Police Find Out: ನಾಪತ್ತೆಯಾಗಿದ್ದ ಸುಳ್ಯದ ಯುವತಿ ಪತ್ತೆ
Team Udayavani, Sep 1, 2024, 12:48 AM IST
ಸುಳ್ಯ: ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳಿ ನಾಪತ್ತೆಯಾಗಿದ್ದ ಸುಳ್ಯ ತಾಲೂಕಿನ ಕೊಲ್ಲಮೊಗ್ರಿನ ಯುವತಿಯನ್ನು ಪೊಲೀಸರು ಪತ್ತೆ ಹಚ್ಚಿ ಮನೆಯವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ.
18 ವರ್ಷ ಪ್ರಾಯದ ಈಕೆ ಆ.23 ರಂದು, ಶಿಕ್ಷಣಕ್ಕಾಗಿ ಪೋಲೆಂಡ್ಗೆ ತೆರಳುತ್ತೇನೆ ಎಂದು ಮನೆಯಲ್ಲಿ ಹೇಳಿ ಕುಕ್ಕೆಯಿಂದ ಬೆಂಗಳೂರಿಗೆ ತೆರಳಿದ್ದರು. ಆ.26ರಂದು ರಾತ್ರಿ ತಾನು ಪೋಲೆಂಡ್ಗೆ ತಲುಪಿರುತ್ತೇನೆ ಎಂದು ಯುವತಿ ಮನೆಯವರಿಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದಾರೆ. ಆ.28ರಂದು ಸಂಬಂಧಿಕರೋರ್ವರು ಆಕೆ ಪೋಲೆಂಡ್ಗೆ ತೆರಳಿಲ್ಲ.
ಸುಬ್ರಹ್ಮಣ್ಯ- ಬೆಂಗಳೂರು ಬಸ್ಸಿನಲ್ಲಿ ನೋಡಿರುವುದಾಗಿ ಬಸ್ ನಿರ್ವಾಹಕರೋರ್ವರು ತಿಳಿಸಿದ್ದಾರೆ ಎಂದು ಮಾಹಿತಿ ಯುವತಿಯ ಮನೆಯವರಿಗೆ ತಿಳಿಸಿದ್ದರು. ಬಳಿಕ ಮನೆಯವರು ಯುವತಿಗೆ ಕರೆ ಮಾಡಿದಾಗ ಆಕೆ ಸ್ವೀಕರಿಸಿಲ್ಲ. ಆಕೆಯ ಸ್ನೇಹಿತರನ್ನು ಸಂಪರ್ಕಿಸಿದಾಗಲೂ ಯಾವುದೇ ಮಾಹಿತಿ ಸಿಕ್ಕಿಲ್ಲ.
ಯುವತಿ ಬೆಂಗಳೂರಿಗೆ ಬಂದಿರುವ ಮಾಹಿತಿಯಂತೆ ಬೆಂಗಳೂರಿನಲ್ಲೇ ನಾಪತ್ತೆಯಾಗಿರುವ ಬಗ್ಗೆ ಮನೆಯವರು ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಆ.29ರಂದು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವತಿಯನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.