Pernankila Temple; ಮನದಲ್ಲಿ ಭಕ್ತಿ ಇದ್ದರೆ ಮನೆ ದೇವಾಲಯ: ಪೇಜಾವರ ಶ್ರೀ
ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ
Team Udayavani, Mar 26, 2024, 1:03 AM IST
ಉಡುಪಿ: ದೇವಸ್ಥಾನದಲ್ಲಿ ಭಗವಂತನ್ನು ಬಗೆಬಗೆಯಿಂದ ಆರಾಧಿಸುತ್ತೇವೆ. ಮನದಲ್ಲಿ ಭಕ್ತಿ ಭರಿತವಾಗಿ ಮನೆಗೆ ತೆರಳಬೇಕು. ಆಗ ಮನೆಯು ದೇವಾಲಯವಾಗುವುದರೊಂದಿಗೆ ಶಾಂತಿ, ನೆಮ್ಮದಿ, ಆರೋಗ್ಯ, ಧನ-ಕನಕಗಳು ವೃದ್ದಿಯಾಗುತ್ತವೆ. ಬೇರೆ ಜಿಲ್ಲೆ, ರಾಜ್ಯಗಳಿಂದ ಬಹಳಷ್ಟು ಭಕ್ತರು ಪೆರ್ಣಂಕಿಲಕ್ಕೆ ಆಗಮಿಸಿದ್ದಾರೆ ಅವರೆಲ್ಲರಿಗೂ ಇಲ್ಲಿನ ಆರಾಧ್ಯ ದೇವರು ಶ್ರೀ ಮಹಾಗಣಪತಿ, ಶ್ರೀ ಮಹಾಲಿಂಗೇಶ್ವರ ಒಳಿತನ್ನು ಮಾಡಲಿ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.
ಮಾ. 24ರಂದು ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ – ಮಹಾಗಣಪತಿ ದೇವಾಲಯದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಜರಗಿದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿದ್ವಾನ್ ಹರಿದಾಸ್ ಭಟ್ ಅಧ್ಯಕ್ಷತೆ ವಹಿಸಿದರು. ಪೇಜಾವರ ಮಠದ ದಿವಾನ ಎಂ. ರಘುರಾಮ ಆಚಾರ್ಯ, ಕಾರ್ಯ ನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಭಟ್, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀಶ ನಾಯಕ್, ಸಮಿತಿ ಸಂಘಟನ ಕಾರ್ಯದರ್ಶಿ ಸದಾನಂದ ಪ್ರಭು, ಉಪಾಧ್ಯಕ್ಷ ಶ್ರೀಕಾಂತ್ ನಾಯಕ್ ಅಲೆವೂರು, ಪ್ರಮುಖರಾದ ಸುರೇಶ್ ತಂತ್ರಿ, ಮಹೇಶ್ ಕುಲಕರ್ಣಿ, ಕಿಶೋರ್ ನಾಯಕ್, ಬಾಳು ವಾಗ್ಲೆ, ಸತೀಶ್ ಪೂಜಾರಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಉಮೇಶ್ ನಾಯಕ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.