Lok Sabha: ಲೋಕಸಭೆ ಕಡೇ ಕಲಾಪದ ಪಿಎಂ ಮೋದಿ ವಿಪ್‌ ಕೌತುಕ

ಇಂದು ಈ ಸರಕಾರದ ಕಡೆಯ ಅಧಿವೇಶನದ ಕೊನೆಯ ದಿನ- ಬಿಜೆಪಿಯ ಎಲ್ಲ ಸಂಸದರು ಹಾಜರಿರಲು ವಿಪ್‌ ಜಾರಿ

Team Udayavani, Feb 9, 2024, 11:30 PM IST

central vista

ಹೊಸದಿಲ್ಲಿ: ಸಂಸತ್‌ನ ಬಜೆಟ್‌ ಅಧಿವೇಶನಕ್ಕೆ ಶನಿವಾರ ವಿಧ್ಯುಕ್ತವಾಗಿ ತೆರೆ ಬೀಳಲಿದೆ. ಇದರ ಜತೆಗೆ 17ನೇ ಲೋಕಸಭೆಯ ಅಧಿವೇಶನದ ಕೊನೆಯ ಅಧಿವೇಶನವೂ ಇದಾಗಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಲೋಕಸಭೆ ಮತ್ತು ರಾಜ್ಯಸಭೆಯ ಬಿಜೆಪಿಯ ಎಲ್ಲಾ ಸಂಸದರು ತಪ್ಪದೇ ಕಲಾಪದಲ್ಲಿ ಹಾಜರಿರಬೇಕು ಎಂದು ಒಂದು ಸಾಲಿನ ವಿಪ್‌ ಅನ್ನು ಹೊರಡಿಸಲಾಗಿದೆ. ಈ ಬಗ್ಗೆ ಲೋಕಸಭೆಯ ಸದಸ್ಯರು, ಕೇಂದ್ರ ಸಚಿವರು ಯಾರಿಗೆ ಕೂಡ ಹೆಚ್ಚಿನ ಮಾಹಿತಿ ತಿಳಿದಿಲ್ಲ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ ಕೊನೆಯ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣಕ್ಕೆ ಧನ್ಯವಾದ ಸಮರ್ಪಿಸುವ ಗೊತ್ತುವಳಿ ಸಲ್ಲಿಸುವುದರ ಜತೆಗೆ ಅಯೋಧ್ಯೆಯಲ್ಲಿ ಯಶಸ್ವಿಯಾಗಿ ರಾಮ ಮಂದಿರ ನಿರ್ಮಾಣ, ಕಳೆದ ತಿಂಗಳ 22ರಂದು ಪ್ರಧಾನಿ ನರೇಂದ್ರ ಮೋದಿಯವರು ಯಶಸ್ವಿಯಾಗಿ ಉದ್ಘಾಟನೆ ಮಾಡಿದ್ದ ಕಾರ್ಯಕ್ರಮದ ಬಗ್ಗೆಯೂ ಲೋಕಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳು ಇವೆ. ಅದರಲ್ಲಿ “ಶ್ರೀರಾಮ ಭಾರತ ಮತ್ತು ಭಾರತೀಯತೆಯ ಪ್ರತೀಕ’, “ಶ್ರೀರಾಮ ಭಾರತೀಯ ಸಂಸ್ಕೃತಿಯ ಪ್ರತೀಕ, “ಶ್ರೀರಾಮ ಒಂದು ಭಾರತ, ಶ್ರೇಷ್ಠ ಭಾರತದ ಪ್ರತೀಕ’ ಎಂದು ನಿರ್ಣಯ ಮಂಡಿಸಿ ಅಂಗೀಕರಿಸಲು ಈಗಾ ಗಲೇ ತೀರ್ಮಾನಿಸಲಾಗಿದೆ ಮೂಲಗಳು ಹೇಳಿವೆ. ಹೀಗಾಗಿಯೇ ಕೊನೆಯ ಅಧಿವೇಶನದಲ್ಲಿ ಮಹತ್ವದ ನಿರ್ಣಯವನ್ನೂ ಕೈಗೊಳ್ಳುವ ಸಾಧ್ಯತೆಗಳಿವೆ.

