![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 12, 2023, 7:15 AM IST
ಹೊಸದಿಲ್ಲಿ: ಭಾರತದ ಅತೀ ಉದ್ದದ ಹೆದ್ದಾರಿ ಎಂಬ ಖ್ಯಾತಿಗೆ ಪಾತ್ರವಾಗಲಿರುವ ದಿಲ್ಲಿ-ಮುಂಬಯಿ ಎಕ್ಸ್‌ಪ್ರೆಸ್‌ವೇಯ ಸೋಹ್ನಾ -ದೌಸಾ ಮಾರ್ಗವನ್ನು ರವಿವಾರ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ.
ರಾಜಸ್ಥಾನದ ದೌಸಾದಲ್ಲಿ ಮೋದಿ ಅವರು ಈ ಮಾರ್ಗದ ಉದ್ಘಾಟನೆ ನೆರವೇರಿಸಲಿದ್ದು, ಮಂಗಳವಾರದಿಂದಲೇ ಮಾರ್ಗವು ಪ್ರಯಾಣಿಕರಿಗೆ ಮುಕ್ತವಾಗಲಿದೆ.
1,380 ಕಿ.ಮೀ. ಉದ್ದದ ಎಕ್ಸ್ ಪ್ರಸ್ ಹೆದ್ದಾರಿಯ ಸೋಹ್ನಾ-ದೌಸಾ ಮಾರ್ಗವು ಪ್ರಯಾಣಿಕರು ಮತ್ತು ವಾಣಿಜ್ಯ ವಾಹನಗಳಿಗೆ ಪರ್ಯಾಯ ಹೆದ್ದಾರಿಯೊಂದನ್ನು ಕಲ್ಪಿಸಿಕೊಡಲಿದೆ.
ಇದರಿಂದಾಗಿ ಪ್ರಸ್ತುತ ದಿಲ್ಲಿ-ಜೈಪುರ ಎಕ್ಸ್‌ಪ್ರೆಸ್‌ವೇಯನ್ನು ಅವಲಂಬಿಸಿದ್ದ ಜನರಿಗೆ ದಟ್ಟಣೆಯ ಕಿರಿಕಿರಿ ಇಲ್ಲದೇ ಪ್ರಯಾಣಿಸಲು ಸಾಧ್ಯವಾಗಲಿದೆ. ಈ ಮಾರ್ಗದಿಂದ ದಿಲ್ಲಿ ಮತ್ತು ಜೈಪುರದ ನಡುವಿನ ಪ್ರಯಾಣದ ಅವಧಿ ಈಗಿರುವ 5 ಗಂಟೆಗಳಿಂದ 2.5-3 ಗಂಟೆಗಳಿಗೆ ಇಳಿಯಲಿದೆ.
ಇದು ಅಷ್ಟಪಥ ಹೆದ್ದಾರಿಯಾಗಿದ್ದು, ಮುಂಬರುವ ದಿನಗಳಲ್ಲಿ 12 ಪಥಗಳಿಗೆ ವಿಸ್ತರಿಸಲೂ ಸಾಧ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಿಲ್ಲಿ-ಮುಂಬಯಿ ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಂಡರೆ, ವಾರ್ಷಿಕ 320 ದಶಲಕ್ಷ ಲೀಟರ್‌ಗೂ ಅಧಿಕ ಇಂಧನ ಉಳಿತಾಯವಾಗಲಿದೆ ಮತ್ತು ಇಂಗಾಲದ ಹೊರಸೂಸುವಿಕೆ 850 ದಶಲಕ್ಷ ಕೆಜಿಯಷ್ಟು ಕಡಿಮೆಯಾಗಲಿದೆ ಎಂದಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.