![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 15, 2023, 11:00 PM IST
ಬೆಳಗಾವಿ: ಉಡುಪಿ ನಗರಕ್ಕೆ ಶಾಶ್ವತ ಕುಡಿಯುವ ನೀರು ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ವಾರಾಹಿ ನದಿಯಿಂದ ಅಂದಾಜು 176 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿ ಮಾರ್ಚ್-ಎಪ್ರಿಲ್ ವೇಳೆಗೆ ಪೂರ್ಣಗೊಳ್ಳಲಿದ್ದು, ಕುಡಿಯುವ ನೀರಿಗೆ ಶಾಶ್ವತ ಸೌಲಭ್ಯ ದೊರೆಯಲಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಹೇಳಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಉಡುಪಿ ನಗರಕ್ಕೆ ಶಿರೂರು ಬಜೆ ಬಳಿಯಿಂದ ನೀರು ಪೂರೈಕೆ ಮಾಡಲಾಗುತ್ತಿದ್ದು, ಮೇ ತಿಂಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಒಂದು ವೇಳೆ ಸಮಸ್ಯೆಯಾದರೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ 10 ಲಕ್ಷ ರೂ.ಗಳನ್ನು ಮೀಸಲಿರಿಸಲಾಗಿದೆ.
ಉಡುಪಿ ನಗರಕ್ಕೆ ಶಾಶ್ವತ ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ವಾರಾಹಿ ನದಿನಿಂದ ನೀರು ಪೂರೈಕೆಗೆ 116 ಕೋ. ರೂ. ಹಾಗೂ 60 ಕೋ. ರೂ.ಯ 2 ಯೋಜನೆಗಳ ಅಡಿಯಲ್ಲಿ ಅಂದಾಜು 45 ಎಂಎಲ್‌ಡಿ ನೀರು ಪಡೆಯಲಾಗುತ್ತಿದ್ದು, ಮಾರ್ಚ್ -ಎಪ್ರಿಲ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಬಜೆಯಲ್ಲಿ ಹೂಳು ತೆಗೆಯುವ ಚಿಂತನೆ ಇದೆ
ಬಜೆ ಡ್ಯಾಂನಲ್ಲಿ ಹೂಳು ತೆಗೆಯುವ ಪ್ರಸ್ತಾವವಿದ್ದು, ಅದಕ್ಕೆ ಅಂದಾಜು 5 ಕೋಟಿ ರೂ.ಗಳ ಅವಶ್ಯವಿದೆ. ಆದರೆ ಇದಕ್ಕೆ ಸರಕಾರ ಯಾವುದೇ ಹಣ ನೀಡುವ ಅಗತ್ಯವಿಲ್ಲ. ಡ್ಯಾಂನಲ್ಲಿ ಹೂಳು ಜತೆಗೆ ಮರಳು ಕೂಡ ಇದೆ. ಆ ಮರಳನ್ನು ಮಾರಾಟ ಮಾಡಿದರೆ ಹೂಳೆತ್ತುವ ಖರ್ಚನ್ನು ಸರಿದೂಗಿಸಬಹುದಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಯವರು ಪ್ರಸ್ತಾವನೆ ಸಲ್ಲಿಸಿದ್ದು, ಹೂಳು ತೆಗೆಯುವವರಿಗೆ ಟೆಂಡರ್ ಕರೆಯಲಾಗುವುದು ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.