ಹಲವರಿಗೆ ಸನ್ಮಾನ?: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಹಾಗೂ ಅದಕ್ಕೆ ಕಾರಣಕರ್ತ ರಾದವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳುವ ಸಾಧ್ಯತೆಗಳು ಇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಕಾರ್ಯಕ್ರಮ ಬಿಜೆಪಿಗೆ ಧನಾತ್ಮಕವಾಗಿ ಬದಲಾವಣೆಯಾಗಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಈಗಾಗಲೇ ಕಾರ್ಯಪ್ರವೃತ್ತವಾಗಿದೆ.

ಫೆ.1ರಂದು ಮಂಡಿಸಲಾಗಿದ್ದ ಮಧ್ಯಂತರ ಬಜೆಟ್‌ನಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕುರಿತು ಶ್ವೇತಪತ್ರ ಮಂಡಿಸುವ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರಕಟಿಸಿದ್ದರು. ಆದರೆ, ಗುರುವಾರವೇ ಅರ್ಥ ವ್ಯವಸ್ಥೆಯ ಬಗ್ಗೆ ಶ್ವೇತಪತ್ರ ಮಂಡಿಸಿದ್ದರಿಂದ ಶನಿವಾರ ಅಧಿವೇಶನದಲ್ಲಿ ಏನಿರಲಿದೆ ಎಂಬ ಕುತೂಹಲ ಉಂಟಾಗಿದೆ.

ಜ.31ರಂದು ಸಂಸತ್‌ನ ಬಜೆಟ್‌ ಅಧಿವೇಶನದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪತ್ರಕರ್ತರ ಜತೆಗೆ ಮಾತನಾಡಿದ್ದ ಸಂದರ್ಭದಲ್ಲಿ ಎಲ್ಲರ ಜತೆಗೆ “ರಾಮ್‌ ರಾಮ್‌’ ಎಂದು ಹೇಳುವ ಮೂಲಕ ಮಾತು ಆರಂಭಿಸಿದ್ದರು.

2 ದಿನಗಳ ಹಿಂದೆ ಅರ್ಥ ವ್ಯವಸ್ಥೆಯ ವಿರುದ್ಧ ಶ್ವೇತಪತ್ರ ಹೊರಡಿಸುವುದಕ್ಕೆ ಎಂಬ ಕಾರಣದಿಂದ ಸಂಸತ್‌ ಅಧಿವೇಶನವನ್ನು ಶನಿವಾರದ ವರೆಗೆ ವಿಸ್ತರಿಸಲಾಗಿತ್ತು. ಆದರೆ, ಗುರುವಾರವೇ ಶ್ವೇತಪತ್ರ ಮಂಡನೆಯಾಗಿರುವುದರಿಂದ ಶನಿವಾರದ ಕಲಾಪದಲ್ಲಿ ಏನು ಇರಲಿದೆ ಎಂಬ ಕುತೂಹಲ ಆಡಳಿತ ಮತ್ತು ಪ್ರತಿಪಕ್ಷಗಳ ಸಂಸದರನ್ನು ಕಾಡುತ್ತಿದೆ. ಶನಿವಾರದ ಸಂಸತ್‌ನ ಕಾರ್ಯಕಲಾಪ ಏನಿರಲಿದೆ ಎಂಬುದರ ಬಗ್ಗೆ ಹೊಸದಿಲ್ಲಿಯ ರಾಜಕೀಯ ಪಡಸಾಲೆಯಲ್ಲಿ ಈಗ ಬಿರುಸಿನ ಚರ್ಚೆಗಳು ನಡೆದಿವೆ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.