ಸರಳ, ಸಾಂಪ್ರದಾಯಿಕತೆ ಮೈವೆತ್ತ ಶ್ರೀ ವಿದ್ಯಾಸಾಗರತೀರ್ಥರ ಚತುರ್ಥ ಪರ್ಯಾಯ

 ಉಡುಪಿ ಶ್ರೀಕೃಷ್ಣ ಮಠದಲ್ಲಿ  ಇಂದಿನಿಂದ 251ನೇ ಪರ್ಯಾಯ ಪೂಜಾ ಕೈಂಕರ್ಯ ಆರಂಭ

Team Udayavani, Jan 18, 2022, 6:00 AM IST

ಸರಳ, ಸಾಂಪ್ರದಾಯಿಕತೆ ಮೈವೆತ್ತ ಶ್ರೀ ವಿದ್ಯಾಸಾಗರತೀರ್ಥರ ಚತುರ್ಥ ಪರ್ಯಾಯ

ಉಡುಪಿ: ಶ್ರೀ ಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ಪೂಜೆಯ ಇತಿಹಾಸದಲ್ಲಿ 251ನೇ ಪರ್ಯಾಯ ಪೂಜೆ, ಶ್ರೀ ಕೃಷ್ಣಾಪುರ ಮಠದ ಸರದಿಯಲ್ಲಿ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಪೂಜೆ ಸನ್ನಿಹಿತವಾದ ಸಂದರ್ಭವನ್ನು ಕೃಷ್ಣ ನಗರಿ ಸಂತಸದಿಂದ ಸಂಭ್ರಮಿಸಿತು.

ಸರ್ವಜ್ಞ ಪೀಠಾರೋಹಣಗೈಯುವ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಕಾಪು ಸಮೀಪದ ದಂಡತೀರ್ಥದಲ್ಲಿ ಪವಿತ್ರ ಸ್ನಾನ ಮಾಡಿ, ಜೋಡುಕಟ್ಟೆಗೆ ಆಗಮಿಸಿದರು. ಅಲ್ಲಿ ಪಟ್ಟದ ದೇವರಿಗೆ ಪೂಜೆ ಸಲ್ಲಿಸಿ, ಸಾಂಪ್ರದಾಯಿಕತೆಯೇ ಮೈವೆತ್ತಿದ್ದ ಮೆರವಣಿಗೆಯ ಮೂಲಕ ರಥಬೀದಿ ಪ್ರವೇಶಿಸಿದರು. ಬಳಿಕ ಕನಕನ ಕಿಂಡಿಯಲ್ಲಿ ದೇವರ ದರ್ಶನಗೈದರು. ಪರ್ಯಾಯ ಪೀಠಾರೋಹಣದ ಬಳಿಕದ ವಿಧಿವಿಧಾನಗಳು ನೂತನ ಪರ್ಯಾಯ ಶ್ರೀಗಳ ಆಶಯದಂತೆ ಸರಳ, ಸಾಂಪ್ರದಾಯಿಕ ವೈಭವದಲ್ಲಿ ಜರಗಿದವು.

ಪೂರ್ಣಪ್ರಜ್ಞ ಎಂಬ ಅಭಿಧಾನವುಳ್ಳ ಮಧ್ವಾಚಾರ್ಯರು ಉಡುಪಿಯಲ್ಲಿ ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿ ಪೂಜೆಯನ್ನು ನಡೆಸುವ ಅಧಿಕಾರವನ್ನು ತಮ್ಮ ಎಂಟು ಮಂದಿ ಯತಿಶಿಷ್ಯರಿಗೆ ನೀಡಿದ್ದರು. ಎಂಟು ಮಠಗಳ ಈ ಪೀಠಾಧಿಪತಿಗಳ ನಡುವೆ ಶ್ರೀಕೃಷ್ಣ ಪೂಜೆಯ ಅಧಿಕಾರ ಹಸ್ತಾಂತರ ಪ್ರಕ್ರಿಯೆಯೇ ಪರ್ಯಾಯ.

1522ರಲ್ಲಿ ಆರಂಭವಾದ ಪರ್ಯಾಯ ವ್ಯವಸ್ಥೆ ಪ್ರತೀ 16 ವರ್ಷಗಳಿಗೆ ಒಮ್ಮೆಯ ಚಕ್ರವನ್ನು ಹಾದು ಈಗ 32ನೇ ಚಕ್ರದಲ್ಲಿದೆ. 32ನೆಯ ಚಕ್ರದಲ್ಲಿ ಎರಡನೆಯದಾದ 250ನೇ ಅದಮಾರು ಪರ್ಯಾಯ ಮುಗಿದು ಮೂರನೆಯದಾದ 251ನೇ ಪರ್ಯಾಯ ಆರಂಭಗೊಳ್ಳುತ್ತಿದೆ. 501ನೇ ವರ್ಷಕ್ಕೆ ಪಾದಾರ್ಪಣೆಯಾಗುತ್ತಿದೆ. ಶ್ರೀ ಅದಮಾರು ಮಠದ 31ನೇ ಯತಿ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪರ್ಯಾಯ ಪೀಠದಿಂದ ನಿರ್ಗಮಿಸಿ ಶ್ರೀ ಕೃಷ್ಣಾಪುರ ಮಠದ 34ನೇ ಯತಿ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಪೀಠವನ್ನೇರುವ ಕ್ಷಣವನ್ನು ಉಡುಪಿ ಮತ್ತು ಹತ್ತೂರುಗಳ ಭಕ್ತರು ಕಣ್ತುಂಬಿಕೊಂಡಿದ್ದಾರೆ.

ಸರಳ, ಸಾಂಪ್ರದಾಯಿಕತೆಗೆ ಆದ್ಯತೆ
ನೂತನ ಪರ್ಯಾಯ ಪೀಠಾಧಿಪತಿ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ತಮ್ಮ ಗುರುಗಳಾದ ಶ್ರೀ ವಿಶ್ವೋತ್ತಮ ತೀರ್ಥರಂತೆಯೇ ಸಾಂಪ್ರದಾಯಿಕತೆ, ಏಕಾಂತೋಪಾಸನೆಯಲ್ಲಿ ಹೆಚ್ಚು ಆಸಕ್ತರು. ಅವರ ಆಶಯದಂತೆ ಪರ್ಯಾಯ ಮೆರವಣಿಗೆ, ಪೂಜಾಧಿಕಾರ ಹಸ್ತಾಂತರ, ಪರ್ಯಾಯ ದರ್ಬಾರ್‌ ಇತ್ಯಾದಿ ವಿಧಿವಿಧಾನಗಳು ಸರಳ ಆದರೆ ಸಾಂಪ್ರದಾಯಿಕವಾಗಿ ನೆರವೇರಿದವು. ಸರಕಾರದ ಕೋವಿಡ್‌ ನಿಯಮಗಳ ಪಾಲನೆಗೆ ಆದ್ಯತೆ ನೀಡಲಾಗಿತ್ತು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.