ವೃದ್ಧೆಗೆ ಒಂದೇ ದಿನದಲ್ಲಿ ಪಿಂಚಣಿ ಭಾಗ್ಯ

ಶಾಸಕರ ಆದೇಶದಂತೆ ಸೌಲಭ್ಯ ಒದಗಿಸಿದ ತಹಶೀಲ್ದಾರ್‌ ಸಿಗ್ಬತ್ತುಲ್ಲಾ; ಮೆಚ್ಚುಗೆ

Team Udayavani, Aug 25, 2021, 5:22 PM IST

ವೃದ್ಧೆಗೆ ಒಂದೇ ದಿನದಲ್ಲಿ ಪಿಂಚಣಿ ಭಾಗ್ಯ

ಗುಡಿಬಂಡೆ: ಗ್ರಾಪಂ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ನಂತರ ವೃದ್ಧೆ ಮನವಿಗೆ ಸ್ಪಂದಿಸಿದ ಶಾಸಕ ಸುಬ್ಟಾರೆಡ್ಡಿ ಮಾಡಿದ ಆದೇಶದಂತೆ
ತಹಶೀಲ್ದಾರ್‌ ಸಿಗ್ಬತ್ತುಲ್ಲಾ ಒಂದೇ ದಿನದಲ್ಲೇ ಆಕೆಗೆ ಪಿಂಚಣಿ ಆದೇಶ ಮಾಡಿ, ಅಂಚೆ ಕಚೇರಿಯಲ್ಲಿ ಖಾತೆ ಪುಸ್ತಕ ತೆರೆದಿದ್ದಾರೆ.

ತಾಲೂಕಿನ ದಪ್ಪರ್ತಿ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಶಾಸಕ ಎಸ್‌. ಎನ್‌.ಸುಬ್ಟಾರೆಡ್ಡಿ ಆಗಮಿಸಿದ್ದ ಸಮಯದಲ್ಲಿ ಕಾಟೈಗಾರಹಳ್ಳಿ ಗ್ರಾಮದ ವೃದ್ಧೆ ರಂಗಮ್ಮ ಶಾಸಕರ ಬಳಿ ಬಂದು, ನನಗೆ ತುಂಬಾ ವಯಸ್ಸಾಗಿದೆ. ನನಗೆ ದುಡಿಯಲು ಸಹ ಆಗುತ್ತಿಲ್ಲ, ನನ್ನ ಜೀವನ ಸಹ ನಡೆಸಲು ಕಷ್ಟಕರವಾಗಿದೆ, ನನಗೆ ಪಿಂಚಣಿ ಮಾಡಿಸಿಕೊಡಿ ಎಂದು ಮನವಿ ಮಾಡಿಕೊಂಡರು.

ಇದಕ್ಕೆ ಸ್ಪಂದಿಸಿದ ಶಾಸಕರು, ಅಲ್ಲಿಯೇ ಇದ್ದ ತಹಶೀಲ್ದಾರ್‌ ಅವರನ್ನು ಕರೆಯಿಸಿ ಆಕೆಯ ದಾಖಲೆಗಳನ್ನು ಪಡೆದುಕೊಂಡು ಅತಿ ಜರೂರಾಗಿ ಪಿಂಚಣಿ ಸೌಲಭ್ಯ ಮಾಡಿಸಿಕೊಡಿ ಎಂದು ಮೌಖೀಕ ಆದೇಶ ಮಾಡಿದರು. ಇದಕ್ಕೆ ತ್ವರಿತಗತಿಯಲ್ಲಿ ಸ್ಪಂದಿಸಿದ ತಹಶೀಲ್ದಾರ್‌, ಗ್ರಾಮ
ಲೆಕ್ಕಾಧಿಕಾರಿ ಸುದರ್ಶನ್‌, ರಾಜಸ್ವ ನಿರೀಕ್ಷಕ ಅಮರನಾರಾಯಣಪ್ಪಅವರನ್ನುಬಳಿಸಿಕೊಂಡು, ಒಂದೇ ದಿನದಲ್ಲೇ ರಂಗಮ್ಮರಿಂದ ಎಲ್ಲಾ ದಾಖಲೆ ಪಡೆದುಕೊಂಡು, ಅಂಚೆ ಕಚೇರಿಯಲ್ಲಿ ಖಾತೆಯನ್ನು ತೆರೆಯಿಸಿ, ಕಂದಾಯ ಇಲಾಖೆಯಲ್ಲಿ ಕಡತವನ್ನು ಸಿದ್ಧಪಡಿಸಿ, ಆಕೆಗೆ ಒಂದೇ ದಿನದಲ್ಲಿ ಪಿಂಚಣಿ ಸೌಲಭ್ಯ ಮಾಡಿಸಿಕೊಟ್ಟಿದ್ದಾರೆ. ಈ ಕಾರ್ಯಕ್ಕೆ ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ, ಕಂದಾಯ ಇಲಾಖೆಯ ತಹಶೀಲ್ದಾರ್‌ ಸಿಗ್ಬತುಲ್ಲಾ ಮತ್ತು ಸಿಬ್ಬಂದಿಯ ಕಾರ್ಯ ವೈಖರಿಯನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:ಸಮರ್ಥ ನಾಯಕತ್ವ ಕೊರತೆ ನೀಗಿಸಲು ಜೆಡಿಎಸ್‌ ಸಜ್ಜಾಗಿದೆ

ಮಾದರಿ ಕಾರ್ಯ:ರೈತ ಸಂಘದ ವರದರಾಜು ಮಾತನಾಡಿ, ತಹಶೀಲ್ಡಾರ್‌ ಸಿಗ್ಬತುಲ್ಲಾ ಅವರು ಇಲ್ಲಿ ಅಧಿಕಾರ ಸ್ವೀಕರಿಸಿದಾಗಿನಿಂದಲೂ, ಅವರು ಬಡ ಬಗ್ಗರ ಸಹಾಯಕ್ಕೆ ನಿಂತು, ಅವರಿಗೆ ಸ್ಥಳದಲ್ಲೇ ಪಿಂಚಣಿ ಸೌಲಭ್ಯ ಒದಗಿಸಿದ್ದಾರೆ. ತಾಂತ್ರಿಕ ದೋಷಗಳಿಂದ ಪಿಂಚಣಿ ಏನಾದರೂ ನಿಂತಿದ್ದರೆ, ಅವರೇ ಮುಂದೆ ನಿಂತು, ಚಾಲ್ತಿ ಮಾಡಿಸಿಕೊಟ್ಟಿದ್ದಾರೆ. ಇವರ ಕಾರ್ಯವೈಖರಿ ಇತರರಿಗೆ ಮಾದರಿಯಾಗಬೇಕಾಗಿದೆ ಎಂದರು.

ಟಾಪ್ ನ್ಯೂಸ್

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.