ಎ.29 ರಂದು ವಿಜಯಪುರದಲ್ಲಿ ಪ್ರಧಾನಿ ಮೋದಿ ಪ್ರಚಾರ

Team Udayavani, Apr 28, 2023, 3:13 PM IST

8–vijayapura

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ಎ.29 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ವಿಜಯಪುರದ ಸೈನಿಕ ಶಾಲೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ಹೇಳಿದರು.

ಶುಕ್ರವಾರ ನಗರದಲ್ಲಿರುವ ಪಕ್ಷದ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸೈನಿಕ ಶಾಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸುವ ಚುನಾವಣಾ ಪ್ರಚಾರ ಸಭೆ ವೇದಿಕೆ ವ್ಯವಸ್ಥೆ ಮಾಡಲಾಗಿದೆ. ಪಾಲ್ಗೊಳ್ಳುವ ಅಪೂರ್ವ ಕಾರ್ಯಕ್ರಮಕ್ಕೆ ಕಳೆದ ಒಂದು ವಾರದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ವಿಜಯಪುರ ಜಿಲ್ಲೆಯ 8 ಕ್ಷೇತ್ರಗಳು ಮಾತ್ರವಲ್ಲದೇ ನೆರೆಯ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕ್ರೇತ್ರವೂ ಸೇರಿದಂತೆ ಸುಂಆರು 2 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ವೇದಿಕೆ ಮುಂಭಾಗದಲ್ಲಿ 80 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಉತ್ಸಾಹ ಹೆಚ್ಚಾಗಿದ್ದು, ಜಿಲ್ಲೆಯ 8 ವಿಧಾನಸಭಾ ಕ್ಷೇತ್ರ ಹಾಗೂ ಬಾಗಲಕೋಟ ಜಮಖಂಡಿ ವಿಧಾನಸಭಾ ಸೇರಿ 9 ಕ್ಷೇತ್ರಗಳಿಂದಲೂ ಲಕ್ಷಾಂತರ ಜನತೆ ಆಗಮಿಸಲಿದ್ದಾರೆ. ಕಾರ್ಯಕ್ರಮದ ವೇದಿಕೆ ಮೇಲೆ 9 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು, ಅವಳಿ ಜಿಲ್ಲೆಗಳ ಸಂಸದರು, ಪಕ್ಷದ ಜಿಲ್ಲಾಧ್ಯಕ್ಷರು ವೇದಿಕೆ ಮೇಲೆ ಇರಲಿದ್ದಾರೆ ಎಂದರು.

ಈ ಪ್ರಚಾರ ಕಾರ್ಯಕ್ರಮಕ್ಕೆ ಗ್ರಾಮೀಣ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುತ್ತಿದ್ದು, ಸ್ವಯಂ ಪ್ರೇರಿತವಾಗಿ ಜನರು ಪ್ರಧಾನಿಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದು ಗಮನೀಯ. ಕಾರ್ಯಕ್ರಮದ ವೇದಿಕೆಯ ಕಾರ್ಯಕ್ರಮವನ್ನು ಜನರು ಹತ್ತಿರದಿಂದ ವೀಕ್ಷಿಸಲು ವೇದಿಕೆ ಮುಂಭಾಗದಲ್ಲಿ ಎಲ್‍ಇಡಿ ಪರದೆ ಅಳವಡಿಸುವ ಚಿಂತನೆ ನಡೆದಿದೆ.

ಬೀದರ ಜಿಲ್ಲೆಯ ಹುಮ್ನಾಬಾದ ಕಾರ್ಯಕ್ರಮ ಮುಗುಸಿಕೊಂಡು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಅವರು ವಿಜಯಪುರ ಸೈನಿಕ ಶಾಲೆಗೆ ಆಗಮಿಸಲಿದ್ದು, ನೇರವಾಗಿ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ, ನಂತರ ಹಾರೋಗೇರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಜನರಿಗೆ ವಾಹನ ದಟ್ಟಣೆ ಆಗದಂತೆ ಸ್ಥಳಗಳಲ್ಲಿ ಪಾಕಿರ್ಂಗ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯ ಮೈದಾನ, ಅಟಲ್ ಬಿಹಾರಿ ವಾಜಪೇಯಿ ಶಾಲೆ, ರಿಂಗ್ ರೋಡ ಇಟಗಿ ಪೆಟ್ರೋಲ್ ಬಳಿ ಸೇರಿದಂತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುವ ಜನರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ, ಪಕ್ಷದ ಚುನಾವಣಾ ಉಸ್ತುವಾರಿ ಮಲ್ಲಿಕಾರ್ಜುನ ಜೋಗೂರ, ಸಂಜಯ ಪಾಟೀಲ ಕನಮಡಿ, ಬಸವರಾಜ ಬಿರಾದಾರ, ವಿಜಯ ಜೋಶಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.