ಕನ್ನಡ ಶುದ್ಧ ಪ್ರಯೋಗ ಯಕ್ಷಗಾನದ ಹಿರಿಮೆ: ಮಹಾಬಲೇಶ್ವರ
ಪಾತಾಳ ವೆಂಕಟರಮಣ ಭಟ್ ಅವರಿಗೆ ಯಕ್ಷಾಂಗಣ ಗೌರವ ಪ್ರಶಸ್ತಿ ಪ್ರದಾನ
Team Udayavani, Dec 20, 2021, 5:10 AM IST
ಮಂಗಳೂರು: ಸಾಂಸ್ಕೃತಿಕ ಹಿರಿಮೆ ಹಾಗೂ ಶುದ್ಧ ಕನ್ನಡ ಪ್ರಯೋಗ ಯಕ್ಷಗಾನದಲ್ಲಿ ಬಹುವಾಗಿ ಬಳಕೆಯಲ್ಲಿರುವ ಕಾರಣದಿಂದ ಯಕ್ಷಗಾನದ ಶ್ರೇಯಸ್ಸು ಜಗದಗಲ ಪಸರುವಂತಾಗಿದೆ ಎಂದು ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಮಹಾಬಲೇಶ್ವರ ಎಂ. ಎಸ್. ಹೇಳಿದರು.
ಕರ್ನಾಟಕ ಯಕ್ಷ ಭಾರತಿ ಪುತ್ತೂರು ಹಾಗೂ ಯಕ್ಷಾಂಗಣ ಮಂಗಳೂರು ವತಿಯಿಂದ ರವಿವಾರ ಮಂಗಳೂರು ವಿ.ವಿ. ಕಾಲೇಜಿನಲ್ಲಿ ನಡೆದ ಕೀರ್ತಿ ಶೇಷ ಕಲಾವಿದರ ಸಂಸ್ಮರಣೆ ಹಾಗೂ ಯಕ್ಷಾಂಗಣ ಪ್ರಶಸ್ತಿ ಪ್ರದಾನ ಕಾರ್ಯ
ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯಕ್ಷಗಾನದ ಹಿರಿಯ ಸ್ತ್ರೀವೇಷ
ಧಾರಿ ಪಾತಾಳ ವೆಂಕಟರಮಣ ಭಟ್ ಅವರಿಗೆ ಯಕ್ಷಾಂಗಣ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅಧ್ಯಕ್ಷತೆ ವಹಿಸಿದ್ದರು. ಕೆನರಾ ಬ್ಯಾಂಕ್ ವಲಯ ಮುಖ್ಯಸ್ಥರು ಹಾಗೂ ಪ್ರಧಾನ ವ್ಯವಸ್ಥಾಪಕ ಯೋಗೀಶ್ ಆಚಾರ್ಯ ಮುಖ್ಯ ಅತಿಥಿಯಾಗಿದ್ದರು.
ಪೂಂಜ-ಪದ್ಯಾಣ ಸಂಸ್ಮರಣೆ ಯನ್ನು ಮಂಗಳೂರು ವಿ.ವಿ. ಡಾ| ದಯಾ ನಂದ ಪೈ, ಸತೀಶ್ ಪೈ ಯಕ್ಷ ಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ| ಶ್ರೀಪತಿ ಕಲ್ಲೂರಾಯ ನಡೆಸಿದರು. ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ
ಎಸ್.ಪ್ರದೀಪ್ ಕುಮಾರ್ ಕಲ್ಕೂರ,ವಿ.ವಿ. ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ಸುಭಾಷಿಣಿ ಶ್ರೀವತ್ಸ, ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಯಕ್ಷ ಪ್ರತಿಷ್ಠಾನದ ಅಧ್ಯಕ್ಷ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ದಿ| ಪುರುಷೋತ್ತಮ ಪೂಂಜ ಅವರ ಪತ್ನಿ ಶೋಭಾ ಪೂಂಜಾ,ದಿ| ಪದ್ಯಾಣ ಗಣಪತಿ ಭಟ್ ಅವರ ಪುತ್ರ ಸ್ವಸ್ತಿಕ್ ಪದ್ಯಾಣ ಉಪಸ್ಥಿತರಿದ್ದರು. ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಪ್ರ. ಕಾರ್ಯದರ್ಶಿ ತೋನ್ಸೆ ಪುಷ್ಕಳ್ ಕುಮಾರ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
Mangaluru: ಪಿಲಿಕುಳ ಕಂಬಳ; ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
MUST WATCH
ಹೊಸ ಸೇರ್ಪಡೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.