Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ
Team Udayavani, Oct 9, 2024, 1:56 AM IST
ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದ ಲಲಿತಾ ಪಂಚಮಿಯ ದಿನವಾದ ಸೋಮವಾರ ರಾತ್ರಿ ತಾಯಿಗೆ ಹರಕೆ ರೂಪದಲ್ಲಿ ಸಂದಾಯವಾದ ಸುಮಾರು 20 ಸಾವಿರ ಸೀರೆಗಳನ್ನು ಮಹಿಳಾ ಭಕ್ತರಿಗೆ ವಿತರಿಸಲಾಯಿತು.
ಕಳೆದ ಹಲವು ವರ್ಷಗಳಿಂದ ಲಲಿತಾ ಪಂಚಮಿಯ ದಿನ ಭಕ್ತರಿಗೆ ಸೀರೆಗಳನ್ನು ಹಂಚುತ್ತಿದ್ದು, ಕಳೆದ ವರ್ಷ ಸುಮಾರು 10 ಸಾವಿರದಷ್ಟು ಸೀರೆಗಳನ್ನು ವಿತರಿಸಲಾಗಿತ್ತು. ಈ ಸಂದರ್ಭ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ ತಂತ್ರಿ, ಅನುವಂಶಿಕ ಆಡಳಿತ ಮೊಕ್ತೇಸರ ಡಾ| ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಪವಿತ್ರಪಾಣಿ-ಅನುವಂಶಿಕ ಮೊಕ್ತೇಸರ ಪಿ. ಮಾಧವ ಭಟ್, ಅನುವಂಶಿಕ ಮೊಕ್ತೇಸರ ಚೇರ ಸೂರ್ಯನಾರಾಯಣ ರಾವ್, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಪ್ರಮುಖರಾದ ವೆಂಕಟೇಶ ನಾವಡ, ಸುಬ್ರಾಯ ಕಾರಂತ ಮೊದಲಾದವರಿದ್ದರು.
ನವರಾತ್ರಿಯ ಸಂದರ್ಭ ಪ್ರತಿನಿತ್ಯವೂ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ನಿತ್ಯ ಬೆಳಗ್ಗೆ ಭಕ್ತರ ಹರಕೆ ರೂಪದ ಚಂಡಿಕಾ ಹೋಮ, ರಾತ್ರಿ ನಿತ್ಯ ಪೂಜೆಯ ಬಳಿಕ ನವರಾತ್ರಿ ಪೂಜೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.