Road Mishap: ಬದಿಯಡ್ಕ- ಪಳ್ಳತ್ತಡ್ಕ: ಖಾಸಗಿ ಶಾಲಾ ಬಸ್- ರಿಕ್ಷಾ ಡಿಕ್ಕಿ: 5 ಮಂದಿ ಮೃತ್ಯು
Team Udayavani, Sep 25, 2023, 7:34 PM IST
ಪೆರ್ಲ: ಆಟೋ ರಿಕ್ಷಾ ಮತ್ತು ಶಾಲಾ ಬಸ್ ಪರಸ್ಪರ ಡಿಕ್ಕಿಯಾಗಿ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ಸೋಮವಾರ ಸಂಜೆ ನಡೆದಿದೆ. ತಾಯಲಂಗಡಿ ನಿವಾಸಿ ಪ್ರಸ್ತುತ ಮೊಗ್ರಾಲಿನ ನಿವಾಸಿ ರಿಕ್ಷಾ ಚಾಲಕ ಮತ್ತು ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪೆರ್ಲ ಭಾಗದಿಂದ ತೆರಳುತ್ತಿದ್ದ ಮಾನ್ಯದ ಖಾಸಗಿ ಶಾಲೆಗೆ ಸೇರಿದ ಬಸ್ ಮತ್ತು ಮೊಗ್ರಲ್ ಪುತ್ತೂರು ಮೂಲದ ರಿಕ್ಷಾ ಅಪಘಾತಕ್ಕಿಡಾಗಿರುವುದಾಗಿ ವರದಿಯಾಗಿದೆ.
ಮಕ್ಕಳನ್ನು ಪೆರ್ಲ ಭಾಗದಲ್ಲಿ ಇಳಿಸಿದ ಶಾಲಾ ಬಸ್ ಖಾಲಿಯಾಗಿ ಸಂಚರಿಸುತ್ತಿದ್ದಾಗ ಪಳ್ಳತ್ತಡ್ಕದ ಗುಳಿಗ ಬನದ ಸಮೀಪದ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ.
ಶಾಲಾ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ರಿಕ್ಷಾ ಸಂಪೂರ್ಣ ನಜ್ಜು ಗುಜ್ಜಾಗಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.