![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 6, 2022, 9:00 PM IST
ಬೆಂಗಳೂರು: ಪ್ರಧಾನಮಂತ್ರಿಗಳು ಎಲ್ಲರಿಗೂ ಒಂದೊಂದು ಟಾಸ್ಕ್ ನೀಡಿದ್ದು ರಾಜ್ಯ ಗಳಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಸೂಚಿಸಿದ್ದಾರೆ. ಕೋಲಾರದಲ್ಲಿ ಕೆರೆಗೆಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬುಧವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾ.ಜ.ಪದ ಎಲ್ಲಾ ಪ್ರಮುಖರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಆರ್ಥಿಕ ಇಲಾಖೆಯ ಅನುಮೋದನೆಯಾಗಬೇಕು ಎಂಬ ವಿಷಯವನ್ನು ಗಮನಕ್ಕೆ ತರಲಾಯಿತು. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಿಂದ ಘೋಷಿಸುವ ಅಂತಿಮ ಘಟ್ಟದಲ್ಲಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಗಂಗಾವತಿ : ಮಾಜಿ ಸಚಿವ ಸಿ.ಯಾದವ್ ರಾವ್ ನಿಧನ
ಇಂಧನ ಕ್ಷೇತ್ರದಲ್ಲಿ ಹಸಿರು ಕಾರಿಡಾರ್‌ನಲ್ಲಿ ಮೂರು ಯೋಜನೆಗಳನ್ನು ಸೇರ್ಪಡೆ ಮಾಡಬೇಕಿರುವ ವಿಷಯವೂ ಆರ್ಥಿಕ ಇಲಾಖೆಯ ಅನುಮೋದನೆಗೆ ಬರಲಿದೆ. ಅದನ್ನೂ ಮುಂಚಿತವಾಗಿ ಸಚಿವರ ಗಮನಕ್ಕೆ ತರಲಾಗಿದೆ. ಆದಷ್ಟೂ ಬೇಗನೆ ಇವುಗಳಿಗೆ ಅನುಮೋದನೆ ನೀಡುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದ್ದಾರೆ ಎಂದರು.
ರಾಯಚೂರಿನಲ್ಲಿ ಸಿರಿಧಾನ್ಯ ಬೆಳೆಗಾರರ ಸಭೆ :
ಜಿ.ಎಸ್.ಟಿ ಜಿ.ಒ. ಎಂ ಸಭೆಯ ಬಗ್ಗೆಯೂ ಚರ್ಚಿಸಲಾಯಿತು. ಸಚಿವರು ಕರ್ನಾಟಕಕ್ಕೆ ಭೇಟಿ ನೀಡುವುದಾಗಿ ತಿಳಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಗಳಿಗೆ ಬ್ಯಾಂಕ್ ಗಳ ಮುಖಾಂತರ ಆಗಬೇಕಿರುವ ಕೆಲಸಗಳ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದರು. ಅಂತಾರಾಷ್ಟ್ರೀಯ ಸಿರಿಧಾನ್ಯ ದಿನಾಚರಣೆ ಇರುವುದರಿಂದ ರಾಯಚೂರಿನಲ್ಲಿ ಸಿರಿಧಾನ್ಯ ಬೆಳೆಗಾರರ ಸಭೆಯನ್ನು ಆಯೋಜಿಸಲು ತೀರ್ಮಾನಿಸಲಾಯಿತು ಎಂದು ತಿಳಿಸಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.