“ಫೋನಿ’ ಬೆನ್ನಲ್ಲೇ ಬಂತು ಪೂರ್ವ ಮುಂಗಾರು ಮಳೆ
Team Udayavani, May 8, 2019, 3:05 AM IST
ಬೆಂಗಳೂರು: “ಫೋನಿ’ ಬಂದು ಹೋದ ಬೆನ್ನಲ್ಲೇ ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಆರಂಭವಾಗಿದ್ದು, ಮಂಗಳವಾರ ದಕ್ಷಿಣ ಒಳನಾಡು, ಮಲೆನಾಡಿನ ಆಯ್ದ ಭಾಗಗಳಲ್ಲಿ ಗುಡುಗುಸಹಿತ ಮಳೆಯಾಗಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಕೊಡಗು, ತುಮಕೂರು, ಕೋಲಾರ ಸುತ್ತಲಿನ ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಬಿಸಿಲಿನ ಧಗೆಗೆ ಕಂಗೆಟ್ಟಿದ್ದ ಜನರಿಗೆ ಪೂರ್ವಮುಂಗಾರು ಮಳೆ ತಂಪೆರೆಯಿತು.
ಸಂಜೆಯಿಂದಲೇ ಶುರುವಾದ ವರುಣನ ಆರ್ಭಟ ಕೆಲವೆಡೆ ರಾತ್ರಿ 9ರವರೆಗೂ ಮುಂದುವರಿದಿತ್ತು. ಇನ್ನೂ ಎರಡು ದಿನಗಳು ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪೂರ್ವಮುಂಗಾರಿನಲ್ಲಿ ಈ ರೀತಿಯ ಗುಡುಗು ಸಹಿತ ಮಳೆ ಸಹಜ. ಈ ಮಧ್ಯೆ, ಕೇರಳದ ಕೆಳಭಾಗದಿಂದ ಮಹಾರಾಷ್ಟ್ರದ ಮಧ್ಯೆ ಕಡಿಮೆ ಒತ್ತಡದ ತಗ್ಗು (ಟ್ರಫ್) ಉಂಟಾಗಿದೆ. ಇದು ಉತ್ತರ ಒಳನಾಡಿನಿಂದ ಹಾದು ಹೋಗಿದೆ. ಹಾಗಾಗಿ, ಅಲ್ಲಿಯೂ ಮಳೆ ಬೀಳುವ ಸಾಧ್ಯತೆಗಳಿವೆ.
ಚಂಡಮಾರುತದಂತಹ ಯಾವುದೇ ಚಟುವಟಿಕೆಗಳು ನಡೆದಿಲ್ಲ. ಈ ಮಳೆ ಇನ್ನೂ ಎರಡು ದಿನಗಳು ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕಚೇರಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈ ಮಧ್ಯೆ, ರಾತ್ರಿ 7ರಿಂದ 8ರವರೆಗೆ ಚಾಮರಾಜನಗರದಲ್ಲಿ 73 ಮಿ.ಮೀ., ನೆಲಮಂಗಲದಲ್ಲಿ 66.5, ಮಡಿಕೇರಿ 65.5 ಮಿ.ಮೀ., ಬೆಂಗಳೂರಿನ ಹೊರವಲಯದ ವಿವಿಧೆಡೆ 50ರಿಂದ 100 ಮಿ.ಮೀ.ನಷ್ಟು ಮಳೆ ದಾಖಲಾಗಿದೆ. ಬೆಂಗಳೂರು ಹೊರವಲಯದ ದೇವನಹಳ್ಳಿ ಬಳಿ ಸಿಡಿಲು ಬಡಿದು ಹನ್ನೆರಡು ಕುರಿಗಳು ಸಾವಿಗೀಡಾಗಿವೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಕರಾವಳಿಯಲ್ಲೂ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿವಿಧೆಡೆ ಮಂಗಳವಾರ ಮಧ್ಯಾಹ್ನದ ಬಳಿಕ ಮಳೆ ಬಂದಿದೆ. ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಿದೆ. ಪುತ್ತೂರಿನಲ್ಲಿ ಮಧ್ಯಾಹ್ನ ಸುಮಾರು ಒಂದು ಗಂಟೆ ಕಾಲ ಉತ್ತಮ ಮಳೆ ಸುರಿಯಿತು. ಇದೇ ವೇಳೆ, ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 43.1 ಡಿ.ಸೆ.ತಾಪಮಾನ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
MUST WATCH
ಹೊಸ ಸೇರ್ಪಡೆ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.