾರು ಹಗರಣಗಳಲ್ಲಿ ಸಿಲುಕಿದ ಕಾಂಗ್ರೆಸ್ ನಾಯಕರು ಹಾಗೂ ಐಎನ್‌ಡಿಐಎ ಒಕ್ಕೂಟದ ಮುಖಂಡರು ಒಂದೋ ಜೈಲಿನಲ್ಲಿದ್ದಾರೆ ಇಲ್ಲವೇ ಬೇಲ್‌ನಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಆಡಳಿತದಲ್ಲಿ ಗಣಿ, ಆಗಸ್ತಾ ವೆಸ್ಟ್‌ಲ್ಯಾಂಡ್, 2ಜಿ, 3ಜಿ, ಕಾಮನ್ವೆಲ್ತ್, ಬಾಹ್ಯಾಕಾಶ ಹಗರಣ ಹೀಗೆ ನೂರಾರು ಹಗರಣಗಳನ್ನು ಮಾಡಿ ಭಾರತವನ್ನು ಕೊಳ್ಳೆ ಹೊಡೆಯಲಾಗಿತ್ತು. ಕಾಂಗ್ರೆಸ್ ಪಕ್ಷ ಭೂಮಿ, ಆಕಾಶ, ಪಾತಾಳ ಯಾವುದನ್ನು ಬಿಡದೆ ಲೂಟಿ ಮಾಡಿದೆ. ಮಮತಾ ಸರಕಾರವು ಶಿಕ್ಷಕರ ನೇಮಕಾತಿ ಹಗರಣ, ಭೂಮಿ ಹಗರಣ, ಆಪ್ ಸರಕಾರ ಅಬಕಾರಿ ಹಗರಣ ಹೀಗೆ ಐಎನ್‌ಡಿಐಎ ಒಕ್ಕೂಟದ ಪಕ್ಷಗಳಾದ ಡಿಎಂಕೆ, ಟಿಎಂಸಿ, ಸಮಾಜವಾದಿ ಪಕ್ಷ ಹಗರಣಗಳನ್ನು ನಡೆಸಿ ರಾಷ್ಟ್ರದ ಸಂಪತ್ತು ಕೊಳ್ಳೆ ಹೊಡೆದ ದುಷ್ಟ ಕೂಟವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.