BJP: ಸಾಮಾಜಿಕ ಜಾಲತಾಣ ಬಳಕೆಗೆ ಬಿಜೆಪಿ ಒತ್ತು
Team Udayavani, Sep 10, 2023, 11:14 PM IST
"ಶಂಖನಾದ' ಅಭಿಯಾನ ಮೂಲಕ ಪಕ್ಷದ ಚಿಂತನೆ, ಕೇಂದ್ರ ಸರಕಾರದ ಸಾಧನೆಯ ಪ್ರಚಾರ
ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮುಂದಾಗಿರುವ ಬಿಜೆಪಿ, “ಶಂಖನಾದ’ ಅಭಿಯಾನಕ್ಕೆ ಚಾಲನೆ ನೀಡಿದೆ.
ದೇಶಾದ್ಯಂತ ಆರಂಭವಾಗಿರುವ ಈ ಅಭಿಯಾನಕ್ಕೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲು ಶಂಖ ಊದುವ ಮೂಲಕ ಚಾಲನೆ ನೀಡಿದರು.
ಪಕ್ಷದ ಕಾರ್ಯಕರ್ತರಷ್ಟೇ ಅಲ್ಲದೆ, ಪಕ್ಷದ ಚಿಂತನೆಗಳೊಂದಿಗೆ ಹೆಜ್ಜೆ ಹಾಕುತ್ತಿರುವ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, ಅಂಥವರಿಗೆ ಪಕ್ಷದ ವಿಚಾರಗಳನ್ನು ಪರಿಣಾಮಕಾರಿಯಾಗಿ ತಿಳಿಸುವುದು ಮತ್ತು ಕೇಂದ್ರ ಸರಕಾರದ ಸಾಧನೆಗಳನ್ನು ಮನೆ-ಮನಗಳಿಗೆ ಮುಟ್ಟಿಸುವುದು ಅಭಿಯಾನದ ಮುಖ್ಯ ಉದ್ದೇಶ.
ಜಾಗೃತಿ ಸಮಾವೇಶಗಳ ಆಯೋಜನೆ
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೇ ಸಾಮಾಜಿಕ ಮಾಧ್ಯಮ ಸಮಿತಿ ರಚಿಸಿ, ಹೆಚ್ಚು ಪ್ರಚಾರದಲ್ಲಿ ತೊಡಗಿಸಿಕೊಳ್ಳಲಾಗಿತ್ತು. ಈಗ ಪಕ್ಷದ ಅಧಿಕೃತ ಸಾಮಾಜಿಕ ಜಾಲತಾಣಗಳಾದ ಯೂಟ್ಯೂಬ್, ಫೇಸ್‌ಬುಕ್, ಟ್ವಿಟ್ಟರ್, ಇನ್‌ಸ್ಟಾಗ್ರಾಮ್ ಮೂಲಕ ಹೆಚ್ಚು ಜನರನ್ನು ತಲುಪುವುದು ಇದರ ಧ್ಯೇಯವಾಗಿದ್ದು, ಇದರೊಂದಿಗೆ ಬೂತ್ ಮಟ್ಟದಿಂದಲೂ ಇರುವ ವಾಟ್ಸ್‌ಆಪ್ ಗ್ರೂಪ್‌ಗ್ಳನ್ನು ಜಾಗೃತಗೊಳಿಸಿ ಮುಂದಿನ ಏಳೆಂಟು ತಿಂಗಳು ಸಕ್ರಿಯವಾಗಿ ಇರುವಂತೆ ನೋಡಿಕೊಳ್ಳಲು ಮುಂದಾಗಿದೆ.
ವಿನಾಕಾರಣ ಪ್ರಕರಣ ದಾಖಲು
ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸುವವರ ವಿರುದ್ಧ ಅನಗತ್ಯ ಪ್ರಕರಣ ದಾಖಲಿಸಿ, ಪೊಲೀಸರ ಮೂಲಕ ಕಿರುಕುಳ ಕೊಡಲಾಗುತ್ತಿದೆ. ಇಂಥವರಿಗೆ ಕಾನೂನಿನ ನೆರವು ನೀಡುವುದು ಮತ್ತು ಧೈರ್ಯ ತುಂಬುವುದು “ಶಂಖನಾದ’ದ ಮತ್ತೂಂದು ಉದ್ದೇಶ. ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಅಭಿಯಾನ ಸಹಕಾರಿಯಾಗಲಿದೆ ಎಂದು ರಾಜ್ಯ ಬಿಜೆಪಿ ಸಾಮಾಜಿಕ ಮಾಧ್ಯಮ ಪ್ರಕೋಷ್ಠದ ಸಂಚಾಲಕ ವಿಕಾಸ್ ಪುತ್ತೂರು ತಿಳಿಸಿದ್ದಾರೆ.
ಕಾಂಗ್ರೆಸ್‌ಗಿಂತ ಹೆಚ್ಚು ಅನುಯಾಯಿಗಳು
ಕಳೆದ ಚುನಾವಣೆ ಸಂದರ್ಭದಲ್ಲಿ ನಟಿ ರಮ್ಯಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಸ್ತುವಾರಿ ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಸಮೂಹ ಮಾಧ್ಯಮ ವೇದಿಕೆಯಲ್ಲಿ ಪಕ್ಷವನ್ನು ಬೆಂಬಲಿಸುವವರ ಸಂಖ್ಯೆ ಕೊಂಚ ಏರಿಕೆ ಆಗಿತ್ತು. ಕೆಲವು ನಕಲಿ ಖಾತೆಗಳ ಮೂಲಕ ಅನುಯಾಯಿಗಳನ್ನು ಹೆಚ್ಚಿಸಿಕೊಂಡ ಆರೋಪವೂ ಇತ್ತು. ಚುನಾವಣೆ ಬಳಿಕ ರಮ್ಯಾ ನೇಪಥ್ಯಕ್ಕೆ ಸರಿದರು. ಇದಾದ ಬಳಿಕ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣಗಳ ಫಾಲೋವರ್ಸ್ ಸಂಖ್ಯೆಯಲ್ಲಿ ಭಾರೀ ಏರಿಕೆ ಆಗಿಲ್ಲ. ಬಿಜೆಪಿ ತನ್ನ ಬೆಂಬಲಿಗರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಲೇ ಇದ್ದು, ಲೋಕಸಭೆ ಚುನಾವಣೆ ವೇಳೆಗೆ ಈ ಪ್ರಮಾಣವನ್ನು ಇನ್ನಷ್ಟು ವೃದ್ಧಿಸಿಕೊಳ್ಳುವ ಗುರಿ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.