ಕಿರುತೆರೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಿ
Team Udayavani, Jun 11, 2020, 4:19 AM IST
ಬೆಂಗಳೂರು: ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡುವ ಮೂಲಕ ಆರ್ಥಿಕ ಮುಗ್ಗಟ್ಟಿನಿಂದ ಪಾರು ಮಾಡುವಂತೆ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ಕಲಾವಿದರು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರಲ್ಲಿ ಮನವಿ ಮಾಡಿದ್ದಾರೆ.
ಹಿರಿಯ ಕಲಾವಿದರಾದ ಡಿಂಗ್ರಿ ನಾಗರಾಜ್, ಲಕ್ಷ್ಮೀ ದೇವಮ್ಮ, ಬಿ.ಎಲ್. ಮಂಜುಳಾ, ಗಣೇಶ್ ರಾವ್, ಬೆಂಗಳೂರು ನಾಗೇಶ್, ಶೋಭಾ ರಾಘವೇಂದ್ರ ಇತರರು ಬುಧವಾರ ಅಶ್ವತ್ಥ ನಾರಾಯಣ ಅವರನ್ನು ಭೇಟಿಯಾಗಿದ್ದರು. ಕಿರುತೆರೆ ಚಿತ್ರೀಕರಣ ಆರಂಭಗೊಂಡರೂ ಕೆಲವು ನಿರ್ಬಂಧ ಇರುವುದರಿಂದ ಕಲಾವಿದರ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಸರ್ಕಾರ ನಮ್ಮ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿದರು.
ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಹಿರಿಯ ಕಲಾವಿದರು ಕಚೇರಿಗೆ ಭೇಟಿ ನೀಡಿದರು.
ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು 60 ವರ್ಷ ಮೇಲ್ಪಟ್ಟವರಿಗೆ ಅನುಮತಿ ನೀಡುವ ಮೂಲಕ ಆರ್ಥಿಕ ಮುಗ್ಗಟ್ಟಿನಿಂದ ಪಾರು ಮಾಡುವಂತೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಶ್ರೀ @BSYBJP ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. pic.twitter.com/yLlZUGuiqZ
— Dr. Ashwathnarayan C. N. (@drashwathcn) June 10, 2020
ಕಲಾವಿದರ ಸಮಸ್ಯೆಗಳನ್ನು ಆಲಿಸಿದ ಡಾ. ಅಶ್ವತ್ಥನಾರಾಯಣ, ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಭರವಸೆ ನೀಡಿದರು. ಲಾಕ್‌ಡೌನ್ ಹಿನ್ನಲೆಯಲ್ಲಿ ಸುಮಾರು 2 ತಿಂಗಳ ಕಾಲ ಸ್ಥಗಿತಗೊಂಡಿದ್ದ ಕಿರುತೆರೆ ಚಿತ್ರೀಕರಣ ಮತ್ತೆ ಆರಂಭವಾಗಿರುವುದು ಸಂತಸದ ವಿಷಯ. ಆದರೆ, 60 ವರ್ಷ ಮೇಲ್ಪಟ್ಟವರಿಗೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅವಕಾಶ ಇಲ್ಲದಿರುವುದರಿಂದ ಹಿರಿಯ ಕಲಾವಿದರಿಗೆ ಸಂಪಾದನೆ ಇಲ್ಲ.
ಇದರಿಂದ ದಿನಸಿ, ಮನೆ ಬಾಡಿಗೆ, ಔಷಧಿಗೆ ಹಣ ಇಲ್ಲದೆ ಪರದಾಡುವಂತಾಗಿದೆ. ನಮ್ಮ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂಬುದು ಹಿರಿಯ ಕಲಾವಿದರ ಮನವಿ. ತಮಿಳುನಾಡು, ಆಂಧ್ರಪ್ರದೇಶದ ಹಿರಿಯ ಕಲಾವಿದರಿಗೆ ಮಾಸಾಶನ ದೊರೆಯುತ್ತಿದೆ. ಕರ್ನಾಟಕದಲ್ಲೂ ಹಿರಿಯ ಕಲಾವಿದರು ಮತ್ತು ತಂತ್ರಜ್ಞರಿಗೆ ಮಾಸಾಶನ ದೊರೆಯುವಂತಾಗಬೇಕು ಎಂದು ಕಲಾವಿದರು ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.