ಜನರ ಮನಸ್ಥಿತಿ ಬದಲಾಗಬೇಕು: ಸಂಯುಕ್ತಾ ಹೆಗ್ಡೆ
Team Udayavani, Jun 4, 2020, 4:52 AM IST
ಸ್ವದೇಶಿ ವಸ್ತುಗಳನ್ನು ಬಳಸಿ ಚೀನಾದ ವಸ್ತುಗಳನ್ನು ಬಹಿಷ್ಕಾರ ಮಾಡಿ ಎಂಬ ಕೂಗು ಈಗ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಕೇಳಿಬರುತ್ತಿದೆ. ಹೀಗಾಗಿ ಟಿಕ್ಟಾಕ್ ಆಪ್ ಚೀನಾದ ದೇಶದ್ದು ಎಂಬ ಕಾರಣಕ್ಕೆ ಅದನ್ನು ಭಾರತದಲ್ಲಿ ಬ್ಯಾನ್ ಮಾಡಿ ಎಂದು ಕೆಲವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಈಗ ಪರ-ವಿರೋಧ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಇದರ ನಡುವೆಯೇ ಟಿಕ್ಟಾಕ್ ಬ್ಯಾನ್ ಮಾಡಿದರೆ ಜನರ ಮನಸ್ಥಿತಿ ಬದಲಾಗುವುದಿಲ್ಲ ಎಂದು ನಟಿ ಸಂಯುಕ್ತಾ ಹೆಗ್ಡೆ ಟ್ವೀಟ್ ಮಾಡಿದ್ದಾರೆ.
ಟಿಕ್ಟಾಕ್ ಬ್ಯಾನ್ ಮಾಡಬೇಡಿ ಎಂದು ಟ್ವೀಟ್ ಮಾಡಿರುವ ಸಂಯುಕ್ತಾ ಹೆಗ್ಡೆ, ಒಂದು ಪ್ಲಾಟ್ಫಾರ್ಮ್ ಅನ್ನು ನಿಷೇಧ ಮಾಡುವುದರಿಂದ ಅದರಲ್ಲಿ ಇರುವ ಜನರ ಮನಸ್ಥಿತಿ ಬದಲಾಗುವುದಿಲ್ಲ. ಈ ಪ್ಲಾಟ್ಫಾರ್ಮ್ ಅನ್ನು ನಿಷೇಧ ಮಾಡಿದರೆ ಜನ ಅವರ ಭಯಾನಕ ವಿಷಯಗಳನ್ನು ಅಪ್ಲೋಡ್ ಮಾಡಲು ಬೇರೆ ಇನ್ನೊಂದು ಆಪ್ ಅನ್ನು ಹುಡುಕಿಕೊಳ್ಳುತ್ತಾರೆ. ಆದರೆ ಟಿಕ್ಟಾಕ್ಗೆ ಏನಾದರೂ ವೈಯಕ್ತಿಕವಾಗಿ ನನಗೆ ಏನೂ ಆಗಬೇಕಿಲ್ಲ ಎಂದು ಬರೆದುಕೊಂಡಿದ್ದಾರೆ.
ಈಗಾಗಲೇ ಟಿಕ್ಟಾಕ್ ವಿಚಾರದಲ್ಲಿ ಭಾರೀ ಚೆರ್ಚೆ ಆಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈಗ ಯೂಟ್ಯೂಬ್ ವರ್ಸಸ್ ಟಿಕ್ಟಾಕ್ ಎಂಬ ಸ್ಪರ್ಧೆ ಉಂಟಾಗಿದೆ. ಕರ್ನಾಟಕದಲ್ಲೂ ಟಿಕ್ಟಾಕ್ ಬ್ಯಾನ್ ಮಾಡಿ ಎಂಬ ಸದ್ದು ಜೋರಾಗಿ ಕೇಳಿ ಬರುತ್ತಿದೆ. ಕೆಲ ಸೆಲೆಬ್ರಿಟಿಗಳೇ ಇದನ್ನು ಬ್ಯಾನ್ ಮಾಡುವಂತೆ ಟ್ವೀಟ್ ಮಾಡುತ್ತಿದ್ದಾರೆ. ಟಿಕ್ಟಾಕ್ನಲ್ಲಿ ಕೆಲ ಸೆಲೆಬ್ರಿಟಿಗಳು ವಿಡಿಯೋ ಮಾಡುತ್ತಿದ್ದರೆ, ಈ ಕಡೆ ಕೆಲ ಸೆಲೆಬ್ರಿಟಿಗಳು ಅದನ್ನು ಬ್ಯಾನ್ ಮಾಡುವಂತೆ ಟ್ವೀಟ್ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.