ಟಿಂಬರ್‌ ಮಾಫಿಯಾ ಸದ್ದಡಗಿಸಲು ಸಿಬ್ಬಂದಿ ಬಲ

-ಕಾಡಿನ ಅಕ್ರಮಕ್ಕೆ ಬ್ರೇಕ್‌ ಹಾಕಲು ಹೆಚ್ಚಿನ ಸಿಬ್ಬಂದಿ ನೇಮಕ

Team Udayavani, Aug 7, 2023, 5:01 AM IST

timber

ಬೆಂಗಳೂರು: ದೇಶದಲ್ಲೇ ವೈವಿಧ್ಯಮಯ ಸಸ್ಯ ಪ್ರಭೇದ ಹೊಂದಿರುವ ಕರ್ನಾಟಕದ ಅರಣ್ಯ ಸಂಪತ್ತಿಗೆ ಟಿಂಬರ್‌ ಮಾಫಿಯಾದ ಕರಿನೆರಳು ಬಿದ್ದಿದ್ದು, ಕಾಡಿನ ಅಕ್ರಮಕ್ಕೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ 618 “ಕಳ್ಳ ಬೇಟೆ ತಡೆ ಶಿಬಿರ’ಕ್ಕೆ ಸಿಬ್ಬಂದಿ ನೇಮಿಸಿ ಇನ್ನಷ್ಟು ಬಲ ತುಂಬಲು ಅರಣ್ಯ ಇಲಾಖೆ ಮುಂದಾಗಿದೆ. ಇನ್ನು ಮುಂದೆ ಟಿಂಬರ್‌ ಮಾಫಿಯಾ ತಂಡಗಳು ಮೀಸಲು ಅರಣ್ಯಕ್ಕೆ ಕಾಲಿಟ್ಟರೆ ಅರಣ್ಯ ಇಲಾಖೆ ಸಿಬ್ಬಂದಿ ಬಿಸಿ ಮುಟ್ಟಿಸಲಿದ್ದಾರೆ ಎಚ್ಚರ !

ಕಳೆದ ಕೆಲ ವರ್ಷಗಳ ಹಿಂದೆ ತೆರೆಕಂಡ ತೆಲುಗಿನ “ಪುಷ್ಪ’ ಸಿನಿಮಾ ಮಾದರಿಯಲ್ಲೇ ರಾಜ್ಯದಲ್ಲಿ ಟಿಂಬರ್‌ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಕಾಡಿಗೆ ಅಕ್ರಮವಾಗಿ ನುಗ್ಗುವ ದಂಧೆಕೋರರು ಶ್ರೀಗಂಧ, ರಕ್ತಚಂದನ, ಬೀಟೆ, ಸಾಗವಾನಿ, ತೇಗ, ಬಿಳಿ ಮರ, ಮಹೋಗಾನಿ, ಬಿದಿರಿನಂತಹ ಬೆಲೆ ಬಾಳುವ ಮರಗಳನ್ನು ಕಡಿದು ಕಳ್ಳಸಾಗಣೆ ಮೂಲಕ ಹೊರ ರಾಜ್ಯ ಹಾಗೂ ವಿದೇಶಗಳಿಗೆ ಸಾಗಿಸಿ ಕೋಟ್ಯಂತರ ರೂ.ಗಳಿಸುತ್ತಿದ್ದಾರೆ. ಇದು ಕೆಳಹಂತದ ಅರಣ್ಯ ಇಲಾಖೆ ಸಿಬ್ಬಂದಿ ಗಮನಕ್ಕೆ ಬಂದರೂ ಗ್ಯಾಂಗ್‌ನ ಸೂತ್ರದಾರರು ಕೈ ಬೆಚ್ಚಗೆ ಮಾಡುವ ಹಿನ್ನೆಲೆಯಲ್ಲಿ ದಂಧೆಕೋರರತ್ತ ಸುಳಿವುದಿಲ್ಲ. ಇತ್ತ ಮರಗಳ್ಳರ ಗ್ಯಾಂಗ್‌ ನಿರ್ಭೀತಿಯಿಂದ ಅಕ್ರಮವಾಗಿ ಮರಗಳ ಸಾಗಾಟ ಮಾಡುತ್ತವೆ. ದಂಧೆಕೋರರು ಮರ ಕಡಿದ ಜಾಗದ ಕುರುಹು ಸಿಗದಂತೆ ಇಡೀ ಕಾಡಿಗೇ ಬೆಂಕಿ ಹಚ್ಚುತ್ತಾರೆ. ದಂಧೆಕೋರರು ವಾರ್ಷಿಕವಾಗಿ ಕೋಟ್ಯಂತರ ರೂ. ವಹಿವಾಟು ನಡೆಸುತ್ತಿದ್ದಾರೆ.

ಇದರ ಜೊತೆಗೆ ವನ್ಯಜೀವಿಗಳಾದ ಜಿಂಕೆ, ಹುಲಿ, ಕಾಡೆಮ್ಮೆ, ಕಡವೆ, ಆನೆ, ಚಿರತೆ ಭೇಟೆಯಾಡಿ ಅದರ ಚರ್ಮ, ಉಗುರು, ದಂತಗಳನ್ನು ವಿದೇಶಕ್ಕೆ ರವಾನಿಸುವ ವ್ಯವಸ್ಥಿತ ಜಾಲ ಇನ್ನೂ ಅವ್ಯಹತವಾಗಿದೆ. ಇದು ಸರ್ಕಾರದ ಗಮನಕ್ಕೆ ಬಂದಿದ್ದು, ಅರಣ್ಯ ರಕ್ಷಣೆಗಾಗಿ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲು ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಟಿಂಬರ್‌ ದಂಧೆ ಹತ್ತಿಕ್ಕಲು “ಕಳ್ಳ ಬೇಟೆ ತಡೆ ಶಿಬಿರ’ದಂತಹ ಕಾರ್ಯಕ್ಕೆ ಇನ್ನಷ್ಟು ಬಲ ನೀಡಲು ನಿರ್ಧರಿಸಲಾಗಿದೆ.

ಕದ್ದ ಮರ ವಿದೇಶಕ್ಕೆ ಪೂರೈಕೆ: ಬೆಲೆ ಬಾಳುವ ಶ್ರೀಗಂಧದಂತಹ ಮರಗಳು ಕಳ್ಳಸಾಗಣೆ ಮೂಲಕ ಹಡಗಿನಲ್ಲಿ ವಿವಿಧ ದೇಶಗಳಿಗೆ ರವಾನೆಯಾಗುತ್ತದೆ. ಶ್ರೀಗಂಧದ ಎಣ್ಣೆ, ಐಷಾರಾಮಿ ಪೀಠೊಪಕರಣ, ಕೆತ್ತನೆ ಮೂಲಕ ವಿವಿಧ ವಿಗ್ರಹ, ಕಲಾಕೃತಿ ರಚಿಸಿ ಲಕ್ಷಾಂತರ ರೂ. ವಹಿವಾಟು ನಡೆಸಲಾಗುತ್ತದೆ. ಆನೆ ದಂತ, ಹುಲಿ ಉಗುರು, ಜಿಂಕೆ, ಚಿರತೆ ಚರ್ಮದಂತಹ ವನ್ಯಜೀವಿ ವಸ್ತುಗಳಿಗೆ ದೇಶದಲ್ಲೆಡೆ ಹೆಚ್ಚಿನ ಬೇಡಿಕೆಯಿದೆ. ಮೌಲ್ಯಯುತ ವನ್ಯಜೀವಿ ವಸ್ತುಗಳನ್ನು ಸಂಗ್ರಹಿಸುವ ಹವ್ಯಾಸವುಳ್ಳ ಕುಬೇರರು ದಂಧೆಕೋರರು ಕೇಳಿದಷ್ಟು ದುಡ್ಡು ಕೊಟ್ಟು ಖರೀದಿಸಲು ಸಿದ್ಧರಿರುತ್ತಾರೆ.

1 ವರ್ಷದಲ್ಲಿ 189 ಕಾಡಿಗೆ ಹಾನಿ
2022-23ರಲ್ಲಿ (ಕಳೆದ ಒಂದು ವರ್ಷ) ಕಾಡಿಗೆ ಹಾನಿಯಾಗಿರುವ 189 ಪ್ರಕರಣ ದಾಖಲಾಗಿವೆ. 404.16 ಹೆಕ್ಟೆರ್‌ ಪ್ರದೇಶಗಳಿಗೆ ಹಾನಿಯಾಗಿವೆ. ರಾಜ್ಯದಲ್ಲಿರುವ 43,382 ಚ.ಕೀ.ಮೀ ಅರಣ್ಯ ಪ್ರದೇಶಗಳಲ್ಲಿ 10,892 ಚ.ಕೀ.ಮೀ ವಿಸ್ತೀರ್ಣ ರಕ್ಷಿತ ಪ್ರದೇಶವಾಗಿರುತ್ತದೆ. ಈ ಪೈಕಿ 5 ರಾಷ್ಟ್ರೀಯ ಉದ್ಯಾನವನ, 36 ಅಭಯಾರಣ್ಯ, 17 ಸಂರಕ್ಷಿತ ಮೀಸಲು ಹಾಗೂ 1 ಸಮುದಾಯ ಮೀಸಲು ಪ್ರದೇಶವೆಂದು ಘೋಷಿಸಲಾಗಿದೆ. ಭಾರತದ ಶೇ.25ರಷ್ಟು ಆನೆ ಸಂತತಿ ಹಾಗೂ ಶೇ.18 ರಷ್ಟು ಹುಲಿ ಸಂತತಿ ಹೊಂದಿದೆ. ಶೇ.54ರಷ್ಟು ಅರಣ್ಯಗಳು ಪಶ್ಚಿಮ ಘಟ್ಟದ ಪ್ರದೇಶಗಳಲ್ಲಿವೆ. ರಾಜ್ಯದ ಶೇ.25 ಅರಣ್ಯ ಪ್ರದೇಶ ವನ್ಯಜೀವಿ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ಮೀಸಲಿಡಲಾಗಿದೆ.

ಟಿಂಬರ್‌ ಮಾಫಿಯಾದಂತಹ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರದ ಮಟ್ಟದಲ್ಲಿ ಹಲವು ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದೆ. ಅರಣ್ಯ ಇಲಾಖೆಯು ಇನ್ನಷ್ಟು ಕಾರ್ಯಾಚರಣೆ ನಡೆಸಿ ಇಂತಹ ಅಕ್ರಮ ತಡೆಗಟ್ಟಲು ಪಣ ತೊಡಲಿದೆ.
-ಜಾವೇದ್‌ ಅಖ್ತರ್‌, ಸರ್ಕಾರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಅರಣ್ಯ ಇಲಾಖೆ.

ಟಾಪ್ ನ್ಯೂಸ್

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

1-dr

Veerendra Heggade 77ನೇ ವರ್ಷಕ್ಕೆ ಪಾದಾರ್ಪಣೆ: ಗಣ್ಯರಿಂದ ಶುಭ ಹಾರೈಕೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.